Home Blog Page 12

ಕುಸ್ತಿ ಪಂದ್ಯಾಟದಲ್ಲಿ ಎಸ್.ವಿ.ಟಿ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ

0

 

ಅ.9 ರಂದು ನಡೆದ ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ಇವರು ಪ್ರಥಮ ಸ್ಥಾನವನ್ನು ಪಡಕೊಂಡು ಛತ್ತಿಸ್‌ಘಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿ. ಎಸ್.ವಿ ಎಜ್ಯುಕೇಶನ್ ಟ್ರಸ್ಟ್, ಆಡಳಿತ ಪರಿಷತ್ತು, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.

ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಸಂಬಂಧಿಸಿ ವಿಶ್ವಕರ್ಮ ಒಕ್ಕೂಟದ ನಿಯೋಗ ಉಡುಪಿಯ ಪೊಲೀಸ್ ಅಧೀಕ್ಷಕರ ಭೇಟಿ ಮಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹ

0

 

ತನ್ನ ಆತ್ಮಹತ್ಯೆಯ ಹೊಣೆಗಾರರು ಎಂದು ನಾಲ್ಕು ಜನರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ಸೆಕ್ಸ್ ಟ್ರಾಪ್ ಜಾಲದ ಭಯಾನಕ ವಿಷಯಗಳನ್ನು ಒಳಗೊಂಡ ಏಳು ಪುಟಗಳ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಡಿರುವ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಇಂದು ಅವಿಭಜಿತ ದಕ್ಶಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟದ ನಿಯೋಗ ಉಡುಪಿಯ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಚರ್ಚಿಸಿ, ಇನೊಂದು ಸಾಮಾನ್ಯ ಆತ್ಮಹತ್ಯೆ ಪ್ರಕರಣವಲ್ಲ, ಇದೊಂದು ಬೆದರಿಕೆ ಹಾಗೂ ಬ್ಲಾಕ್ ಮೇಲ್ ನಿಂದಾಗಿರುವ ಆತ್ಮಹತ್ಯೆ ಪ್ರಕರಣವಾಗಿದ್ದು ಶೀಘ್ರವೇ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಕೊಳ್ಳುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟ ಅಧ್ಯಕ್ಷರಾದ ಮಧು ಆಚಾರ್ಯ ಮುಲ್ಕಿ, ಅಲೆವೂರು ಯೋಗೀಶ್ ಆಚಾರ್ಯ, ಮುರಳೀಧರ ಕೆ., ಜನಾರ್ಧನ ಎಸ್ ಆಚಾರ್ಯ, ಹರ್ಷವರ್ಧನ್ ನಿಟ್ಟೆ, ಕಾಪು ಯುವ ಸೇವಾ ಬಳಗದ ಅಧ್ಯಕ್ಷರಾದ ಬಿಳಿಯರು ಸುಧಾಕರ ಆಚಾರ್ಯ, ಹರೀಶ್ ಆಚಾರ್ಯ ಕಳತ್ತೂರು, ಪ್ರಕಾಶ್ ಆಚಾರ್ಯ ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.

ನಿಟ್ಟೆಯಲ್ಲಿ 2 ದಿನಗಳ ‘ಸೆಮಾಫೋರ್’ ಉದ್ಘಾಟನೆ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗವು ತನ್ನ ವಾರ್ಷಿಕ ಉತ್ಸವ ಸೆಮಾಫೋರ್ 2K25 ನ್ನು ಅ. 9 ಮತ್ತು 10 ರಂದು ಆಯೋಜಿಸಿತು.

ಅ. 9 ರಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಎಚ್ಪಿ ಎಂಟರ್ಪ್ರೈಸ್ ನ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಪ್ರಧಾನ ಸಾಫ್ಟ್ವೇರ್ ಎಂಜಿನಿಯರ್ ಅಭಿಲಾಷ್ ಯು.ಕೆ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ತಾಂತ್ರಿಕ ಕಾಲೇಜಿನ ಪ್ರೊಫೆಸರ್ ಮತ್ತು ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಡಾ.ಸುದೇಶ್ ಬೇಕಲ್ ವಹಿಸಿದ್ದರು.

ಮುಖ್ಯ ಅತಿಥಿ ಅಭಿಲಾಷ್ ಯು.ಕೆ. ಅವರು ತಮ್ಮ ಭಾಷಣದಲ್ಲಿ, ವಿದ್ಯಾರ್ಥಿಗಳು ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು, ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲು ಮತ್ತು ಐಟಿ ಉದ್ಯಮದಲ್ಲಿ ಉತ್ಕೃಷ್ಟತೆಯನ್ನು ಮುಂದುವರಿಸಲು ಪ್ರೋತ್ಸಾಹಿಸಿದರು.

ಸಭಾಧ್ಯಕ್ಷ ಡಾ. ಸುದೇಶ್ ಬೇಕಲ್ ಅವರು ವೃತ್ತಿಪರ ಬೆಳವಣಿಗೆಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ನಿರಂತರ ಕಲಿಕೆಯ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿ ಸಂಘದ ಸಾಧನೆಗಳು ಮತ್ತು ಚಟುವಟಿಕೆಗಳನ್ನು ಪ್ರದರ್ಶಿಸಿದ SAMCA ಸುದ್ದಿಪತ್ರದ ಮೊದಲ ಸಂಪುಟದ ಬಿಡುಗಡೆಯು ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು. ಉತ್ಸವದಲ್ಲಿ 11 ಕಾಲೇಜುಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಂಡುಬಂದಿತು. ಸೃಜನಶೀಲತೆ, ತಂಡದ ಕೆಲಸ ಮತ್ತು ಕಲಿಕೆಗೆ ರೋಮಾಂಚಕ ವೇದಿಕೆಯನ್ನು ಒದಗಿಸಿದ 10 ತಾಂತ್ರಿಕ ಮತ್ತು ತಾಂತ್ರಿಕೇತರ ಸ್ಪರ್ಧೆಗಳನ್ನು ಈ ಕಾರ್ಯಕ್ರಮ ಒಳಗೊಂಡಿತ್ತು.

ವೇದಿಕೆಯಲ್ಲಿ ಸೆಮಾಫೋರ್ ಸಂಯೋಜಕ ಡಾ.ಅನಂತಮೂರ್ತಿ, ಅಧ್ಯಕ್ಷ ಕಿರಣ್, ಕಾರ್ಯದರ್ಶಿ ರಕ್ಷಿತಾ, ತಾಂತ್ರಿಕ ಸಂಯೋಜಕ ಅನೂಪ್ ನಾಯಕ್ ಉಪಸ್ಥಿತರಿದ್ದರು.

ಶ್ರೀ ಲಕ್ಷ್ಮೀ ಜನಾರ್ದನ ಇಂಟರ್ ನ್ಯಾಶನಲ್ ಸ್ಕೂಲ್ ಬೆಳ್ಮಣ್‌ : ವಿಜ್ಞಾನ ಮಾದರಿಗಳ ತಯಾರಿಕೆ ಹಾಗೂ ಪ್ರದರ್ಶನ – “ಎಸ್ ಎಲ್ ಜೆ ಸೈಕ್ವೆಸ್ಟ್ 2025”

0

 

ಶ್ರೀ ಲಕ್ಷ್ಮೀ ಜನಾರ್ದನ ಇಂಟರ್ ನ್ಯಾಶನಲ್ ಸ್ಕೂಲ್ ಬೆಳ್ಮಣ್‌ ನಲ್ಲಿ ಅ.11 ರಂದು ” ವಿಜ್ಞಾನ ಮಾದರಿಗಳ ತಯಾರಿಕೆ ಹಾಗೂ ಪ್ರದರ್ಶನ – ಎಸ್ ಎಲ್ ಜೆ ಸೈಕ್ವೆಸ್ಟ್ 2025″ ಕಾರ್ಯಕ್ರಮ ಆಯೋಜಿಸಲಾಯಿತು.

ಶಾಲೆಯ ಸುಮಾರು ಇನ್ನೂರು ವಿದ್ಯಾರ್ಥಿಗಳು ವಿಜ್ಞಾನದ ನಿಪುಣತೆ, ಅನ್ವೇಷಣೆ, ಹೊಸ ಹೊಸ ಕಲ್ಪನೆಗಳನ್ನು ಒಳಗೊಂಡ 60ಕ್ಕಿಂತಲೂ ಮೇಲ್ಪಟ್ಟು ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಾಗೂ ತೀರ್ಪುಗಾರರಾಗಿ ಭಾಗವಹಿಸಿದ ನಿಟ್ಟೆ ಏನ್. ಎಂ. ಏ. ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಪ್ರೊಫೆಸರ್ ಡಾ.ರಾಮ್ ಮರಾಠೆ ಹಾಗೂ ವ್ರೋಕ್ಲಾ ವಿಶ್ವವಿದ್ಯಾಲಯ ಪೋಲಾಂಡ್ ನ ಸಂಶೋಧನಾ ವಿಜ್ಞಾನಿ ಡಾ. ಸುನೈನಾ ಎಸ್. ಪಾಟೀಲ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಕ್ಕಳು ತಯಾರಿಸಿದ ಮಾದರಿಯನ್ನು ವಿಶ್ಲೇಷಿಸಿ ಮಕ್ಕಳ ಸೃಜನಶೀಲತೆ, ಸೃಜನಾತ್ಮಕ ಆಲೋಚನೆ, ಅನ್ವೇಷಣೆ, ಮಾತಿನಿ ಚಾಕಚಕ್ಯತೆ, ನಿಖರತೆಯನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ಉಪಯುಕ್ತವಾದ ಇಂತಹ ಅತ್ಯಮೂಲ್ಯ ಕಾರ್ಯಕ್ರಮವನ್ನು ಆಯೋಜಿಸಿದ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕವೃಂದದವರಿಗೆ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಚೇರ್ ಪರ್ಸನ್ ಮೋಹಿನಿ ಪಿ. ಶೆಟ್ಟಿ, ಸಿ. ಇ. ಒ. ಮಯೂರ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲರು ಭುಜಂಗ ಪಿ. ಶೆಟ್ಟಿ ಅತಿಥಿಗಳ ಪರಿಚಯದೊಂದಿಗೆ ಭಾಗವಹಿಸಿದ ಎಲ್ಲರನ್ನೂ ಸ್ವಾಗತಿಸಿದರು.

ಶಾಲಾ ಹೆತ್ತವರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ವಿವಿದ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮಾದರಿ ಪ್ರದರ್ಶನದ ವೀಕ್ಷಣೆಯಲ್ಲಿ ಭಾಗವಹಿಸಿದರು. ವಿಶೇಷವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೆತ್ತವರಿಗೆ ಹಾಗೂ ಪೋಷಕರಿಗೆ ರಸಪ್ರಶ್ನೆಯನ್ನು ಆಯೋಜಿಸಲಾಗಿತ್ತು.

 

 

40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳು

0

 

ಅ. 10 ರಿಂದ 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ ಪಿ. ಶೆಟ್ಟಿ ಹಾಗೂ ಡಾ.ಎನ್.ಎಸ್.ಎಎಂ ಪ್ರಥಮ ದರ್ಜೆ ಕಾಲೇಜಿನ ನಂದಿನಿ ಆಯ್ಕೆಯಾಗಿದ್ದಾರೆ.

ಈ ಸ್ಪರ್ಧೆಯು ಖೇಲೋ ಇಂಡಿಯಾ ಅಥ್ಲೆಟಿಕ್ಸ್ ಸ್ಪರ್ಧೆ 2025-2026 ರ ಅರ್ಹತಾ ಸ್ಪರ್ಧೆಯಾಗಿಯೂ ಕಾರ್ಯನಿರ್ವಹಿಸುತ್ತದೆ.

ನಿಟ್ಟೆ ತಾಂತ್ರಿಕ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಕೋಡಿ ಬೀಚ್ನಲ್ಲಿ ಕಡಲತೀರ ಸ್ವಚ್ಛತಾ ಅಭಿಯಾನ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಅಕ್ಟೋಬರ್ 4 ರಂದು ಸಾಸ್ತಾನದ ಕೋಡಿ ಬೀಚ್ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತು.

ಈ ಉಪಕ್ರಮವು 114 ಎನ್ಎಸ್ಎಸ್ ಸ್ವಯಂಸೇವಕರ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಅವರು ಕರಾವಳಿಯ ಸೌಂದರ್ಯವನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸಿದರು.

ಸುಡುವ ಬೆಳಗಿನ ಸೂರ್ಯನಿಂದ ವಿಚಲಿತರಾಗದೆ, ವಿದ್ಯಾರ್ಥಿ ಸ್ವಯಂಸೇವಕರು ಪ್ಲಾಸ್ಟಿಕ್ ಬಾಟಲಿಗಳು, ಹಳೆಯ ಪಾದರಕ್ಷೆಗಳು, ಕಾಗದದ ಕಸ, ಡೈಪರ್ಗಳು ಮತ್ತು ಇತರ ಜೈವಿಕ ವಿಘಟನೀಯವಲ್ಲದ ವಸ್ತುಗಳನ್ನು ಒಳಗೊಂಡಿರುವ 60 ಚೀಲಗಳ ತ್ಯಾಜ್ಯವನ್ನು ಸಂಗ್ರಹಿಸಿದರು.

ಕೋಡಿ ಗ್ರಾಮ ಪಂಚಾಯತ್, ಶೆಟ್ಟಿ ಆಗ್ರೋ ಸೆಂಟರ್, ಐರೋಡಿ ಮತ್ತು ಸಾಸ್ತಾನಾದ ಎನ್ಜಿಒ ಬೇರು ಕೋಸ್ಟ್ ಕ್ಲಿಯರ್ ನ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಾಮೂಹಿಕ ಸೇವಾ ಮನೋಭಾವವನ್ನು ಹೆಚ್ಚಿಸಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತವು ಉದಾರ ಮನೋಭಾವದೊಂದಿಗೆ ಎಲ್ಲಾ ಸ್ವಯಂಸೇವಕರಿಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ವ್ಯವಸ್ಥೆ ಮಾಡಿತು.

ಕಾರ್ಕಳ:ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

0

ಕಾರ್ಕಳ:ರೈಲಿಗೆ ತಲೆಕೊಟ್ಟು ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಟ್ಟೆ ತಾಂತ್ರಿಕ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಕೋಡಿ ಬೀಚ್ನಲ್ಲಿ ಕಡಲತೀರ ಸ್ವಚ್ಛತಾ ಅಭಿಯಾನ

0

 

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಅಕ್ಟೋಬರ್ 4 ರಂದು ಸಾಸ್ತಾನದ ಕೋಡಿ ಬೀಚ್ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತು.

ಈ ಉಪಕ್ರಮವು 114 ಎನ್ಎಸ್ಎಸ್ ಸ್ವಯಂಸೇವಕರ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಅವರು ಕರಾವಳಿಯ ಸೌಂದರ್ಯವನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸಿದರು.
ಸುಡುವ ಬೆಳಗಿನ ಸೂರ್ಯನಿಂದ ವಿಚಲಿತರಾಗದೆ, ವಿದ್ಯಾರ್ಥಿ ಸ್ವಯಂಸೇವಕರು ಪ್ಲಾಸ್ಟಿಕ್ ಬಾಟಲಿಗಳು, ಹಳೆಯ ಪಾದರಕ್ಷೆಗಳು, ಕಾಗದದ ಕಸ, ಡೈಪರ್ಗಳು ಮತ್ತು ಇತರ ಜೈವಿಕ ವಿಘಟನೀಯವಲ್ಲದ ವಸ್ತುಗಳನ್ನು ಒಳಗೊಂಡಿರುವ 60 ಚೀಲಗಳ ತ್ಯಾಜ್ಯವನ್ನು ಸಂಗ್ರಹಿಸಿದರು.

ಕೋಡಿ ಗ್ರಾಮ ಪಂಚಾಯತ್, ಶೆಟ್ಟಿ ಆಗ್ರೋ ಸೆಂಟರ್, ಐರೋಡಿ ಮತ್ತು ಸಾಸ್ತಾನಾದ ಎನ್ಜಿಒ ಬೇರು ಕೋಸ್ಟ್ ಕ್ಲಿಯರ್ ನ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಾಮೂಹಿಕ ಸೇವಾ ಮನೋಭಾವವನ್ನು ಹೆಚ್ಚಿಸಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತವು ಉದಾರ ಮನೋಭಾವದೊಂದಿಗೆ ಎಲ್ಲಾ ಸ್ವಯಂಸೇವಕರಿಗೆ ಉಪಾಹಾರ ಮತ್ತು ಮಧ್ಯಾಹ್ನದ ಊಟವನ್ನು ವ್ಯವಸ್ಥೆ ಮಾಡಿತು.

 

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ವೇದಿಕೆ ಎನ್. ಎಸ್. ಎಸ್ – ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅತಿಥಿಗಳ ಸಂದೇಶ

0

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸುವ ವೇದಿಕೆ ಎನ್. ಎಸ್. ಎಸ್ – ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅತಿಥಿಗಳ ಸಂದೇಶ

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳದಲ್ಲಿ ಅ 07 ರಂದು ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಾರುತಿ, ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಇವರು ಮಾತನಾಡಿ ‘ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು.

ಸಂಸ್ಥೆಯ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ರವರು ‘ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ’ ಎಂದರು.

ಉದ್ಯಮಿ ವಿಜಯ್ ಶೆಟ್ಟಿ ರವರು ಮಾತನಾಡುತ್ತಾ ‘ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ’ ಎಂದರು.

ನಂದಿನಿ ಶೆಟ್ಟಿ, ನ್ಯಾಯವಾದಿ ಮತ್ತು ನೋಟರಿ, ಕಾರ್ಕಳ ಇವರು ‘ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ವರ್ಮ ಅಜ್ರಿ, ವಿಶ್ರಾಂತ ಪ್ರಾಂಶುಪಾಲರು, ಎಂ.ಪಿ.ಎಂ ಕಾಲೇಜು, ಕಾರ್ಕಳ ಇವರು ‘ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು’ ಎಂದು ಹೇಳಿದರು.

ಅನ್ನಪೂರ್ಣ ಕಾಮತ್, ಪ್ರಾಂಶುಪಾಲರು, ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇವರು ಎನ್.ಎಸ್.ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿ, ವಂದಿಸುತ್ತಾ ‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್.ಎಸ್.ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ’ ಎಂದರು.

ಪೌರ ಕಾರ್ಮಿಕರಿಗೆ ಸನ್ಮಾನ
ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್.ಎಸ್.ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷರ್ 7 ದಿನಗಳ ಎನ್.ಎಸ್.ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು. ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ದ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ ರವರು ಗೌರವ ಉಪಸ್ಥಿತಿ ವಹಿಸಿದ್ದರು.

ಉಪನ್ಯಾಸಕರಾದ ಸಂತೋಷ್ ಸ್ವಾಗತಿಸಿ, ಶಿಬಿರಾಧಿಕಾರಿ ಉಮೇಶ್ ವಂದನಾರ್ಪಣೆಗೈದರು. ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ:13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ ಪೊಲೀಸರು

0

ಕಾರ್ಕಳ:13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣ

ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ ಪೊಲೀಸರು

ಸುಮಾರು 13 ವರ್ಷಗಳ ಹಿಂದಿನ ನಾಪತ್ತೆ ಪ್ರಕರಣ ವನ್ನು ಬೇಧಿಸುವಲ್ಲಿ ಉಡುಪಿ ಪೊಲೀಸ್ ತಂಡ ಯಶಸ್ವಿಯಾಗಿದೆ. 2012 ರಲ್ಲಿ ಕಾರ್ಕಳದಿಂದ ನಾಪತ್ತೆಯಾಗಿದ್ದ ಯುವಕನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಪೋಷಕರ ವಶಕ್ಕೆ ನೀಡಲಾಗಿದೆ.

13ವರ್ಷಗಳ ಹಿಂದೆ ಮುಂಡ್ಕೂರು ಪ್ರಭಾಕರ ಪ್ರಭು ಎಂಬವರ ಮಗ ಅನಂತ ಕೃಷ್ಣ ಪ್ರಭು(16) ಎಂಬಾತ ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಅನಂತ ಕೃಷ್ಣ ಪ್ರಭು, ಮನೆಯವರಿಗೆ ಮುಖ ತೋರಿಸಲು ಸಾಧ್ಯವಾಗದೆ ಮತ್ತು ಮನೆಯವರಿಗೆ ಈ ವಿಚಾರ ತಿಳಿಯಬಾರದು ಎಂಬ ಕಾರಣಕ್ಕೆ ಊರು ಬಿಟ್ಟು ನಾಪತ್ತೆಯಾಗಿದ್ದನು.

ಪ್ರಭಾಕರ ಪ್ರಭು ಅವರ ಒಬ್ಬನೇ ಮಗನಾಗಿರುವ ಅನಂತಕೃಷ್ಣ ಪ್ರಭು ಗಾಗಿ ಮನೆಯವರು ಹಲವು ಕಡೆ ಹುಡುಕಾಟ ನಡೆಸಿದರು. ಯಾವುದೇ ಸುಳಿವು ಸಿಗದೇ ಇದ್ದಾಗ ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು. ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಅನಂತ ಕೃಷ್ಣ ಪ್ರಭು ಪತ್ತೆಯಾಗಿರಲಿಲ್ಲ.

ಮನೆ ಬಿಟ್ಟು ಹೋದ ಅನಂತಕೃಷ್ಣ ಪ್ರಭು, ಬಳಿಕ ಮೈಸೂರು, ರೈಲ್ವೆ ನಿಲ್ದಾಣ ಸೇರಿದಂತೆ ವಿವಿಧ ಕಡೆ ಕೆಲಸ ಮಾಡಿ ಸಾಕಷ್ಟು ಕಷ್ಟ ಅನುಭವಿಸಿದನು.
ಬಳಿಕ ಹಾಸನದ ಸಕಲೇಶಪುರದ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡನು. ಅಲ್ಲಿ ಎರಡು ವರ್ಷಗಳ ಕಾಲ ಕೆಲಸ ಮಾಡಿದ ಈತನಿಗೆ ಕಾರ್ಖಾನೆ ಮಾಲಕರು ವಿದ್ಯಾಭ್ಯಾಸ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಿದರು. ಅದರಂತೆ ಬಹಳಷ್ಟು ಶ್ರಮಪಟ್ಟು ಉತ್ತಮ ಶಿಕ್ಷಣ ಪಡೆದ ಅನಂತಕೃಷ್ಣ ಪ್ರಭು(29), ಪ್ರಸ್ತುತ ಬೆಂಗಳೂರಿನಲ್ಲಿ ಇಂಟಿರಿಯರ್ ಡಿಸೈನರ್ ಆಗಿ ಕಾರ್ಯನಿರ್ವಹಿಸು ತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗಾಗಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಈ ತಂಡ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿತು.

ಕಳೆದ ಎರಡು ತಿಂಗಳಿನಿಂದ ಈ ಪ್ರಕರಣದ ಹಿಂದೆ ಬಿದ್ದ ತಂಡ, ಮುಂಬೈ, ಬೆಂಗಳೂರು ಸೇರಿದಂತೆ ಹಲವು ಕಡೆ ಹುಡುಕಾಟ ನಡೆಸಿತು. ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಖಚಿತ ಮಾಹಿತಿಯಂತೆ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದ ಅನಂತಕೃಷ್ಣನನ್ನು ಪತ್ತೆ ಹಚ್ಚಿತು.

ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕ ಸುದರ್ಶನ್ ದೊಡಮನಿ, ಉಡುಪಿ ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕ ಈರಣ್ಣ ಶಿರಗುಂಪಿ, ಸಿಬ್ಬಂದಿ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
.