ಬೋಳ ಗ್ರಾಮದ ಬೋಳಕೋಡಿಎಂಬಲ್ಲಿ ಅಶೋಕ್ ಡಿ ಸೋಜ (49) ಅವರುಮಂಚದಲ್ಲಿ ಮಲಗಿದ್ದಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಅವಿವಾಹಿತರಾಗಿದ್ದ ಇವರು 2-3 ದಿನಗಳಿಂದ ಎದೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗುರುವಾರ(ಎ.23) ಬೆಳಗ್ಗೆ ಮನೆಯವರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಕಾರಣ ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆ ಯಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.




















