Home Blog Page 63

ಕಾಂತಾವರ:ಮನೆಯ ಹಟ್ಟಿಗೆ ಬೆಂಕಿ ಬಿದ್ದು ಕಂಬಳ ಕೋಣಗಳು ಸಾವು

0

ಮನೆಯ ಹಟ್ಟಿಗೆ ಬೆಂಕಿ ಬಿದ್ದು ಕಂಬಳ ಕೋಣಗಳು ಸಾವನ್ನಪ್ಪಿದ ಘಟನೆ ಕಾಂತಾವರದಲ್ಲಿ ನಿನ್ನೆ (ಮೇ.30)  ರಂದು ನಡೆದಿದೆ.

ಬೇಲಾಡಿ ಬಾವ ಅಶೋಕಾನಂದ ಶೆಟ್ಟಿಯವರ ಮನೆಯ ಕನಹಲಗೆ ವಿಭಾಗದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹಟ್ಟಿಗೆ ಬೆಂಕಿ ತಗುಲಿದೆ

ಜ್ಞಾನಸುಧಾ:ಪ್ರತಿಭಾ ಪುರಸ್ಕಾರ-ರೂ.1ಕೋಟಿ 5ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಭಾರತೀಯ ಸೇನೆಗೆ ರೂ. 2 ಲಕ್ಷ ನೆರವು

0

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪ್ರತಿಭಾ ಪುರಸ್ಕಾರ:ರೂ.1ಕೋಟಿ 5ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ
ಭಾರತೀಯ ಸೇನೆಗೆ ರೂ. 2 ಲಕ್ಷ ನೆರವು

ಜ್ಞಾನಸುಧಾದ ಕಾರ್ಯ ಪ್ರಶಂಸನೀಯ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಗಣಿತನಗರ : ಡಾ.ಸುಧಾಕರ್ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಜ್ಞಾನಸುಧಾ ಸಂಸ್ಥೆಯು ಉತ್ತಮ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮಿಗಳನ್ನು ನಿರ್ಮಿಸುತ್ತಿರುವ ಕಾರ್ಯ ಪ್ರಶಂಸನೀಯ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಮಾದರಿ ಸಂಸ್ಥೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ನುಡಿದರು.

ಅವರು ಕಾರ್ಕಳ ಜ್ಞಾನಸುಧಾದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಕ್ಷೇತ್ರದ ಶಾಸಕ ಶ್ರೀ ವಿ. ಸುನಿಲ್ ಕುಮಾರ್‌ರವರು ಮೌಲ್ಯಗಳನ್ನು ಕೊಡುವಲ್ಲಿ ಮತ್ತು ಸಂಸ್ಕಾರ ಕೊಡುವಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಬಹಳ ದೊಡ್ಡ ಹೆಜ್ಜೆಯನ್ನಿಡುತ್ತಿದೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿಯ ಉಪಕುಲಪತಿಗಳಾದ ಪ್ರೊ.ಫೆಸರ್ ಡಾ| ಪಿ.ಎಲ್.ಧರ್ಮ ಮಾತನಾಡಿ ಯುವಮನಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಕಾರ್ಯದ ಜೊತೆಗೆ, ಜ್ಞಾನಸುಧಾ ಪರಿವಾರ ಅತ್ಯುತ್ತಮ ನಾಗರಿಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಕಾರ್ಯದಲ್ಲಿ ತನ್ನನ್ನು ಅರ್ಪಿಸಿಕೊಂಡಿದೆ ಎಂದರು.

ಸೇನೆಗೆ ನೆರವು : ಇದೇ ಸಂದರ್ಭ ಅಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನಲೆಯಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂ. 2 ಲಕ್ಷ ಮೊತ್ತವನ್ನು ಭಾರತೀಯ ಸೇನೆಗೆ ದೇಣಿಗೆಯಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ಮೂಲಕ ಹಸ್ತಾಂತರಿಸಲಾಯತು.

ಸಾಧಕರಿಗೆ ಸನ್ಮಾನ:
ಎಸ್.ಎಸ್.ಎಲ್.ಸಿ.ಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿದ ಸ್ವಸ್ತಿ ಕಾಮತ್ ಇವರಿಗೆ ಟ್ರಸ್ಟಿನ ವತಿಯಿಂದ ರೂ.2ಲಕ್ಷ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಕೆ.ಸಿ.ಇ.ಟಿ ಇಂಜಿನಿಯರಿoಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್ ಗಳಿಸಿದ ತರುಣ್ ಸುರಾನರನ್ನು, ಜೆ.ಇ.ಇ ಮೈನ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದು ಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ ರ‍್ಯಾಂಕ್ ಮತ್ತು ಬಿ.ಆರ್ಕ್ ವಿಭಾಗದಲ್ಲಿ 99.8881752 ಪರ್ಸಂಟೈಲ್ (ಗಣಿತಶಾಸ್ತçದಲ್ಲಿ 100 ಪರ್ಸಂಟೈಲ್) ಪಡೆದು ಇ.ಡಬ್ಲು.ಎಸ್. ವರ್ಗದಲ್ಲಿ 6ನೇ ಮತ್ತು ಜನರಲ್ ಮೆರಿಟ್ ವಿಭಾಗದಲ್ಲಿ 83ನೇ ರ‍್ಯಾಂಕ್ ಪಡೆದ ಮನೋಜ್ ಕಾಮತ್‌ರವರನ್ನು, ಜೊತೆಗೆ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿಯ ಸಾಧಕರನ್ನೂ ಅಭಿನಂದಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ 2024-25ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ರೂ.64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಉಪನ್ಯಾಸಕರಿಗೆ ತಲಾ ರೂ ಒಂದು ಸಾವಿರದಂತೆ ರೂ. 7 ಲಕ್ಷದ 21 ಸಾವಿರವೂ ಸೇರಿದಂತೆ ಒಟ್ಟು ರೂ. 1 ಕೋಟಿ 5ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಗೌರವ ಸನ್ಮಾನ: ಈ ವರ್ಷ ಸಂಸ್ಥೆಯಲ್ಲಿ ಹತ್ತು ವರ್ಷಗಳ ಸೇವೆ ಪೂರ್ಣಗೊಳಿಸಿದ 10 ಮಂದಿ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರಿಗೆ ತಲಾ 10ಸಾವಿರ ನಿಶ್ಚಿತ ಠೇವಣಿಯನ್ನು ನೀಡಲಾಯಿತು. ದೇವಸ್ಥಾನದ ಸೇವೆಯಲ್ಲಿ ತೊಡಗಿಸಿಕೊಂಡ ವೇದಮೂರ್ತಿ ಭಗೀರಥ ಭಟ್ ಮತ್ತು ಶ್ರೀ ವಿಷ್ಣು ಮೂರ್ತಿ ಭಟ್‌ರವರನ್ನು ಹಾಗೂ ಶ್ರೀ ಮಹಾಗಣಪತಿ ದೇವಾಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕಮಲಾಕ್ಷ ನಾಯಕ್‌ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭ 2011 ರಿಂದ 2025ರವರಗೆ ಜ್ಞಾನಸುಧಾ ಬೆಳೆದು ಬಂದ ದಾರಿಯ ಹೊತ್ತಗೆ ‘ಅಗಣಿತ-ಸುಧಾಸ್ಪರ್ಷ’ವನ್ನು ಹಾಗೂ ಜ್ಞಾನಸುಧಾ ಪತ್ರಿಕೆ-39ನ್ನು ಬಿಡುಗಡೆಗೊಳಿಸಲಾಯಿತು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.

 

ಉಡುಪಿ ಎಸ್ಪಿ ಡಾ. ಅರುಣ್ ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಉಡುಪಿ ಜಿಲ್ಲೆಗೆ ಎಸ್ಪಿ ಹರಿರಾಂ ಶಂಕರ್

0

ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್ ಅವರನ್ನು ನೇಮಿಸಿದೆ

ಕ್ರೈಸ್ಟ್ ಕಿಂಗ್: ಪ್ರಥಮ ಪಿಯುಸಿ ಆರಂಭೋತ್ಸವ

0

ಕ್ರೈಸ್ಟ್ ಕಿಂಗ್: ಪ್ರಥಮ ಪಿಯುಸಿ ಆರಂಭೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಆರಂಭೋತ್ಸವ ಸಂಸ್ಥೆಯ ನೂತನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಮುಖ್ಯಶಿಕ್ಷಕ ಹಾಗೂ ವಾಗ್ಮೀ ಮುನಿರಾಜ ರೆಂಜಾಳ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ದೀಪ ಬೆಳಗಿ ಪ್ರಥಮ ಪಿಯುಸಿ ಆರಂಭೋತ್ಸವನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಅವರು “ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು, ಒಳ್ಳೆಯ ಮನುಷ್ಯರಾಗಿ, ಒಳ್ಳೆಯ ಬದುಕನ್ನು ಬದುಕಬೇಕು. ಅದರೊಂದಿಗೆ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಜೊತೆಗೆ ಪ್ರೀತಯಿಂದ ಮಾತನಾಡಬೇಕು, ಆ ಮೂಲಕ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಮೂಡಿಸಬೇಕು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಉದ್ಯಮಿ ವಿವೇಕಾನಂದ ಶೆಣೈ ಅವರು ಮಾತನಾಡಿ “ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಡುವ ಪರಿಶ್ರಮದ ಬಗ್ಗೆ ಅರಿತುಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವುದರಲ್ಲಿಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಈ ಕಾರ್ಕಳಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದು ಹೇಳಿದರು.

ಶಿಕ್ಷಕ –ರಕ್ಷಕ ಸಂಘದ ಮಾಜೀ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಹಾಲಿ ಅಧ್ಯಕ್ಷ ಪ್ರಕಾಶ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಆಪ್ತ ಸಮಾಲೋಚಕರಾದ ಡಾ.ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ನೀಟ್ ಸಂಯೋಜಕ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮೌನೇಶ್ವರ ಆಚಾರ್ಯ ಪ್ರಸ್ತಾವನೆಗೈದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್, ಕೆಸಿಇಟಿ ಪರೀಕ್ಷೆಯ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 57ನೇ ರ‍್ಯಾಂಕ್ ಹಾಗೂ ರಾಷ್ಟ್ರಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ 99.69 ಪರ್ಸೆಂಟೈಲ್ ಪಡೆದ ಸಂಸ್ಥೆಯ ಸಾಧಕ ವಿದ್ಯಾರ್ಥಿ ಅನಂತ್ ಎನ್.ಕೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಸ್ವಾಗತಿಸಿ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಮ್ಯ ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಮೇ.30:ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

0

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ

ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

ಗಣಿತ ನಗರ : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು 30.05.2025ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆ ತಲಾ ರೂ. ಒಂದು ಸಾವಿರದಂತೆ ರೂ. 7 ಲಕ್ಷದ 21 ಸಾವಿರ ಸೇರಿದಂತೆ ಒಟ್ಟು ರೂ. 1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೋ.ಪಿ. ಎಲ್. ಧರ್ಮರವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹತ್ತರೊಳಗಿನ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22 ರಂದು ನಡೆಯುವ ಎರಡನೇ ಹಂತದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಒಟ್ಟು 1 ಕೋಟಿ 79 ಲಕ್ಷದ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ರೂ. 51 ಲಕ್ಷದ 64 ಸಾವಿರವನ್ನು ನೀಡಲಾಗಿರುವುದನ್ನು ಸ್ಮರಿಸಿಕೊಳ್ಳ ಬಹುದು.

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

0

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 05.00 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ತಿಳಿಸಿದ್ದಾರೆ

ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ವಿ.ಸುನಿಲ್‌ ಕುಮಾರ್‌ ರವರು ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಕಾರಣ ಇದೀಗ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.05.00 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತೆ.

ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

0

ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದರು.

ಬಿಜೆಪಿಯ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಸ್‌ಟಿ ಸೋಮಶೇಖರ್ ಅವರು,ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು, ಒಳ್ಳೆಯದಾಯ್ತು ಎಂದರು.

1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿ ಇದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯರ‍್ಯಾರೋ ಇದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಹೇಳಿದರು.

ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.

ಕೆಸಿಇಟಿಯಲ್ಲಿ ಕ್ರೈಸ್ಟ್ ಕಿಂಗ್ ಸಾಧನೆ

0

ಕೆಸಿಇಟಿಯಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಅನಂತ್ ಎನ್.ಕೆ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 57 ನೇ ರ‍್ಯಾಂಕ್
ಸಂಸ್ಥೆಗೆ ಐದು ನೂರರ ಒಳಗಡೆ ಎರಡು ರ‍್ಯಾಂಕ್

ಕಾರ್ಕಳ: ಈ ಬಾರಿಯ ಕೆಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಅನಂತ್ ಎನ್ ಕೆ ಇಂಜಿನಿಯರಿAಗ್‌ನಲ್ಲಿ ರಾಜ್ಯಕ್ಕೆ 57 ನೇ ರ‍್ಯಾಂಕ್ ಹಾಗೂ ಬಿ-ಫಾರ್ಮಾದಲ್ಲಿ 333ನೇ ರ‍್ಯಾಂಕ್ ಪಡೆದುಕೊಳ್ಳುವುದರ ಮೂಲಕ ಸಂಸ್ಥೆಯು ಅಮೋಘ ಸಾಧನೆಯನ್ನು ದಾಖಲಿಸಿದೆ.

ಇದರ ಜೊತೆಗೆ ಸಂಹಿತ್ ಎಸ್ ಆಚಾರ್ಯ ಅಗ್ರಿಕಲ್ಚರ್‌ನಲ್ಲಿ 826ನೇ ರ‍್ಯಾಂಕ್ ಹಾಗೂ ಬಿಎನ್‌ವೈಎಸ್‌ನಲ್ಲಿ 1888ನೇ ರ‍್ಯಾಂಕ್, ಇಂಜಿನಿಯರಿ0ಗ್‌ನಲ್ಲಿ 2527 ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಶ್ರೀಯಾ ಅಗ್ರಿಕಲ್ಚರ್‌ನಲ್ಲಿ 1591ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.

ಸಂಸ್ಥೆಯು ಈ ಸಾಲಿನಲ್ಲಿ ಅಗ್ರ ನೂರರ ಒಳಗೆ ಒಂದು, ಐದು ನೂರರ ಒಳಗೆ ಎರಡು, ಸಾವಿರದ ಒಳಗೆ ಮೂರು, ಐದು ಸಾವಿರದ ಒಳಗೆ 15, ಹತ್ತು ಸಾವಿರದ ಒಳಗೆ 29 ರ‍್ಯಾಂಕ್ ಹಾಗೂ ಹದಿನೈದು ಸಾವಿರದ ಒಳಗೆ 40 ರ‍್ಯಾಂಕ್‌ಗಳನ್ನು ಪಡೆದುಕೊಂಡಿದೆ. ಗ್ರಾಮೀಣ ಹಾಗೂ ಬಡ ಸಮುದಾಯದ ವಿದ್ಯಾರ್ಥಿಗಳ ಆಶಾಕಿರಣವಾಗಿ, ದಾಖಲಾತಿಗೆ ಯಾವುದೇ ಅಂಕಗಳ ಮಿತಿಯಿಲ್ಲದೆ ದಾಖಲಾತಿ ನೀಡಿ ಸಿಇಟಿ ತರಬೇತಿ ಪಡೆದ  124 ವಿದ್ಯಾರ್ಥಿಗಳಲ್ಲಿ ಹದಿನೈದು ಸಾವಿರದ ಒಳಗೆ 40 (39%) ರ‍್ಯಾಂಕುಗಳನ್ನು ಗಳಿಸುವ ಮೂಲಕ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗಮನಾರ್ಹ ಸಾಧನೆ ಮಾಡಿದೆ.

ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಪ್ರಕರಣ ದಾಖಲು

0

ಬಜ್ಪೆ ಚಲೋ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ:ಕಾರ್ಕಳ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA)ಗೆ ವಹಿಸಬೇಕೆಂದು ಆಗ್ರಹಿಸಿ ಬಜಪೆಯಲ್ಲಿ ನಡೆದಿದ್ದ ‘ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಿದ್ದ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ Crime no-90/25. Section 189(2)-191(2)-285-192,351(2)-351(3)-190Bns,107-109kP ಆಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಭಾನು ಭಾಸ್ಕರ್ ಪೂಜಾರಿ,ಅನಿತಾ ಡಿ’ಸೋಜಾ ನೇಮಕ

0

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಭಾನು ಭಾಸ್ಕರ್ ಪೂಜಾರಿ,ಅನಿತಾ ಡಿ’ಸೋಜಾ ನೇಮಕ

ಅಖಿಲ ಭಾರತ ಮಾಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಇವರ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಸೌಮ್ಯಾರೆಡ್ಡಿಯವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ ಹಾಗೂ ಕಾರ್ಕಳ ಮಹಿಳಾ ಕಾಂಗ್ರೇಸ್‌ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಅನಿತಾ ಡಿ’ ಸೋಜಾ ಬೆಳ್ಮಣ್ಣ್ ಇವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.