ಬೆಂಗಳೂರಿನಲ್ಲಿ ರಾಜ್ಯದ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರ ಸಭೆಯು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿಯವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ರಾಜ್ಯದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಭಾಗವಹಿಸಿ ಸಮುದಾಯದ ವಿವಿಧ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಸಚಿವರಲ್ಲಿ ಮನವರಿಕೆ ಮಾಡಿದರು.
ಶೈಕ್ಷಣಿಕ, ಆರ್ಥಿಕ ಯೋಜನೆಗಳು, ಕ್ರೀಯಾ ಯೋಜನೆಗಳು, ಸಾಲ ಸೌಲಭ್ಯಗಳ ಸಹಿತ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ನಾರಾಯಣಗುರು ಅಭಿವೃದ್ಧಿ ನಿಗಮ, ಶ್ರೀ ವಿಶ್ವಕರ್ಮ, ಉಪ್ಪಾರ, ಕುಂಬಾರ ಸೇರಿದಂತೆ ರಾಜ್ಯದ ಹಲವು ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರುಗಳು ಭಾಗವಹಿಸಿದ್ದರು.




















