Home Blog Page 9

ಬಿಜೆಪಿ ಮಹಿಳಾ ಮೋರ್ಚ ಕಾರ್ಕಳ-ದೀಪಾವಳಿ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮ

0

 

ಪ್ರತಿವರ್ಷದಂತೆ ಈ ಬಾರಿಯೂ ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ ವತಿಯಿಂದ ಗೋಪೂಜೆ ಕಾರ್ಯಕ್ರಮವು ಅ.24 ರಂದು ಕಾರ್ಕಳದ ತೆಳ್ಳಾರು ವೆಂಕಟರಮಣ ಗೋಶಾಲೆಯಲ್ಲಿ ಅಧ್ಯಕ್ಷರಾದ ಶ್ರೀಮತಿ ವಿನಯ ಡಿ ಬಂಗೇರ ಅವರ ನೇತೃತ್ವದಲ್ಲಿ ನಡೆಯಿತು.

ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಗೋವುಗಳಿಗೆ ಪೂಜೆ ಸಲ್ಲಿಸಿ, ತಿನಸುಗಳನ್ನು ನೀಡಿ, ಮಹಿಳಾ ಮೋರ್ಚಾದಿಂದಿರುವ ಗೋಹುಂಡಿಯ ಕಾಣಿಕೆಯನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ಬಿಜೆಪಿಯ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್, ಮಹಿಳಾ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾದ ಮಾಲಿನಿ ಜೆ ಶೆಟ್ಟಿ ,ಕಾರ್ಯದರ್ಶಿಗಳಾದ ಕವಿತಾ ಹರೀಶ್, ಮಹಿಳಾ ಮೋರ್ಚಾ ತಾಲೂಕು ಉಪಾಧ್ಯಕ್ಷರುಗಳಾದ ಭಾರತಿ ಅಮೀನ್, ಪಲ್ಲವಿ ಪ್ರವೀಣ್, ಕಾರ್ಯದರ್ಶಿಗಳಾದ ಲಕ್ಷ್ಮೀಶೆಟ್ಟಿ, ಲಕ್ಷ್ಮೀ ಕಿಣಿ, ಕೋಶಾಧಿಕಾರಿ ಸುಚಿತ್ರಾ ಶೆಟ್ಟಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ಶುಭಾ ಪಿ ಶೆಟ್ಟಿ, ಮಮತಾ ಸುವರ್ಣ ಹಾಗೂ ಪ್ರಮೀಳಾ ಪೂಜಾರಿ. ಪುರಸಭೆಯ ಮಾಜಿ ಅಧ್ಯಕ್ಷರಾದ ಸುಮಾಕೇಶವ್, ಪದಾಧಿಕಾರಿಗಳಾದಂತಹ ಜ್ಯೋತಿ ರಮೇಶ್, ಗೀತಾ ದಾನಶಾಲೆ, ದೀಪಾ ನಾಯಕ್, ಜ್ಯೋತಿ ಬಬಿತಾ, ನಿರೀಕ್ಷಾ ರಾಜೇಶ್, ರಜನಿ ಹೆಗ್ಡೆ, ಸ್ವಾತಿ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.

ಬಜಗೋಳಿಯ ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿ ನೇಮಕ

0

ಬಜಗೋಳಿ ಸೀಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಪ್ರಕಾಶ್ ಪೂಜಾರಿಯವರು ನೇಮಕಗೊಂಡಿದ್ದಾರೆ.

ಪ್ರಕಾಶ್ ಪೂಜಾರಿಯವರು ಜೇಸಿಐ ಅಲುಮಿನಿ ಕ್ಲಬ್ ವಲಯ 15ರ ಜೇಸಿಐ ರೀಜಿನಲ್ ಚ್ಯಾರ್‌ಮೆನ್, ಕೆರ್ವಾಶೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಗೋಪಾಲಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ, ಕೆರ್ವಾಶೆ ಗ್ರಾಮದ ಬಿಲ್ಲವ ಸಮಾಜದ ಅಧ್ಯಕ್ಷ, ಯುವವಾಹಿನಿ ಕಾರ್ಕಳ ಘಟಕದ ಉಪಾಧ್ಯಕ್ಷ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರೀಯಾಶೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದೀಗ ಬಜಗೋಳಿ ಸೀಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಪಟಾಕಿ ಸಿಡಿಸಿ 250 ಮಂದಿ ಕಣ್ಣಿಗೆ ಹಾನಿ

0

 

ದೀಪಾವಳಿ ಹಿನ್ನಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಗಳೂರಿನಲ್ಲಿ ಸುಮಾರು 250 ಮಂದಿ ಕಣ್ಣಿಗೆ ಹಾನಿಯಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 44, ನಾರಾಯಣ ನೇತ್ರಾಲಯದಲ್ಲಿ 90, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 13, ಮೋದಿ ಆಸ್ಪತ್ರೆಯಲ್ಲಿ 3, ಅಗರವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 9 ಮಂದಿ ಸಹಿತ ನಗರದಾದ್ಯಂತ ಒಟ್ಟು 250 ಮಂದಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕುಕ್ಕುಂದೂರು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದ ಅನುವಂಶಿತ ಆಡಳಿತ ಮೊಕ್ತೇಸರ ಕೆ. ರತ್ನರಾಜ ಮುದ್ಯರು ನಿಧನ

0

ಕುಕ್ಕುಂದೂರು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದ ಅನುವಂಶಿತ ಆಡಳಿತ ಮೊಕ್ತೇಸರ ಕೆ. ರತ್ನರಾಜ ಮುದ್ಯರು ನಿಧನ

ಕಾರ್ಕಳ:ಕುಕ್ಕುಂದೂರು ಗುಡ್ಡೆಗುತ್ತು ಕೆ. ರತ್ನರಾಜ ಮುದ್ಯರು ಹಿರಿಯಂಗಡಿ ಬಸದಿ,ಪಿಲಿಚಂಡಿ ತಾಣ ,ಕುಕ್ಕಿಕಟ್ಟೆ ಗರಡಿಯ ಹಾಗೂ ಕುಕ್ಕುಂದೂರು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದ ಅನುವಂಶಿತ ಆಡಳಿತ ಮೊಕ್ತೇಸರರು ಕೆ. ರತ್ನರಾಜ ಮುದ್ಯರು ಆಕ್ಟೋಬರ್ 23 ರಂದು ನಿಧನರಾಗಿದ್ದಾರೆ.

ದಿ| ಎಂ.ಕೆ. ವಿಜಯ ಕುಮಾರ್‌ ರವರಿಗೆ ಕಾರ್ಕಳ ಬಿಜೆಪಿ ವತಿಯಿಂದ ಅ.25 ರಂದು ನುಡಿನಮನ ಕಾರ್ಯಕ್ರಮ

0

 

ಅ. 03 ಶುಕ್ರವಾರದಂದು ನಮ್ಮನ್ನು ಅಗಲಿದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿಗಳಾದ ಎಂ. ಕೆ. ವಿಜಯ್‌ ಕುಮಾರ್‌ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ.

ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ ವತಿಯಿಂದ ಬಿ ಮಂಜುನಾಥ ಪೈ ಸಭಾಂಗಣದಲ್ಲಿ ಅ. 25 ರಂದು ಬೆಳಿಗ್ಗೆ 10.00 ಗಂಟೆಗೆ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಿರಿಯರು, ಶಾಸಕರು, ಪ್ರಮುಖರು ಭಾಗವಹಿಸಲಿದ್ದಾರೆ.

ಎಂ ಕೆ ವಿಜಯ ಕುಮಾರ್‌ ರವರ ಅಭಿಮಾನಿಗಳು, ಪಕ್ಷದ ಹಿರಿಯರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಗಲಿದ ಹಿರಿಯ ಚೇತನಕ್ಕೆ ನಮನ ಸಲ್ಲಿಸಬೇಕಾಗಿ ಕಾರ್ಕಳ ಬಿಜೆಪಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಕಳ : ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ರೊ .ಜನಾರ್ಧನ್ ಇಡ್ಯಾ ರವರಿಂದ ವಿಜೇತ ವಿಶೇಷ ಶಾಲೆಗೆ ಧನ ಸಹಾಯ

0

 

ಕಾರ್ಕಳ ಕುಕ್ಕುಂದೂರು ವಿಜೇತ ವಿಶೇಷ ಶಾಲೆಗೆ ಕಾರ್ಕಳ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ .ಜನಾರ್ಧನ್ ಇಡ್ಯಾ ರವರಿಂದ ದೇಣಿಗೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರು ರೋಟರಿಯ ಮುಖ್ಯ ಧ್ಯೇಯದಂತೆ ಸಮುದಾಯ ಸೇವೆಯಲ್ಲಿ ತೊಡಗಿಸಿಕೊಂಡ ಜನಾರ್ಧನ್ ಇಡ್ಯಾ ದಂಪತಿಗಳು ವಿಜೇತ ವಿಶೇಷ ಶಾಲೆಗೆ ನೀಡುತ್ತಿರುವ ಕೊಡುಗೆಯು ಇತರರಿಗೆ ಪ್ರೇರಣೆಯಾಗಲಿ ಎಂದರು.

ರೂ.50,000/-ದ ಚೆಕ್ಕನ್ನು ಸಂಸ್ಥೆಗೆ ಹಸ್ತಾಂತರಿಸಿ ಮಾತನಾಡಿದ ಜನಾರ್ಧನ್ ಇಡ್ಯಾ ರವರು ಈ ಸಂಸ್ಥೆಯ ಮಾನವೀಯ ಸೇವೆ, ಶಿಕ್ಷಕಿಯರ ತ್ಯಾಗ, ತಾಳ್ಮೆ ಮತ್ತು ಸೇವಾ ಮನೋಭಾವನೆ ಪ್ರಶಂಸನೀಯ. ಇಂತಹ ಸಂಸ್ಥೆಗೆ ಎಲ್ಲರ ಸಹಕಾರ ದೊರೆಯಲಿ ಎಂದರು.

ದೇವರ ಮಕ್ಕಳಿಗೆ ರೋಟರಿ ವತಿಯಿಂದ ಸಿಹಿ ತಿಂಡಿ ಹಂಚಲಾಯಿತು.

ರೋಟರಿ ಕ್ಲಬ್ ಕಾರ್ಕಳ ಇದರ ಕಾರ್ಯದರ್ಶಿ ಚೇತನ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಕ್ಲಬ್ಬಿನ ಸದಸ್ಯರಾದ ಜಗದೀಶ್ ಟಿ ಎ., ಸುರೇಶ್ ನಾಯಕ್, ವಸಂತ್ ಎಂ,ಅರುಣ್ ಕುಮಾರ್ ಶೆಟ್ಟಿ, ಬಾಲಕೃಷ್ಣ ದೇವಾಡಿಗ ಉಪಸ್ಥಿತರಿದ್ದರು.

ವಿಶೇಷ ಶಾಲೆಯ ಮುಖ್ಯಸ್ಥೆ ಡಾ.ಕಾಂತಿ ಹರೀಶ್ ಸ್ವಾಗತಿಸಿದರು. ಶಿಕ್ಷಕಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಕಳ: ಅಕ್ರಮ ಕಲ್ಲು ಗಣಿಗಾರಿಕಾ ಪ್ರದೇಶಕ್ಕೆ ಪೋಲೀಸರ ದಾಳಿ

0

 

ಜಾರ್ಕಳ ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಯ ಕೋರೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಅ.22 ರಂದು ನಡೆದಿದೆ.

ಕಾರ್ಕಳ ಪೊಲೀಸ್ ಉಪನಿರೀಕ್ಷಕರಾದ ಮುರಳೀಧರ ನಾಯ್ಕ್ ರವರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಎರ್ಲಪಾಡಿ ಗ್ರಾಮದ ಜಾರ್ಕಳದ ಗಣಿಗಾರಿಕಾ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ರಾಜೇಶ್ ಶೆಟ್ಟಿ ಎಂಬಾತ ಯಾವುದೇ ಪರವಾನಿಗೆ ಹೊಂದದೇ, ಕಪ್ಪು ಕಲ್ಲುಗಳನ್ನು ಮಾರಾಟಕ್ಕಾಗಿ ಸಂಗ್ರಹ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯು ಸ್ವಂತ ಲಾಭಕ್ಕಾಗಿ ಗಣಿಗಾರಿಕೆ ನಡೆಸಿ ಕಳವು ಮಾಡಿದ್ದಾಗಿ ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

0

 

ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಯಾವುದೇ ಸಮಯದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.

ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.

ಈಗಾಗಲೇ ಹವಾಮಾನ ಇಲಾಖೆ ಅ.29 ರವರೆಗೆ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರಲಿದೆ. ಹೀಗಾಗಿ ಹೇಮಾವತಿ ನದಿ ಪಾತ್ರ, ನದಿ ದಂಡೆ, ನದಿಯ ಅಸುಪಾಲಿನಲ್ಲಿರುವ ಎಲ್ಲಾ ಗ್ರಾಮಸ್ಥರು, ಸ್ಥಳೀಯರು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಲ್ಲಿ ತಕ್ಷಣವೇ ತೆರಳುವಂತೆ ಸೂಚನೆ ನೀಡಲಾಗಿದೆ.

ಕಂದಾಯ ಇಲಾಖೆ, ತಹಸೀಲ್ದಾರ್‌ ಸೇರಿದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಮಾವತಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜ್ಯೋತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹೇಮಾವತಿ ಜಲಾಶಯ 37.103 ಟಿಎಂಸಿ ನೀರಿನ ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 36.620 ಟಿಎಂಸಿ ನೀರು ಸಂಗ್ರಹವಾಗಿದೆ.

ಜೆಸಿಐ ಬೆಳ್ಮಣ್ ಘಟಕಕ್ಕೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ.

0

ಜೆಸಿಐ ಬೆಳ್ಮಣ್ ಘಟಕಕ್ಕೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ.

ಜೆಸಿಐ ಬೆಳ್ಮಣ್ ಘಟಕಕ್ಕೆ ಈ ವಾರಾಂತ್ಯದಲ್ಲಿ ಮಂಗಳೂರಿನಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ವಲಯ 15ರ ವ್ಯಾಪ್ತಿಯ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿಯು ದೊರೆತಿದೆ. ಈ ವಲಯ 15ರ ವ್ಯಾಪ್ತಿಯಲ್ಲಿ 70ಕ್ಕಿಂತ ಅಧಿಕ ಕ್ರಿಯಾಶೀಲ ಘಟಕಗಳು ಇದ್ದು ಜೆಸಿ ಪ್ರದೀಪ್ ಶೆಟ್ಟಿ ನೇತೃತ್ವದ ಜೇಸಿಐ ಬೆಳ್ಮಣ್ ಸಂಸ್ಥೆಯು 2025ರ ವರ್ಷದಲ್ಲಿ ಮಾಡಿದ ಅತ್ಯುತ್ತಮ ಕಾರ್ಯಕ್ರಮಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಅದರ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವ ವಿಕಸನ ವಿನ್ನರ್, ವೀರೇಂದ್ರ ಆರ್ ಕೆ ಅವರಿಗೆ ಅತ್ಯುತ್ತಮ ಕಾರ್ಯದರ್ಶಿ ರನ್ನರ್ ಪ್ರಶಸ್ತಿ, ನಾಗೇಶ್ ಆಚಾರ್ಯ ಅವರಿಗೆ ಅತ್ಯುತ್ತಮ ನವ ಜೇಸಿಐ ಸದಸ್ಯ ವಿನ್ನರ್, ಸೌಜನ್ಯ ಸತೀಶ್ ಕೋಟ್ಯಾನ್ ಅವರಿಗೆ ಅತ್ಯುತ್ತಮ ಮಹಿಳಾ ಜೆಸಿಐ ಸದಸ್ಯೆ ರನ್ನರ್ ಪ್ರಶಸ್ತಿಗಳು ದೊರೆತಿವೆ.

ಮಂಗಳೂರಿನಲ್ಲಿ ನಡೆದ ಕಹಳೆ ಹೆಸರಿನ ವಲಯದ ಸಮ್ಮೇಳನದಲ್ಲಿ ಈ ಪ್ರಶಸ್ತಿಗಳನ್ನು ವಲಯಾಧ್ಯಕ್ಷ ಅಭಿಲಾಷ್ ಬಿ ಏ ಅವರು ಹಸ್ತಾಂತರ ಮಾಡಿ ಅಭಿನಂದಿಸಿದರು. ವಲಯ ಉಪಾಧ್ಯಕ್ಷ ಪ್ರಶಾಂತ್ ಕುಮಾರ್, ವಲಯದ ಮೊದಲ ಮಹಿಳೆ ಶೀಲಾ ಮತ್ತು ಜೆಸಿಐ ಬೆಳ್ಮಣ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಟಿತರಿದ್ದರು.

ಜೇಸಿಐ ಭಾರತ ವಲಯ 15ರ ಅತ್ಯುತ್ತಮ ಘಟಕ ಅಧ್ಯಕ್ಷರಾಗಿ ಶ್ವೇತಾ ಎಸ್. ಜೈನ್

0

ಜೇಸಿಐ ಭಾರತ ವಲಯ 15ರ ಅತ್ಯುತ್ತಮ ಘಟಕ ಅಧ್ಯಕ್ಷರಾಗಿ ಶ್ವೇತಾ ಎಸ್. ಜೈನ್

ಮಂಗಳೂರು:ಜೇಸಿಐ ಭಾರತ ವಲಯ 15ರ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಶ್ವೇತಾ ಎಸ್. ಜೈನ್ ಪಡೆದಿದ್ದಾರೆ.

52 ವರ್ಷಗಳ ಸುದೀರ್ಘ ಇತಿಹಾಸವಿರುವ ಜೆಸಿಐ ಕಾರ್ಕಳ ಘಟಕದ ಪ್ರಸಕ್ತ ವರ್ಷದ ಅಧ್ಯಕ್ಷೆ ಶ್ವೇತಾ ಎಸ್. ಜೈನ್ ಅವರು ಈ ವರ್ಷದಲ್ಲಿ ಮಾಡಿದಂತಹ ಅನೇಕ ಸಮಾಜಮುಖಿ ಕಾರ್ಯಕ್ರಮ, ಶೈಕ್ಷಣಿಕ ಕಾರ್ಯಕ್ರಮಗಳು ಹಾಗೂ ತರಬೇತಿ ಕಾರ್ಯಕ್ರಮಗಳಿಗಾಗಿ ಜೆಸಿಐ ವಲಯ 15 ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿ ಔಟ್ ಸ್ಟ್ಯಾಂಡಿಂಗ್ ಪ್ರೆಸಿಡೆಂಟ್ ವಿನ್ನರ್ ಅವಾರ್ಡ್ ಅನ್ನು ಪಡೆದುಕೊಂಡಿರುತ್ತಾರೆ. ಘಟಕವು ಜೇಸಿವೀಕ್ ವಿಭಾಗದಲ್ಲಿ ರನ್ನರ್, ಸ್ಪೋರ್ಟ್ಸ್‌ ವಿಭಾಗದಲ್ಲಿ ರನ್ನರ್, ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ರನ್ನರ್ ಪ್ರಶಸ್ತಿಯನ್ನು ಪಡೆದಿದೆ. ಅದರೊಂದಿಗೆ ಪ್ರತಿಯೊಂದು ವಿಭಾಗದಲ್ಲೂ 25ಕ್ಕೂ ಹೆಚ್ಚು ಮನ್ನಣೆ ದೊರೆತಿದೆ.
ಅ. 18-19ರಂದು ಮಂಗಳೂರಿನ ಸ್ವಸ್ತಿಕ ವಾಟರ್ ಫ್ರಂಟ್‌ನಲ್ಲಿ ನಡೆದ ಜೇಸಿಐ ವಲಯ 15ರ ಕಹಳೆ ಸಮ್ಮೇಳನದಲ್ಲಿ ವಲಯಾಧ್ಯಕ್ಷ ಅಭಿಲಾಶ್ ಬಿ. ಎ. ಅವರು ಶ್ವೇತಾ ಎಸ್. ಜೈನ್ ಅವರಿಗೆ ಪ್ರಶಸ್ತಿ ಹಸ್ತಾಂತರಿಸಿದರು. ಈ ಸಂಧರ್ಭ ಜೆಸಿಐ ಕಾರ್ಕಳ ಘಟಕದ ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.