ನಿಟ್ಟೆ:ಸಂತೋಷ್ ಎಸ್ ಅವರಿಗೆ ಡಾಕ್ಟರೇಟ್
ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇನ್ಫೋರ್ಮೇಶನ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ| ಸಂತೋಷ್ ಎಸ್ ಅವರು ‘ಎ ನಾವೆಲ್ ಇಂಪ್ಲಿಮೆಂಟೇಶನ್ ಆಫ್ ಗ್ಲೂಕೋಮಾ ಸ್ಕ್ರೀನಿಂಗ್ ಫ್ರಮ್ ಡಿಜಿಟಲ್ ಫಂಡಸ್ ಇಮೇಜಸ್ ಯುಸಿಂಗ್ ಆನ್ ಎನ್ಸೆಂಬಲ್ ಡೀಪ್ ಲರ್ನಿಂಗ್ ಬೇಸ್ಡ್ ಅಪ್ರೋಚ್’ ಎಂಬ ವಿಷಯದ ಬಗೆಗೆ ಬರೆದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಇತ್ತೀಚೆಗೆ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಅನೂಪ್ ಬಿ ಕೆ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದರು.
ನಿಟ್ಟೆ:ಸಂತೋಷ್ ಎಸ್ ಅವರಿಗೆ ಡಾಕ್ಟರೇಟ್
ಸೆ.9:ಕಾರ್ಕಳ ಆನೆಕೆರೆ ಸರ್ಕಲ್ ಬಳಿ ಹೋಟೆಲ್ ಜಲದುರ್ಗಾ ಶುಭಾರಂಭ
ಸೆ.9:ಕಾರ್ಕಳ ಆನೆಕೆರೆ ಸರ್ಕಲ್ ಬಳಿ ಹೋಟೆಲ್ ಜಲದುರ್ಗಾ ಶುಭಾರಂಭ
ಕಾರ್ಕಳ ಆನೆಕೆರೆ ಸರ್ಕಲ್ ಬಳಿ ಹೋಟೆಲ್ ಜಲದುರ್ಗಾ ಸಸ್ಯಾಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಸೆ.9ರಂದು ಶುಭಾರಂಭಗೊಳ್ಳಲಿದೆ.ಬೆಳಿಗ್ಗೆ11.30 ರಿಂದ ರಾತ್ರಿ 10.00 ಗಂಟೆಯವರೆಗೆ ವರೆಗೆ ಹೋಟೆಲ್ ತೆರೆದಿರುತ್ತದೆ.ಮೀನಿನ ತವಾ ಫ್ರೈ ಜಲದುರ್ಗಾ ಹೋಟೆಲ್ ನ ವಿಶೇಷತೆ ಎಂದು ಮಾಲಕರು ತಿಳಿಸಿದ್ದಾರೆ.
ಹೈಕೋರ್ಟ್ ನಲ್ಲಿ ಕಂಚಿನದೇ ಮೂರ್ತಿ ಎಂದು ಒಪ್ಪಿಕೊಳ್ಳುವ ಕಾಂಗ್ರೆಸ್ಸಿಗರೇ ಇಲ್ಲಿ ಫೈಬರ್ ಮೂರ್ತಿ ಎಂದು ಸುಳ್ಳು ಹೇಳುವ ನೀವು ಕಾರ್ಕಳದ ಜನತೆಯ ಬಳಿ ಬೇಶರತ್ ಕ್ಷಮೆ ಕೇಳಬೇಕು-ಉದಯ ಎಸ್ ಕೋಟ್ಯಾನ್
ಹೈಕೋರ್ಟ್ ನಲ್ಲಿ ಕಂಚಿನದೇ ಮೂರ್ತಿ ಎಂದು ಒಪ್ಪಿಕೊಳ್ಳುವ ಕಾಂಗ್ರೆಸ್ಸಿಗರೇ ಇಲ್ಲಿ ಫೈಬರ್ ಮೂರ್ತಿ ಎಂದು ಸುಳ್ಳು ಹೇಳುವ ನೀವು ಕಾರ್ಕಳದ ಜನತೆಯ ಬಳಿ ಬೇಶರತ್ ಕ್ಷಮೆ ಕೇಳಬೇಕು-ಉದಯ ಎಸ್. ಕೋಟ್ಯಾನ್
ಕಾರ್ಕಳ:ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಹಂತದಲ್ಲಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಬಗ್ಗೆ ಕಾರ್ಕಳದ ಜನತೆಗೆ ದಿನಕ್ಕೊಂದು ಸುಳ್ಳು ಹೇಳುತ್ತಿರುವ ಕಾರ್ಕಳ ಕಾಂಗ್ರೆಸ್‌ನ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಕಾರ್ಕಳದ ಸಮಸ್ತ ಜನತೆಯ ಬೇಶರತ್ ಕ್ಷಮೆ ಕೇಳಬೇಕು ಎಂದು ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಕಾರ್ಯದರ್ಶಿ ಉದಯ್ ಎಸ್. ಕೋಟ್ಯಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಥೀಂ ಪಾರ್ಕ್ ಕಾಮಗಾರಿಗಳಲ್ಲಿ ಒಂದು ಭಾಗವಾಗಿರುವ ಪರಶುರಾಮನ ಕಂಚಿನ ಮೂರ್ತಿಯನ್ನು ಮರುವಿನ್ಯಾಸಗೊಳಿಸುವ ಬಗ್ಗೆ ಕಾನೂನಾತ್ಮಕವಾಗಿಯೇ ತೆಗೆಯುವ ಸಂದರ್ಭದಲ್ಲಿ ಸರ್ಕಾರದ ಮೂಲಕ ಒತ್ತಡ ಹೇರಿ ಅರ್ಧ ಭಾಗ ತೆಗೆಯುವ ಸಂದರ್ಭ ಕಾಮಗಾರಿಗೆ ತಡೆಯನ್ನು ತಂದಿರುತ್ತೀರಿ. ಪೊಲೀಸು ರಕ್ಷಣೆಯಲ್ಲಿಯೇ ಮೂರ್ತಿ ಭಾಗಗಳನ್ನು ತೆಗೆದಿದ್ದರೂ ಕೂಡ ಮೂರ್ತಿ ಕಳವು ಆಗಿದೆ ಎಂದು ದೂರು ಕೊಟ್ಟಿರುತ್ತೀರಿ ಹಾಗೂ ಮಾಧ್ಯಮಗಳಿಗೆ ಮೂರ್ತಿ ಕಳವು ಆಗಿದೆ ಎಂದು ತಪ್ಪು ಮಾಹಿತಿ ನೀಡಿದಿರಿ.
ಉಳಿದ ಮೂರ್ತಿಯ ಭಾಗಗಳನ್ನು ತೆಗೆಯುವಾಗ, ಕೋರ್ಟ್ ಆದೇಶ ಇದ್ದರೂ ಕೂಡ ರಾತ್ರೋರಾತ್ರಿ ಬೆಟ್ಟಕ್ಕೆ ಹೋಗುವ ಏಕೈಕ ರಸ್ತೆಗೆ ಮಣ್ಣು ತಂದು ರಾಶಿ ಹಾಕಿದಿರಿ ಹಾಗೂ ನಿಮ್ಮ ಪ್ರಭಾವ ಬಳಸಿ ಪೊಲೀಸ್ ರಕ್ಷಣೆಯನ್ನು ಹಿಂಪಡೆದಿರಿ. ಈ ಮೂಲಕ ಮತ್ತೆ ಕಾಮಗಾರಿಗೆ ತಡೆಯೊಡ್ಡಿದಿರಿ. ರಾಜ್ಯದಲ್ಲಿಯೇ ಪ್ರಥಮ ಎಂಬಂತೆ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ರಾಜ್ಯದ ರಾಜ್ಯಧಾನಿಯಲ್ಲಿ ಪ್ರತಿಭಟನೆ ಮಾಡಿಸಿ ಇಡೀ ರಾಜ್ಯದ ಜನರಿಗೆ ಸುಳ್ಳು ಹೇಳಿಸಿದಿರಿ….ಈ ಮೂಲಕ ಕಾರ್ಕಳಕ್ಕೆ ಕಳಂಕ ತಂದಿರಿ. ಮೂರ್ತಿ ಕಳಪೆ ಹಾಗೂ ಫೈಬರ್ ಮೂರ್ತಿ ಎಂದು ಬಿಂಬಿಸುತ್ತಾ ಕೋರ್ಟಿಗೆ ಹೋದಿರಿ.
ಮೊದಲಿಗೆ ಇಡೀ ಮೂರ್ತಿ ಫೈಬರ್ ಅಂದಿರಿ ಆಮೇಲೆ ಅರ್ಧ ಮೂರ್ತಿ ಫೈಬರ್ ಅಂದಿರಿ ಈಗ ಕರ್ನಾಟಕದ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಮೂರ್ತಿಯ ಬಗ್ಗೆ ನಮಗೆ ಯಾವುದೇ ತಕರಾರು ಇಲ್ಲ ಮೂರ್ತಿ ಕಂಚಿನದೇ, ನಮ್ಮ ತಕರಾರು ಏನಿದ್ದರೂ ಮೂರ್ತಿ ಶಿಲ್ಪಿ ಕೃಷ್ಣನಾಯಕ ಜಿಎಸ್‌ಟಿ ಕಟ್ಟಿಲ್ಲ ಎಂಬುದರ ಬಗ್ಗೆ ಮಾತ್ರ ಎನ್ನುತ್ತೀರಿ.
ಹಾಗಾದರೆ ಕೋರ್ಟ್‌ನಲ್ಲಿ ಸತ್ಯ ಹೇಳುವ ನೀವು ಇಷ್ಟರ ತನಕ ಕಾರ್ಕಳ ಜನತೆಗೆ ಯಾಕೆ ಸುಳ್ಳು ಹೇಳಿದ್ದೀರಿ…? ನೀವು ಪದೇ ಪದೇ ಫೈಬರ್-ಫೈಬರ್ ಎಂದು ಹೇಳಿ ಜನರಿಗೆ ಯಾಕೆ ಮೋಸ ಮಾಡಿದಿರಿ…? ಮೂರ್ತಿ ಕಂಚಿನದೇ ಎಂದು ಗೊತ್ತಿದ್ದರೂ ಕೂಡ ಕಾಮಗಾರಿಗೆ ಪ್ರತಿ ಹಂತದಲ್ಲೂ ತಡೆ ಒಡ್ಡಿದ್ದಿರಿ ಯಾಕೆ…? ಕಾರ್ಕಳವನ್ನು ಒಂದು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ಮಾಡಬೇಕೆಂಬ ಮಾನ್ಯ ಶಾಸಕರಾದ ಸುನಿಲ್ ಕುಮಾರ್ ಅವರ ಪ್ರಯತ್ನಕ್ಕೆ ಯಾಕೆ ಅಡ್ಡಗಾಲು ಹಾಕಿದ್ದೀರಿ…?
ನೀವು ಇಷ್ಟೆಲ್ಲಾ ಸುಳ್ಳು ಹೇಳಿದರೂ ಸಹ ನಾವು ಇದನ್ನೆಲ್ಲಾ ಬಿಟ್ಟು ಬಿಡಲು ತಯಾರಿದ್ದೇವೆ. ಆದರೆ ಭಾರತೀಯ ಜನತಾ ಪಾರ್ಟಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸದರಿ ಥೀಂ ಪಾರ್ಕ್ ಕಾಮಗಾರಿಗೆ ರೂ.11.00 ಕೋಟಿ ಅನುದಾನ ಮಂಜೂರಾತಿಯಾಗಿದ್ದು, ರೂ.06.72 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತದೆ. ನಿಮಗೆ ನಿಜವಾಗಿಯೂ ತಾಕತ್ತಿದ್ದರೆ, ನಿರಂತರವಾಗಿ ಜನರಿಗೆ ಸುಳ್ಳು ಹೇಳುವುದನ್ನು ಬಿಟ್ಟು, ಉಳಿದ ಅನುದಾನ ಬಿಡುಗಡೆಗೊಳಿಸಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಆದಷ್ಟು ಬೇಗ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿ, ನೀವು ಮಾಡುತ್ತಿರುವ ತಪ್ಪನ್ನು ನೀವೇ ಸರಿಪಡಿಸಿಕೊಳ್ಳುವ ಮೂಲಕ ಸಮಸ್ಥ ಕಾರ್ಕಳದ ಜನತೆಯ ಮುಂದೆ ಕ್ಷಮೆ ಕೇಳಿ ಎಂದು ಅವರು ತಿಳಿಸಿದ್ದಾರೆ.
ನಿರಂತರ ವೈಶಿಷ್ಟಪೂರ್ಣ ಕಾರ್ಯಕ್ರಮಗಳೊಂದಿಗೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಜಿಲ್ಲೆಯಲ್ಲೇ ಮುಂಚೂಣ ಯಲ್ಲಿದೆ – ದೀಪಕ್ ಕೋಟ್ಯಾನ್ ಇನ್ನಾ

ಮಂಗಳೂರು:ಮಗು ಅಪಹರಣ ಪ್ರಕರಣ-ಎರಡು ಗಂಟೆಯೊಳಗೆ ಪ್ರಕರಣ ಬೇಧಿಸಿದ ಕಂಕನಾಡಿ ನಗರ ಠಾಣೆ ನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದ ತಂಡ
ಮಂಗಳೂರು:ಮಗು ಅಪಹರಣ ಪ್ರಕರಣ-ಎರಡು ಗಂಟೆಯೊಳಗೆ ಪ್ರಕರಣ ಬೇಧಿಸಿದ ಕಂಕನಾಡಿ ನಗರ ಠಾಣೆ ನಿರೀಕ್ಷಕ ಟಿ.ಡಿ.ನಾಗರಾಜ್ ನೇತೃತ್ವದ ತಂಡ
ಮಂಗಳೂರು:ನಗರದ ಅಳಪೆ ಪಡೀಲ್ನಲ್ಲಿರುವ ಅರಣ್ಯ ಇಲಾಖೆಯ ಸಸ್ಯವನ ಬಳಿ ಆಗಸ್ಟ್ 31ರಂದು ಸಂಜೆ ಎರಡೂವರೆ ವರ್ಷದ ಮಗು ಅಪಹರಣ ಘಟನೆ ನಡೆದಿದೆ. ಎರಡು ಗಂಟೆಯೊಳಗೆ ಪೊಲೀಸರು ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಎರ್ನಾಕುಲಂನ ನಿವಾಸಿ ಅನೀಶ್ ಕುಮಾರ್ (49) ಎಂಬಾತನನ್ನು ಬಂಧಿಸಲಾಗಿದೆ.
ಅನೀಶ್ ಕುಮಾರ್ ತನ್ನ ಊರಿನಿಂದ ಆಗಸ್ಟ್ 28ರಂದು ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈನತ್ತ ರೈಲಿನಲ್ಲಿ ಹೋಗಿದ್ದ. ಗೋವಾದಲ್ಲಿ ರೈಲಿನಿಂದ ಇಳಿದು, ಮುಂಬೈ ರೈಲನ್ನು ತಪ್ಪಿಸಿಕೊಂಡಿದ್ದ. ಆಗಸ್ಟ್ 31ರಂದು ಗೋವಾದಿಂದ ಹೊರಟು ಮಂಗಳೂರಿಗೆ ಬಂದಿದ್ದಾನೆ. ಪಡೀಲ್ ಅಳಪೆಯ ಅರಣ್ಯ ಭವನದ ಮುಂಭಾಗದಲ್ಲಿ ಒಂದು ಹೆಣ್ಣು ಮಗು ನಡೆದುಕೊಂಡು ಹೋಗುತ್ತಿದ್ದುದನ್ನು ಕಂಡಿದ್ದಾನೆ. ತನಗೆ ಹೆಣ್ಣು ಮಕ್ಕಳಿಲ್ಲವೆಂಬ ಕಾರಣಕ್ಕೆ ಈ ಹೆಣ್ಣು ಮಗುವನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕಾಸರಗೋಡು ಕಡೆಗೆ ಹೋಗುವ ರೈಲಿನಲ್ಲಿ ಹೋಗಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಕಾಸರಗೋಡಿನ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ, ತಕ್ಷಣ ಕಾರ್ಯ ಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಪಿಎಸ್ಐ ಶಿವಕುಮಾರ್ ಕೆ. ಹಾಗೂ ತಂಡ ಕಾಸರಗೋಡಿಗೆ ತೆರಳಿ, ಅಲ್ಲಿನ ರೈಲ್ವೇ ಪೊಲೀಸರ ಸಹಾಯದೊಂದಿಗೆ ಆರೋಪಿಯನ್ನು ಬಂಧಿಸಿದೆ. ನಂತರ ಮಗುವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಕಂಕನಾಡಿ ನಗರ ಠಾಣೆ ನಿರೀಕ್ಷಕ ಟಿ.ಡಿ.ನಾಗರಾಜ್ ಮಾರ್ಗದರ್ಶನದಲ್ಲಿ ಪಿಎಸ್ಐ ಶಿವಕುಮಾರ್ ಕೆ., ಎಎಸ್ಐ ಅಶೋಕ್ ಹಾಗೂ ಸಿಬ್ಬಂದಿಯಾದ ಅಶೀತ್ ಡಿಸೋಜಾ, ಕುಶಾಲ್ ಹೆಗ್ಡೆ, ರಾಘವೇಂದ್ರ ಹಾಗೂ ಪೂಜಾ ಭಾಗವಹಿಸಿದ್ದರು.
ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ
ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ವಯೋಮಾನ 18ರ ಬಾಲಕರ ವಿಭಾಗದ 100ಮೀಟರ್ ಮತ್ತು 200ಮೀಟರ್ ಓಟದ ಸ್ಪರ್ಧೆಗಳಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ರಾಜ್ಯಮಟ್ಟದ ಅಮೆಚೂರ್ ಜೂನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಯ ಸುಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಶನ್ ಟ್ರಸ್ಟ್ನ ಅಧ್ಯ಼ಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.
ಕಾರ್ಕಳ:ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ
ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ
ಕಾರ್ಕಳ:ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಶೈಕ್ಷಣಿಕ,ಸಾಮಾಜಿಕ,ವಸ್ತ್ರವಿನ್ಯಾಸ ಕ್ಷೇತ್ರದಲ್ಲಿನ ತನ್ನ ವೈಯಕ್ತಿಕ ಹಾಗೂ ಮಹಿಳಾ ಸ್ವಾವಲಂಬಿ ಸಾಧನೆಗಾಗಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಲೈಂಗಿಕ ದೌರ್ಜನ್ಯ ಆರೋಪ:ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್
ಲೈಂಗಿಕ ದೌರ್ಜನ್ಯ ಆರೋಪ:ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು
ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ.
47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
47 ವರ್ಷದ ಮಹಿಳೆಯೊಬ್ಬರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿದ್ದಾರೆಂದು ಸಹ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅರುಣ್ ಪುತ್ತಿಲ ಅವರು, 2023ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಗೆ ಠಕ್ಕರ್ ಕೊಟ್ಟು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅಭಿಮಾನಿಯಾಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ್ದಾರೆ. ಬಳಿಕ ದೂರುದಾರರ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.
2024ರ ಲೋಕಸಭಾ ಚುನಾವಣೆಯ ಬಳಿಕ ನನ್ನೊಂದಿಗೆ ಮಾತುಕತೆ ಕಡಿಮೆಗೊಳಿಸಿದ್ದರು. ನನ್ನನ್ನು ಸಂಪೂರ್ಣವಾಗಿ ಶೋಷಣೆಗೆ ಒಳಪಡಿಸಿ ಅವರ ಆಸೆ ತೀರಿಸಿಕೊಂಡು ನನ್ನನ್ನು ದೂರ ಮಾಡಿದರು. ಆ ಭಯದಿಂದ ನನ್ನ ನಿವಾಸವನ್ನು ಪುತ್ತೂರಿಗೆ ಸ್ಥಳಾಂತರಿಸಿ ಬಾಡಿಗೆ ಮನೆಯಲ್ಲಿ ನನ್ನ ಮಗಳೊಂದಿಗೆ ಉದ್ಯೋಗ ಹಾಗೂ ವರಮಾನವಿಲ್ಲದೇ ಕಷ್ಟಪಡುತ್ತಿದ್ದೇನೆ. ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲರು ಮಾಡಿದ ದ್ರೋಹ, ಅನ್ಯಾಯ, ಅಕ್ರಮ ವಿಶ್ವಾಸ ದ್ರೋಹಕ್ಕೆ ಕಾನೂನು ಕ್ರಮ ಕೈಗೊಂಡು ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಖುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ ಹಾಗೂ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಮರೆತುಬಿಟ್ಟಿದೆ-ರೇಷ್ಮಾ ಉದಯ್ ಶೆಟ್ಟಿ
ಖುರ್ಚಿ ಉಳಿಸಿಕೊಳ್ಳುವ ಭರದಲ್ಲಿ ಜನರ ಸಮಸ್ಯೆ ಹಾಗೂ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಮರೆತುಬಿಟ್ಟಿದೆ-ರೇಷ್ಮಾ ಉದಯ್ ಶೆಟ್ಟಿ
ಕಾರ್ಕಳ:ಉಡುಪಿಯಲ್ಲಿ ಈ ಬಾರಿ ಧಾರಾಕಾರಾಗಿ ಸುರಿದ ಮಳೆಗೆ ಜಿಲ್ಲಾಧ್ಯಂತ ಅಪಾರ ಹಾನಿಯಾಗಿದ್ದು, ಜಿಲ್ಲೆಯ ಹೆದ್ದಾರಿಗಳು ಸೇರಿದಂತೆ ನಗರ ಮತ್ತು ಗ್ರಾಮಾಂತರದ ರಸ್ತೆಗಳು ಹಾಳಾಗಿದೆ. ಅಂಗನವಾಡಿ ಶಾಲಾ ಕಟ್ಟಡಗಳು, ಕಾಲುಸಂಕ, ತಡೆಗೋಡೆ, ವಿದ್ಯುತ್ ಕಂಬಗಳಿಗೆ ಹೆಚ್ಚಿನ ಪ್ರಮಾಣದ ಹಾನಿಯಾಗಿದ್ದು, ಸುಮಾರು 234 ಕೋಟಿ ರೂಪಾಯಿಗಳಷ್ಟು ಮೌಲ್ಯದ ಹಾನಿಯ ವರದಿಯನ್ನು ಜಿಲ್ಲಾಡಳಿತವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದರೂ, ಇದುವರೆಗೂ ನಯಾ ಪೈಸೆ ಪರಿಹಾರ ಬಿಡುಗಡೆಯಾಗದೇ ಇರುವುದು ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೀಗ ತುರ್ತು ಮರು ದುರಸ್ತಿ ಅವಶ್ಯಕತೆ ಇರುವ ಕಾಮಗಾರಿಗಳಿಗೆ ಅನುದಾನವಿಲ್ಲದೆ ವಿದ್ಯಾರ್ಥಿಗಳಿಗೆ, ರೈತರಿಗೆ, ನಾಗರಿಕರಿಗೆ ತೀವ್ರ ತೊಂದರೆಯಾಗುತ್ತಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ಉಡುಪಿಯ ಕಡೆ ತಲೆಹಾಕಿಯೂ ಮಲಗುತ್ತಿಲ್ಲ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳುವ ತಂತ್ರಗಾರಿಕೆಯಲ್ಲಿ ಮಗ್ನರಾಗಿದ್ದರೆ. ಇತರ ಸಚಿವರು ಮುಖ್ಯಮಂತ್ರಿಗಳ ತೆರವಾಗಲಿರುವ ಕುರ್ಚಿಗೆ ಟವೆಲ್ ಹಿಡಿದು ಕಾಯುತ್ತಿದ್ದಾರೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರದಲ್ಲಿ ಈ ರೀತಿ ಮಳೆ ಹಾನಿಯಾಗಿದ್ದಾಗ ನ್ಯಾಯಯುತವಾದ ಪರಿಹಾರ ದೊರಕಿರುವುದನ್ನು ಇಂದು ಜನ ಸ್ಮರಿಸುತ್ತಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಸ್ಥಿತ್ವಕ್ಕೆ ಬಂದು 16 ತಿಂಗಳು ಕಳೆದರೂ ಅಭಿವೃದ್ಧಿಯ ಮಾತು ಆರಂಭವೇ ಆಗಿಲ್ಲ. ಹೀಗೆಯೇ ಮುಂದುವರಿದರೆ ಮಳೆ ಪರಿಹಾರ, ಅಭಿವೃದ್ಧಿ ಹಣ ಬಿಡುಗಡೆಗಾಗಿ ಕರಾವಳಿಯ ಜನರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಾದ ಪರಿಸ್ಥಿತಿ ಬರಬಹುದು ಎಂದು ಅವರು ತಿಳಿಸಿದ್ದಾರೆ
ಮುಡಾರು:ಮನೆಯಲ್ಲಿದ್ದ ಚಿನ್ನಾಭರಣ ಕಳವು
ಮುಡಾರು:ಮನೆಯಲ್ಲಿದ್ದ ಚಿನ್ನಾಭರಣ ಕಳವು
ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ನಡೆದಿದೆ.ಪ್ರಭಾ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪ್ರಭಾರವರು ಮನೆಯ ಬೀಗದ ಕೀಯನ್ನು ಯಾವಾಗಲೂ ತಮ್ಮ ಮನೆಗೆ ಬೀಗ ಹಾಕಿ, ಕೀಯನ್ನು ಹೊರಗೆ ಡಬ್ಬಿಯಲ್ಲಿ ಇರಿಸುತ್ತಿದ್ದುಆ.30ರಂದು ಮಧ್ಯಾಹ್ನ 3:30 ಗಂಟೆಯಿಂದ ಸಾಯಂಕಾಲ 5:00 ಗಂಟೆಯ ಮಧ್ಯೆ ಅವಧಿಯಲ್ಲಿ ಕಳ್ಳತನ ನಡೆದಿದ್ದು ಕಳ್ಳರು ಕೀ ಸಹಾಯದಿಂದ ಮನೆಯ ಬಾಗಿಲನ್ನು ತೆಗೆದು ಮನೆಯೊಳಗೆ ಪ್ರವೇಶಿಸಿ ಮನೆಯ ಬೆಡ್ ರೂಮ್‌ನ ಗೋದ್ರೇಜ್ ಲಾಕರನ್ನು ತೆರೆದು ಲಾಕರನಲ್ಲಿರಿಸಿದ್ದ ಚಿನ್ನಾಭರಣಗಳ ಪೈಕಿ ಸುಮಾರು 33 ಪವನ್ ತೂಕದ 10,05,000/- ಅಂದಾಜು ಮೌಲ್ಯದ ವಿವಿಧ ರೀತಿಯ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





