Sunday, April 26, 2026
Google search engine
Homeಕಾರ್ಕಳಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದು ಕಡ್ಡಾಯ: ನಿತ್ಯ 10-15 ನಿಮಿಷ ಮೀಸಲು; ಮಕ್ಕಳ ಮೊಬೈಲ್ ಮೋಹ...

ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದು ಕಡ್ಡಾಯ: ನಿತ್ಯ 10-15 ನಿಮಿಷ ಮೀಸಲು; ಮಕ್ಕಳ ಮೊಬೈಲ್ ಮೋಹ ಬಿಡಿಸಲು ಈ ಕ್ರಮ

ಇಂದಿನ ಡಿಜಿಟಲ್ ಯುಗ ದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲ ತಾಣಗಳ ಅತಿಯಾದ ಬಳಕೆಯಿಂದಾಗಿ ದೈಹಿಕ ಚಟು ವಟಿಕೆ ಹಾಗೂ ಏಕಾಗ್ರತೆಯ ಕೊರತೆ ಎದುರಿಸುತ್ತಿರುವು ದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಮಕ್ಕಳನ್ನು ಮೊಬೈಲ್ ಮೋಹದಿಂದ ಹೊರ ತರುವ ಆಶಯದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ಬಳಿಕ 10-15 ನಿಮಿಷಗಳ ಕಾಲ ಕನ್ನಡ ದಿನ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ.

ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಜತೆಗೆ ಸರಕಾರದ ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ವಸತಿ ಶಾಲೆಗಳು, ನಿಲಯಗಳು, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪ್ರಾರ್ಥನೆ ಬಳಿಕ ಕನ್ನಡ ದಿನಪತ್ರಿಕೆಗಳನ್ನು ಓದಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಅತಿಯಾದ ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಜ್ಞಾಪಕ ಶಕ್ತಿಯ ಕೊರತೆ, ಶ್ರವಣ ದೋಷ ಮತ್ತು ದೈಹಿಕ ಚಟುವಟಿಕೆಯಲ್ಲಿ ಆಸಕ್ತಿ ಇಲ್ಲದಿರುವ ಲಕ್ಷಣಗಳು ಕಂಡು ಬರುತ್ತಿವೆ. ಇದರ ನಿಯಂತ್ರಣಕ್ಕಾಗಿ ಶಾಲೆಗಳಲ್ಲಿ ನಿತ್ಯವೂ ಕನ್ನಡ ದಿನಪತ್ರಿಕೆಗಳನ್ನು ಓದಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗವು ಶಾಲಾ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿತ್ತು.

ಮುಂದಿನ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ದಿನ ಪತ್ರಿಕೆ ಓದಲು ಸಮಯ ನಿಗದಿ ಮಾಡಿ ದೈನಂದಿನ ಅವಧಿ ಹಂಚಿಕೆ ಮಾಡಲಾಗುತ್ತದೆ.ಇತ್ತೀಚೆಗೆ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿತ್ತು. ಕೇರಳದ ಸರಕಾರವೂ ತನ್ನ ಶಾಲಾ ಕೊಠಡಿಗಳಲ್ಲಿ ದಿನಪತ್ರಿಕೆ ಲಭ್ಯವಾ ಗುವಂತೆ ಮಾಡುವ ಯೋಜನೆಯನ್ನು ಜಾರಿಗೆ ತಂದಿದೆ.

ಎಲ್ಲ ಶಾಲೆಗಳಲ್ಲೂ ಅನುಷ್ಠಾನವಾಗಲಿ
ಮಕ್ಕಳ ರಕ್ಷಣ ಆಯೋಗದ ಮಾಜಿ ಅಧ್ಯಕ್ಷ ಶಶಿಧರ್ ಕೋಸಂಬೆ ಮಾತನಾಡಿ, ಕಳೆದ ಡಿಸೆಂಬರ್ ನಲ್ಲಿ ಶಾಲೆಗಳಲ್ಲಿ ಕನ್ನಡ ಪತ್ರಿಕೆಗಳನ್ನು ಓದುವುದನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಿ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿತ್ತು. ಇದಕ್ಕೆ ಸರಕಾರ ಸ್ಪಂದಿಸಿದ್ದು, ರಾಜ್ಯವ್ಯಾಪಿ ಎಲ್ಲ ಶಾಲೆ, ವಸತಿ ಶಾಲೆಗಳಲ್ಲೂತ್ವರಿತ ಅನು ಷಾನಕ್ಕೆ ಕ್ರಮ ಕೈಗೊಳಬೇಕೆಂದು ಮನವಿ ಮಾಡಿದ್ದಾರೆ.

ಜಾಹೀರಾತು
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments