Home Blog Page 82

ಕಾರ್ಕಳ:ಮಗು ಆದ ಕಾರಣಕ್ಕೆ ಕೆಲಸಕ್ಕೆ ಹೋಗಲಿಕ್ಕೆ ಆಗುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

0

ಕಾರ್ಕಳ:ಮಗು ಆದ ಕಾರಣಕ್ಕೆ ಕೆಲಸಕ್ಕೆ ಹೋಗಲಿಕ್ಕೆ ಆಗುವುದಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಈದು ನಿವಾಸಿ ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡವರು.ಅವರು ಹೊಸ್ಮಾರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಥಿತಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.

ಪ್ರಸನ್ನರವರು 2022ರಲ್ಲಿ ವಿವಾಹವಾಗಿದ್ದು,10 ತಿಂಗಳ ಹೆಣ್ಣು ಮಗು ಇತ್ತು.ಅವರು ತನ್ನ ತಾಯಿಗೆ ಕರೆಮಾಡಿ ನನಗೆ ಗಂಡನ ಮನೆಯವರು ಒಳ್ಳೆ ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ,ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುವುದಿಲ್ಲ ಎಂದು ಹೇಳುತ್ತಿದ್ದರು. ಈ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ಪ್ರಸನ್ನಾ ರವರು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ತಾನು ಕಷ್ಟಪಟ್ಟು ಓದಿದ್ದರೂ ತನಗೆ ಮಗು ಆದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದರು. ಇದೆ ಕಾರಣಕ್ಕೆ ನ.6 ರಂದು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಕಳ:ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾ.ಸುರೇಶ್ ರೈ

0

ಕಾರ್ಕಳ:ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ ಡಾ.ಸುರೇಶ್ ರೈ

ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯನ್ನು ಶ್ರೇಷ್ಟತೆಯ ಕಡೆಗೆ ಕೊಂಡೊಯ್ಯುವ ಶ್ರೇಷ್ಟ ಶಿಕ್ಷಣ ಸಂಸ್ಥೆಯನ್ನಾಗಿಸಲು ಪಣ

ಕಾರ್ಕಳ:ಕಾರ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ನೂತನ ಪ್ರಾಚಾರ್ಯರಾಗಿ ಡಾ. ಸುರೇಶ್ ರೈ ಅಧಿಕಾರ ಸ್ವೀಕರಿಸಿದ್ದಾರೆ.ಡಾ.ಚಂದ್ರಾವತಿ ಅವರು ಡಾ.ಸುರೇಶ್ ರೈ ಅವರಿಗೆ ಅಧಿಕಾರವನ್ನು ಅಧಿಕೃತವಾಗಿಹಸ್ತಾಂತರಿಸಿದರು.

ಇತಿಹಾಸ ಪ್ರಾಧ್ಯಾಪಕರಾದ ಅವರು ಮೂವತ್ತೆರಡು ವರ್ಷಗಳಿಗಿಂತಲೂ ಹೆಚ್ಚಿನ ಶಿಕ್ಷಣ ಅನುಭವವನ್ನು ಹೊಂದಿದ್ದಾರೆ. ಖ್ಯಾತ ಶಿಕ್ಷಣ ತಜ್ಞರೂ ಆಗಿರುವ ಅವರು ಈ ಹಿಂದೆ ತೇಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾಗಿ ದಕ್ಷ ಆಡಳಿತಗಾರರಾಗಿ ಕರ್ತವ್ಯ ನಿರವಹಿಸಿದ್ದಾರೆ.

ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು “ಈ ಕಾಲೇಜನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಹತ್ತಿರವಾಗಿ ಕೆಲಸ ಮಾಡುವ ನಿರೀಕ್ಷೆಯಲ್ಲಿ ಇದ್ದೇನೆ” ಎಂದು ಹೇಳಿದರು.

ಬೈಲೂರು:ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

0

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

ಬೈಲೂರು: ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರು ಇದರ ನೇತೃತ್ವದ ಬಾಲಕರ ವಾಲಿಬಾಲ್ ತಂಡ ನವಂಬರ್ 4 ಮತ್ತು 5 ರಂದು ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ರಾಜ್ಯಮಟ್ಟದ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆಲವು ಸಾಧಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದ ಮಣಿಕಂಠರವರಿಗೆ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಲಭಿಸಿದೆ. ಸಾಧಕ ತಂಡದ ಸದಸ್ಯರಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಸಂಸ್ಥೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ತಂಡದ ಯಶಸ್ಸಿನ ಹಿಂದೆ ಹಗಲಿರುಳು ದುಡಿದ, ದೈಹಿಕ ಶಿಕ್ಷಣ ನಿರ್ದೇಶಕ ಫೆಡ್ರಿಕ್ ರೇಬೆಲ್ಲೂ ಹಾಗೂ ಕಾಲೇಜಿನ ಕ್ರೀಡಾ ಸಂಚಾಲಕ-ಉಪನ್ಯಾಸಕ ರತ್ನಾಕರ ಪೂಜಾರಿ, ತರಬೇತುದಾರರಾದ ಮಹಮ್ಮದ್ ಶೇಕ್ ಅಯಾನ್, ಮಹಮ್ಮದ್ ಶೇಕ್ ಅಮನ್ ರವರಿಗೆ ಸಂಸ್ಥೆ ಅಭಿವಂದನೆ ಸಲ್ಲಿಸಿದೆ.

ಕಾರ್ಕಳ:ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಲೆನಿಶಾ ಮೆಂಡೋನ್ಸಾ ಹಾಗೂ ಝುಬೇಧ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಕಾರ್ಕಳ:ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಲೆನಿಶಾ ಮೆಂಡೋನ್ಸಾ ಹಾಗೂ ಝುಬೇಧ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕಾರ್ಕಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಮತ್ತು ಶಿಶುಪಾಲನಾ ಯೋಜನೆ ಕಾರ್ಕಳ ಇವರ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಾದ ಲೆನಿಶಾ ಮೆಂಡೋನ್ಸಾ ಹಾಗೂ ಝುಬೇಧ ಅವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಸಂಸ್ಥೆಯ ವಿಜ್ಞಾನ ಶಿಕ್ಷಕರುಗಳಾದ ಶ್ರೀಮತಿ ಜೋಸ್ನಾ ಸ್ನೇಹಲತಾ, ಶ್ರೀಮತಿ ಯಶಸ್ವಿನಿ ಹಾಗೂ ವರ್ಗೀಸ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಬಜಗೋಳಿ:ರಾಕ್ ಬಾಯ್ಸ್ ವತಿಯಿಂದ ಪ್ರಸಾದ್ ಮೂಲ್ಯ ಚಿಕಿತ್ಸೆಗೆ ನೆರವು

0

ಬಜಗೋಳಿ:ರಾಕ್ ಬಾಯ್ಸ್ ವತಿಯಿಂದ ಪ್ರಸಾದ್ ಮೂಲ್ಯ ಚಿಕಿತ್ಸೆಗೆ ನೆರವು

ರಾಕ್ ಬಾಯ್ಸ್ ಬಜಗೋಳಿ ವತಿಯಿಂದ ಪ್ರಸಾದ್ ಮೂಲ್ಯ ಎಂಬ ಬಾಲಕನ ಡಯಾಲಿಸಿಸ್ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.

ಈದು ಬಂಟರ ಸಂಘ ನೂತನ ಅಧ್ಯಕ್ಷರಾಗಿ ಸುರೇಶ್ ಕುಮಾರ್ ಶೆಟ್ಟಿ

0

ಬಂಟರ ಸಂಘ ಗ್ರಾಮ ಸಮಿತಿ, ಈದು ಬಂಟರ ಸಂಘ ಈದು ಇದರ ನೂತನ ಅಧ್ಯಕ್ಷರಾಗಿ ಹೊಸ್ಮಾರು ಸೂರ್ಯ ಸುರೇಶ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಸಹ್ರಾಗಿ ನಡವೆ ಜಗನ್ನಾಥ್ ಶೆಟ್ಟಿ,ಉಪಾಧ್ಯಕ್ಷರಾಗಿ ಸುನೀತಾ ಶೆಟ್ಟಿ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ಶುಭಕರ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ದಿವಾಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಗ್ರಾಮ ಎಲ್ಲಾ ಬಂಟ ಬಾಂಧವರು ಉಪಸ್ಥಿತರಿದ್ದರು

ನಿಟ್ಟೆ ತಾಂತ್ರಿಕ ಕಾಲೇಜು ಹಾಗೂ ಅದರ ಹಳೆವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನಡೆದ ಎಕ್ಸ್ಪ್ರೊ 2024-25

0

ನಿಟ್ಟೆ ತಾಂತ್ರಿಕ ಕಾಲೇಜು ಹಾಗೂ ಅದರ ಹಳೆವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನಡೆದ ಎಕ್ಸ್ಪ್ರೊ 2024-25

ನಿಟ್ಟೆ:ಪ್ರಪಂಚದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಅನ್ವೇಷಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಸಾಸ್ಕೆನ್ ಟೆಕ್ನಾಲಜೀಸ್ ಲಿಮಿಟೆಡ್ನ ಕ್ಯಾಂಪಸ್ ಕನೆಕ್ಟ್ ಮುಖ್ಯಸ್ಥ ಗುರುರಾಜ್ ರಾವ್ ಎಚ್ ಅಭಿಪ್ರಾಯಪಟ್ಟರು.

ಅವರು ಅ.29ರಂದು ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ತನ್ನ ಹಳೆಯ ವಿದ್ಯಾರ್ಥಿಗಳ ಸಂಘವಾದ ‘ವೆನಮಿತಾ’ದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ಯುಜಿ ಪ್ರಾಜೆಕ್ಟ್ಸ್, ಎಕ್ಸ್ಪ್ರೊ 2024-25ರ ವಾರ್ಷಿಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮವು ವಿದ್ಯಾರ್ಥಿ ಯೋಜನೆಗಳನ್ನು ಪ್ರದರ್ಶಿಸುವ ಮತ್ತು ತಾಂತ್ರಿಕ ನಾವೀನ್ಯತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದ್ದು ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕೌಶಲ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವದ ಚಿಂತನೆಯನ್ನು ಪ್ರತಿಪಾದಿಸುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರವನ್ನು ಉತ್ತೇಜಿಸುವ ಕಲಿಕೆಯ ವಾತಾವರಣವನ್ನು ಬೆಳೆಸುವ ಸಂಸ್ಥೆಯ ಬದ್ಧತೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಈ ಅವಕಾಶಗಳನ್ನು ಗಂಭೀರವಾಗಿ ಪರಿಗಣಿಸಿ ಈ ಯೋಜನೆಗಳಿಗೆ ಕೆಎಸ್ಸಿಎಸ್ಟಿ ಧನಸಹಾಯಕ್ಕೆ ಅರ್ಜಿ ಸಲ್ಲಿಸುವಂತೆ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಪ್ರದರ್ಶನದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ವಿವಿಧ ಇಂಜಿನಿಯರಿಂಗ್ ವಿಭಾಗಗಳ ಒಟ್ಟು ೩೩೩ ಯೋಜನೆಗಳನ್ನು ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಎಕ್ಸ್ ಪ್ರೋ ಆಬ್ಸ್ಟ್ರ್ಯಾಕ್ಟ್ ವಾಲ್ಯೂಮ್-೨೩ ನ್ನು ಬಿಡುಗಡೆಗೊಳಿಸಲಾಯಿತು.

ಎಕ್ಸ್ಪ್ರೊ 2024-25ರ ಸಂಯೋಜಕಿ ಡಾ.ನಯನಾ ಶೆಟ್ಟಿ ಸ್ವಾಗತಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಹರ್ಷಿತಾ ಜತ್ತಣ್ಣ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ

0

ಕಾರ್ಕಳ ಬ್ಲಾಕ್ ಕಾಂಗ್ರೇಸ್ ಕಚೇರಿ ಇಂದಿರಾ ಗಾಂಧಿ ಪುಣ್ಯಸ್ಮರಣೆ

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಶುಭದರಾವ್ ಅವರ ಅದ್ಯಕ್ಷತೆಯಲ್ಲಿ ನಡೆಯಿತು.

ಕಾಂಗ್ರೆಸ್ ಹಿರಿಯ ಮುಖಂಡ ಶೇಖರ್ ಮಡಿವಾಳ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್, ರಾಜ್ಜಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಡಿ ಆರ್ ರಾಜು ಸಂದರ್ಭೋಚಿತ ಮಾತನಾಡಿ ನುಡಿ ನಮನ ಸಲ್ಲಿಸಿದರು. ಈ ಸಂದರ್ಬದಲ್ಲಿ ಬ್ಲಾಕ್ ನಿಕಟಪೂರ್ವ ಅದ್ಯಕ್ಷ ಸದಾಶಿವ ದೇವಾಡಿಗ ಮುಖಂಡರಾದ ಸುಬಿತ್ ಕುಮಾರ್ ಎನ್, ಪ್ರಭಾಕರ್ ಬಂಗೇರ, ತಾರಾನಾಥ ಕೋಟ್ಯಾನ್, ಕಾಂತಿ ಶೆಟ್ಟಿ, ಜೊಕಿಂ ಪಿಂಟೋ, ಪುರಸಭಾ ಸದಸ್ಯರಾದ ಹರೀಶ್ ಕುಮಾರ್ ,ರೆಹಮತ್, ಮುಖಂಡರಾದ ಅಣ್ಣಪ್ಪ ನಕ್ರೆ, ಅಬ್ದುಲ್ ಸಾಣೂರು , ವಿವೇಕ್ ಶೆಣೈ, ಫಿಲಿಫ್, ಪ್ರಸನ್ನ ಶೆಟ್ಟಿಗಾರ್, ಶೋಭಾ ಮೊದಲಾದವರು ಉಪಸ್ಥಿತರಿದ್ದರು ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಿರೂಪಿಸಿ ಸ್ವಾಗತಿಸಿದರು ಸುನೀಲ್ ಭಂಡಾರಿ ಧನ್ಯವಾದವಿತ್ತರು

ಕಾರ್ಕಳ:ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ:ಉದಯ ಶೆಟ್ಟಿ ಮುನಿಯಾಲು

0

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು , ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ ಬಂದಂತಾಗಿದೆ ಎಂದರು

ಕಾರ್ಕಳ ಬ್ಲಾಕ್ ಸಮಿತಿಗೆ ಆಯ್ಕೆಯಾದ ಶುಭದ್ ರಾವ್ ಮತ್ತು ಹೆಬ್ರಿ ಬ್ಲಾಕ್ ಸಮಿತಿಗೆ ಆಯ್ಕೆಯಾದ ಗೋಪಿನಾಥ್ ಭಟ್ ಅವರುಗಳು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷದಿಂದ ದುಡಿಯುತ್ತಾ ವಿವಿಧ ಸ್ಥರಗಳ ಜವಾಬ್ದಾರಿಯನ್ನು ನಿರ್ವಹಿಸಿ ಇಂದು ಬ್ಲಾಕ್ ಅಧ್ಯಕ್ಷರುಗಳಾಗಿ ಆಯ್ಕೆಯಾಗಿರುವುದು ಇದು ಕಾರ್ಯಕರ್ತರಿಗೆ ಸಂದ ಗೌರವವಾಗಿದೆ ಎಂದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸುವ ಜವಾಬ್ದಾರಿ ಎಲ್ಲರದಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಉದಯ ಶೆಟ್ಟಿ ಮುನಿಯಾಲು ಅವರ ಮಾರ್ಗದರ್ಶನದಂತೆ ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಗೆ ನೂತನ ಅದ್ಯಕ್ಷರಾಗಿ ಭಾನು ಭಾಸ್ಕರ್ ಹಾಗೂ ಕಾರ್ಕಳ ನಗರ ಕಾಂಗ್ರೆಸ್ ಸಮಿತಿಗೆ ರಾಜೇಂದ್ರ ಕಾರ್ಕಳ ಅವರುಗಳನ್ನು ಆಯ್ಕೆ ಪ್ರಕ್ರೀಯೆ ನಡೆಯಿತು.

ಸಭೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸಿನ ನಿಕಪೂರ್ವ ಅದ್ಯಕ್ಷರಾದ ಸದಾಶಿವ ದೇವಾಡಿಗ, ನೂತನ ಅದ್ಯಕ್ಷರಾದ ಶುಭದ್ ರಾವ್, ಹೆಬ್ರಿ ಬ್ಲಾಕ್ ಅದ್ಯಕ್ಷರಾದ ಗೋಪಿನಾಥ್ ಭಟ್, ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಕಾರ್ಯದರ್ಶಿ ಉದಯ.ವಿ. ಶೆಟ್ಟಿ, ಕಜಾರ್ಜ್ ಕ್ಯಾಸ್ತಲಿನೊ, ಗ್ಯಾರಂಟಿ ಸಮಿತಿ ಅನುಷ್ಠಾನ ಸಮಿತಿಯ ಅದ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ಅನಿತಾ ಡಿಸೋಜ, ನಗರ ಮಹಿಳಾ ಕಾಂಗ್ರೆಸ್ ಘಟಕದ ಅದ್ಯಕ್ಷೆ ರೀನಾ ಡಿಸೋಜ, ಉಮೇಶ್ ರಾವ್ ಬಜಗೋಳಿ, ಎಸ್ಸಿ ಘಟಕದ ಅಣ್ಣಪ್ಪ ನಕ್ರೆ, ಅಲ್ಪ ಸಂಖ್ಯಾತ ಘಟಕದ ಶಬೀರ್ ಅಹಮ್ಮದ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ಬ್ಲಾಕ್ ಯುವ ಕಾಂಗ್ರೆಸ್ ಅದ್ಯಕ್ಷರಾದ ಯೋಗೀಶ್ ಇನ್ನಾ ಧನ್ಯವಾದವಿತ್ತರು.

ಕಾರ್ಕಳ:ಫುಟ್ಬಾಲ್ ಪಂದ್ಯಾಟದಲ್ಲಿ ವಫಾ ಸಂಶುದ್ದೀನ್ ರಾಜ್ಯಮಟ್ಟಕ್ಕೆ ಆಯ್ಕೆ

0

ಕಾರ್ಕಳ:ಫುಟ್ಬಾಲ್ ಪಂದ್ಯಾಟದಲ್ಲಿ ವಫಾ ಸಂಶುದ್ದೀನ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕರ್ನಾಟಕ ಸರಕಾರ ಹಾಗೂ ಡಾ.ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು, ನಿಟ್ಟೆ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಫಾ ಸಂಶುದ್ದೀನ್ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಮುಂದೆ ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾಟದಲ್ಲಿ ವಫಾ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾಳೆ.