ಸಮಾಜಸೇವಕರಾಗಿದ್ದ ಸುಂದರ ಶಿರೂರು ( 72 ) ಅವರು ಹೃದಯಘಾತದಿಂದ ಶುಕ್ರವಾರ ನಿಧನರಾದರು. ಕುದುರೆಮುಖ ಕಂಪೆನಿಯಲ್ಲಿ ಸೇವೆಸಲ್ಲಿಸಿ ನಿವೃತ್ತರಾಗಿ ಹೆಬ್ರಿಯಲ್ಲಿ ವಾಸವಿದ್ದರು. ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದ ಸುಂದರ ಶೀರೂರು ಕಾಂಗ್ರೆಸ್ ಇಂಟಕ್ ವಿಭಾಗದ ಅಧ್ಯಕ್ಷರಾಗಿ ಬಳಿಕ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬರು ಹೆಣ್ಣು ಮಕ್ಕಳಿದ್ದಾರೆ.ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಕುಮಾರ್ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಮುದ್ರಾಡಿ ಮಂಜುನಾಥ ಪೂಜಾರಿ, ಮುನಿಯಾಲು ಗೋಪಿನಾಥ ಭಟ್ ಸಹಿತ ಹಲವರು ಸಂತಾಪ ಸೂಚಿಸಿದ್ದಾರೆ.

























