ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸಂತ ಫ್ರಾನ್ಸಿಸ್ ಆಂಗ್ಲಮಾಧ್ಯಮ ಶಾಲೆ ಉದ್ಯಾವರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17 ರ ವಯೋಮಿತಿಯ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾದ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಸುದೀಕ್ಷಾ ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಸುದೀಕ್ಷಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಉಳಿದಂತೆ ಏಳನೇ ತರಗತಿಯ ಶಾರ್ವಿ ಹಾಗೂ ಎಂಟನೇ ತರಗತಿಯ ಅದ್ವಿತ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಮತ್ತು ಜೇಸಿಐ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ತರಬೇತಿಯನ್ನು ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರಾದ ಜೆಸಿ ಸುಧಾಕರ್ ಪೂಜಾರಿ ಕಾರ್ಕಳ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಜೆಸಿಐ ಕಾರ್ಕಳ ರೂರಲ್ ಅಧ್ಯಕ್ಷರಾದ ಜೆಸಿ ಅರುಣ್ ಮಾಂಜ, ಜೆಸಿಐ ಕಾರ್ಕಳ ರೂರಲ್ ಪೂರ್ವಾಧ್ಯಕ್ಷರು ಕಾರ‍್ಯಕ್ರಮದ ಸಂಯೋಜಕರಾದ ಜೆಸಿ ವೀಣಾ ರಾಜೇಶ್, ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ಸಂತೋಷ್ ಬಂಗೇರ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಪ್ರೋ| ಗೀತಾ.ಜಿ. ಇವರು ಸ್ವಾಗತಿಸಿದರು. ಜೇಸಿ ವೀಣಾ ರಾಜೇಶ್ ವಂದಿಸಿದರು. ಕು.ದೀಪಾ ಇವರು ಕಾರ್ಯಕ್ರಮ ನಿರೂಪಿಸಿದರು.
ಬಜಗೋಳಿ ಅಪ್ಪಾಯಿ ಶ್ರೀ 1008 ಅನಂತನಾಥ ಸ್ವಾಮಿ ಬಸದಿಯ ಸಭಾಂಗಣದಲ್ಲಿ ಬಜಗೋಳಿ ಜೈನ ಮಿಲನ್ ಮತ್ತು ಯುವ ಜೈನ್ ಮಿಲನ್ ಸಹಯೋಗದಲ್ಲಿ 79 ನೇ ಸ್ವಾತಂತ್ರ ದಿನಾಚರಣೆ ಹಾಗೂ ಆಟಿದ ಕೂಟ ಕಾರ್ಯಕ್ರಮ ಆ.15 ರಂದು ಜರುಗಿತು.
ಅತಿಥಿಗಳು ದೀಪವನ್ನು ಪ್ರಜ್ವಲಿಸಿ ಚೆನ್ನೆಮಣೆಗೆ ಕಾಯಿ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುನಿರಾಜ್ ರೆಂಜಾಳ ಅವರು ಆಟಿ ತಿಂಗಳಿನ ಮಹತ್ವ, ಅದರ ಹಿಂದಿರುವ ವೈಜ್ಞಾನಿಕ ಕಾರಣಗಳು, ಅಂದಿನ ಆಟಿ ತಿಂಗಳಿನ ಆಚರಣೆಗೂ ಇಂದಿನ ಆಚರಣೆಗೂ ಇರುವ ವ್ಯತ್ಯಾಸ ಇತ್ಯಾದಿಗಳನ್ನು ತಿಳಿಸುವುದರ ಜೊತೆಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಸ್ಥಳೀಯ ಜೈನರ ಪರಿಚಯ ಮತ್ತು ಪಾತ್ರವನ್ನುಸಭೆಗೆ ತಿಳಿಸಿದರು.
ಇದೇ ಕಾರ್ಯಕ್ರಮದಲ್ಲಿ ಅನಾಥ ಶ್ವಾನ ಹಾಗೂ ಗೋವುಗಳಿಗಾಗಿ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ನಡೆಸುತ್ತಿರುವ ವೀರಾಂಜಯ ಜೈನ್ ರನ್ನು ಮಿಲನ್ ಅಧ್ಯಕ್ಷರಾದ ವರ್ಧಮಾನ್ ಜೈನ್ ಹಾಗೂ ಅವರ ಪುತ್ರಿ ಶ್ರದ್ದಾ ಜೈನ್ (ಅಯ್ಯೋ ಶ್ರದ್ದಾ) ನಗದು ಪುರಸ್ಕಾರ ನೀಡಿ ಗೌರವಿಸಿದರು.
ಮುಡಾರು ನಲ್ಲೂರು ಮತ್ತು ಮಾಳ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ 2024-25ರ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಪ್ರತಿಭಾನ್ವಿತ ಜೈನ ವಿದ್ಯಾರ್ಥಿಗಳನ್ನು ಹಾಗೂ ಬಸದಿಯಲ್ಲಿ ಪ್ರತಿ ಆದಿತ್ಯವಾರ ಜರಗುವ ವಿತರಾಗ ಪಾಠಶಾಲೆಯ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಜೈನ ಮುನಿಗಳ ಬಗ್ಗೆ ಜೈನ ಸಮಾಜದ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರ ಬಗ್ಗೆ ಅವಹೇಳನಕಾರಿಯಾಗಿ ಅಪಪ್ರಚಾರ ಮಾಡುತ್ತಿರುವ ಅವರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.
ನವೀನ್ ಕುಮಾರ್ ಜೈನ್ ಅವರು ಮಾತನಾಡಿ ಧರ್ಮಸ್ಥಳ ಕ್ಷೇತ್ರದಿಂದ ಹಾಗೂ ಖಾವಂದರಿಂದ ಸಮಾಜಕ್ಕೆ ಆಗುತ್ತಿರುವ ಸತ್ಕಾರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಜೈನ ಧರ್ಮದ ಬಗ್ಗೆ ಜೈನಮನಿಗಳ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಜೈನ ಸಮಾಜದ ಪ್ರತಿಕ್ರಿಯೆ ಹೇಗಿರಬೇಕು ಎಂಬುವುದರ ಜಾಗೃತಿ ಸಂದೇಶವನ್ನು ಧರ್ಮ ಚಿಂತಕರಾದ ಭರತ್ ರಾಜ್ ತಿಳಿಸಿದರು.
ಜೈನ್ ಮಿಲನ್ ಅಧ್ಯಕ್ಷರಾದ ವರ್ಧಮಾನ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮಕ್ಕೆ ಅಪ್ಪಾಯಿ ಬಸದಿಯ ಆಡಳಿತ ಮುಕ್ತೇಸರರಾದ ಸುಮ್ಮಗುತ್ತು ಜಯವರ್ಮ ಹೆಗ್ಡೆ, ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ನವೀನ್ ಕುಮಾರ್ ಜೈನ್, ಖ್ಯಾತ ಸಾಹಿತಿ ಹಾಗೂ ಚಿಂತಕ ಮುನಿರಾಜ್ ರೆಂಜಾಳ, ಭಾರತೀಯ ಜೈನ್ ಮಿಲನ್ ವಲಯ 8 ಇದರ ವಲಯ ನಿರ್ದೇಶಕರಾದ ಶ್ರೀವರ್ಮ ಅಜ್ರಿ ಅತಿಥಿಗಳಾಗಿ ಆಗಮಿಸಿದ್ದರು. ಜೈನ್ ಮಿಲನ್ ಕಾರ್ಯದರ್ಶಿ ಓಂ ಪ್ರಕಾಶ್ ಜೈನ್, ಯುವ ಜೈನ್ ಮಿಲನ್ ಅಧ್ಯಕ್ಷರಾದ ಪ್ರಧಾನ್ ಜೈನ್ ಕಾರ್ಯದರ್ಶಿ ಸಾತ್ವಿಕ್ ಜೈನ್ ಉಪಸ್ಥಿತರಿದ್ದರು.
ವಿರಾಜ್ ಜೈನ್ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಓಂ ಪ್ರಕಾಶ್ ಜೈನ್ ಸ್ವಾಗತಿಸಿದರು. ಕಾವ್ಯ ಪ್ರಮೋದ್ ಜೈನ್ ಧನ್ಯವಾದ ಮತ್ತು ಶ್ರೇಯಾಂಸ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಆಟಿ ತಿಂಗಳಿನ ಕಂದ ಮೂಲ ರಹಿತ ತಿಂಡಿ ತಿನಿಸುಗಳನ್ನು ಸವಿದರು. ‘ಹುಲ್ಸೇ ಫ್ಯಾಷನ್’ ಮೂಡಬಿದಿರೆ ಇವರ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ವಿದ್ಯಾ ವಿನುತ ಇವರ ಮಣಿಸರಗಳ ಮಾರಾಟ, ಕಾರ್ಯಕ್ರಮದ ವಿಶೇಷ ಆಕರ್ಷಣೆ ಎನಿಸಿತು.
ವ್ಯಕ್ತಿಯೋರ್ವರು ವಿದ್ಯುತ್ ತಂತಿ ಬಳಸಿ ನೇಣಿಗೆ ಶರಣಾದ ಘಟನೆ ಆ. 19 ರಂದು ಹಿರ್ಗಾನದ ಸ್ವಾಗತ್ ವೈನ್ಸ್ ಪಕ್ಕದ ಕಟ್ಟಡದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಹಿರ್ಗಾನ ಗ್ರಾಮದ ಕಾನಾಂಗಿ ನಿವಾಸಿ ಮಂಜುನಾಥ ಎಂದು ಗುರ್ತಿಸಲಾಗಿದ್ದು, ಇವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಕಾರಣ ಅಥವಾ ಇನ್ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿದ್ದಾರೆ.
ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ -ವಿಹಾರ-ಆಚಾರ-ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ವಿಶೇಷ ತರಬೇತಿ ಕಾರ್ಯಕ್ರಮದ ಮೊದಲ ತರಬೇತಿ ಕಾರ್ಯಕ್ರಮ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು,ಕಾಬೆಟ್ಟು ಕಾರ್ಕಳ ಇಲ್ಲಿ ಯಶಸ್ವಿಯಾಗಿ ನಡೆಯಿತು.
ತರಬೇತಿಯನ್ನು ಜೆಸಿಐ ಇಂಡಿಯಾ ರಾಷ್ಟ್ರೀಯ ತರಬೇತುದಾರಾದ ಡಾ.ವಿಜಯ್ ನೆಗಳೂರ್ ನಡೆಸಿಕೊಟ್ಟರು. ತರಬೇತಿಯಲ್ಲಿ 110 ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಆರೋಗ್ಯಕರ ಆಹಾರ ಪದ್ಧತಿ, ಸಕಾರಾತ್ಮಕ ಜೀವನ ಶೈಲಿ, ಶಿಸ್ತಿನ ನಡೆ-ನುಡಿ ಹಾಗೂ ಒಳ್ಳೆಯ ಚಿಂತನೆಗಳ ಮಹತ್ವವನ್ನು ಅನುಭವಾತ್ಮಕ ಚಟುವಟಿಕೆಗಳ ಮೂಲಕ ಕಲಿತುಕೊಂಡರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಜೊತೆಗೆ ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ.
ಕಾರ್ಕಳ ತಾಲೂಕಿನ ಬೆಳ್ಮಣ್, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರೋಪಾಯಗಳನ್ನು ಒದಗಿಸುವುದು ತುಂಬಾ ಅವಶ್ಯಕವಾಗಿರುವುದನ್ನು ಮನಗಂಡ ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ರವರು ವಿಧಾನ ಸಭಾ ಅಧಿವೇಶನ ಸಂದರ್ಭದಲ್ಲಿ ಮಾನ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮನವಿ ಸಲ್ಲಿಸಿದ್ದಾರೆ.
ಪ್ರಾಕೃತಿಕ ವಿಕೋಪದಿಂದ, ಪ್ರಮುಖವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂದಿಸಿದಂತೆ ಸಚಿವರಿಗೆ ಮಾಹಿತಿ ನೀಡಿ, ತುರ್ತು ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಆದಷ್ಟೂ ಶೀಘ್ರವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿರುವುದಾಗಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಜೊತೆಗೆ ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ.
ಕಾರ್ಕಳ ತಾಲೂಕಿನ ಬೆಳ್ಮಣ್, ಸೂಡ, ನಂದಳಿಕೆ, ರೆಂಜಾಳ, ಬೈಲೂರು ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರೋಪಾಯಗಳನ್ನು ಒದಗಿಸುವುದು ತುಂಬಾ ಅವಶ್ಯಕವಾಗಿದೆ. ಇದರ ಜೊತೆಗೆ ಕಳೆದು 3 ತಿಂಗಳುಗಳಿಂದ ನಿರಂತರ ಮಳೆಯಿಂದಾಗಿ ಕೆಲವು ಕಡೆ ಕ್ಷೇತ್ರದ ರಸ್ತೆಗಳು ತೀರ ಹದಗೆಟ್ಟಿದ್ದು, ಇದರ ದುರಸ್ತಿಯು ಅತ್ಯಂತ ಅವಶ್ಯಕವಾಗಿದೆ.
ಪ್ರಾಕೃತಿಕ ವಿಕೋಪದಿಂದ ಪ್ರಮುಖವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂದಸಿದಂತೆ ತಾಲೂಕು ಆಡಳಿತ ಹಾನಿಯ ಕುರಿತು ಅಂದಾಜು ವೆಚ್ಚದ ಮಾಹಿತಿಯನ್ನು ಕ್ರೂಢಿಕರಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಾಗೂ ಸರಕಾರ ಕೂಡಲೇ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆ ಮಾಡಬೇಕೆಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರದ ಹಣಕಾಸು ಸಚಿವಾಲಯದ ಕಂದಾಯ, ವೆಚ್ಚ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ಇಲಾಖೆಗಳ ಅಧಿಕೃತ ಭಾಷಾ ಸಮಿತಿಯ ಹಿಂದಿ ಸಲಹಾ ಸಮಿತಿಗೆ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ದಯಾನಂದ ಎನ್ ಬಾಯಾರ್ ಇವರು ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇವರು ಮೂಲತಃ ಕಾಸರಗೋಡು ಜಿಲ್ಲೆಯ ಬಾಯಾರಿನವರಾಗಿದ್ದಾರೆ.
ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್ ಸಂಜೆಯೊಳಗೆ ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು. ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು. ಈ ವೇಳೆ ಅಧಿಕಾರಿಗಳು ಅದು 2023ರ ಮೇನಲ್ಲಿ ಮಾತನಾಡಿದ್ದ ವಿಡಿಯೋ ಅಂತ ಗೃಹ ಸಚಿವರ ಗಮನಕ್ಕೆ ತಂದರು.
ಇನ್ನೂ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ವಿಧಾನ ಸಭೆಯಲ್ಲೂ ಆಗ್ರಹ ಕೇಳಿಬಂದಿತು. ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡುತ್ತಾ, ಸಿಎಂ 24 ಕೊಲೆ ಮಾಡಿದ್ದಾರೆಂಬ ಆರೋಪ ಬಗ್ಗೆ ಪ್ರಸ್ತಾಪ ಮಾಡಿದರು. ಏನ್ ನಡೀತಿದೆ ರಾಜ್ಯದಲ್ಲಿ, ಸಿಎಂ ಮೇಲೆಯೇ ಆಪಾದನೆ ಮಾಡಿದ್ದಾರೆ. ಹಾಗಾದರೆ ಸಿಎಂ ಕೊಲೆಗಾರರಾ? ಆರೋಪ ಮಾಡಿದವರ ಮೇಲೆ ಕ್ರಮ ಏನು? ನೀವು ಮೌನವಾಗಿದ್ರೆ ಏನ್ ತಿಳ್ಕೊಳ್ಳೋದು ನಾವು? ಅಂತ ಪ್ರಶ್ನೆ ಮಾಡಿದರು.
ಇದಕ್ಕೆ ದನಿಗೂಡಿಸಿದ ಶಾಸಕ ಸುರೇಶ್ ಕುಮಾರ್, ಸಿಎಂ ಮೇಲೆ ಧೈರ್ಯವಾಗಿ ಆರೋಪ ಮಾಡಿದ್ದಾನೆ ಆವ್ಯಕ್ತಿ, ಸರ್ಕಾರ ಇದನ್ನು ಹೇಗೆ ಸಹಿಸಿಕೊಳ್ಳುತ್ತೆ? ಸರ್ಕಾರ ಯಾಕೆ ಸುಮ್ಮನಿದೆ? ಅಂತ ಪ್ರಶ್ನಿಸಿದರು.
ಇದಕ್ಕೆ ಉತ್ತರ ಕೊಟ್ಟ ಪರಮೇಶ್ವರ್ ಸರ್ಕಾರ ಅಷ್ಟೊಂದು ಹೆಲ್ಪ್ ಲೆಸ್ ಆಗಿದೆ ಅನ್ಕೊಂಡಿದ್ದೀರಾ? ಅಂತ ತಿರುಗೇಟು ಕೊಟ್ಟರು. ಈ ವೇಳೆ ಸುನೀಲ್ ಕುಮಾರ್ ದೇಶದ ನಂ.1 ಗೃಹ ಸಚಿವರು ಕ್ರಮ ತಗೊಳ್ಳಿ ಅಂತ ಕಾಲೆಳೆದರು. ನಂತ್ರ ಮಾತು ಮುಂದುವರಿಸಿದ ಪರಂ, ಆ ವ್ಯಕ್ತಿ ವಿರುದ್ಧ ಹಲವು ಕೇಸ್ ಇವೆ, ಆ ವ್ಯಕ್ತಿ ಹೆಸರು ಹೇಳಲ್ಲ. ಇಂಥ ವ್ಯಕ್ತಿಯನ್ನು ಸಮಾಜದಲ್ಲಿ ಹೀಗೇ ಸುಮ್ಮನೆ ಬಿಡಲ್ಲ. ಕಾನೂನು ಚಲಾಯಿಸಿ ಕ್ರಮ ತಗೋತೀವಿ. ಏನು ಕ್ರಮ ತಗೋಬೇಕೋ ತಗೋತೀವಿ. ಈಗಾಗಲೇ ಕ್ರಮ ತಗೊಳ್ಳೋಕ್ಕೆ ಪೊಲೀಸರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು.