Home Blog Page 28

ಕಾರ್ಕಳ: ಅನಾರೋಗ್ಯದಿಂದ ನಿಧನ-ಶವ ಮನೆಯೊಳಗಡೆ ಕೊಳೆತ ಸ್ಥಿತಿಯಲ್ಲಿ ಪತ್ತೆ

0

ವ್ಯಕ್ತಿಯೋರ್ವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮನೆಯಲ್ಲಿ ಮೃತಪಟ್ಟು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾರ್ಕಳದ ನಲ್ಲೂರು ಗ್ರಾಮದ ಹೊಸಮನೆ ಪೆರೆಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ರಘುರಾಮ (65) ಎಂದು ಗುರ್ತಿಸಲಾಗಿದೆ. ಇವರ ಮನೆಯವರು ಕಳೆದ 15 ವರ್ಷಗಳಿಂದ ಬೇರೆ ವಾಸವಾಗಿದ್ದು, ಇವರು ಮಾತ್ರ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಬಿ.ಪಿ., ಶುಗರ್‌, ಹರ್ನಿಯ ಸಮಸ್ಯೆಗೆ ಒಳಗಾಗಿದ್ದು, ಎಡಕಾಲಿಗೆ ಗ್ಯಾಂಗ್ರಿನ್‌ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಕಳೆದ ವಾರವಷ್ಟೇ ಚಿಕಿತ್ಸೆ ಪಡೆದಿದ್ದರು. ತದನಂತರದಲ್ಲಿ ಅರೋಗ್ಯ ಸಮಸ್ಯೆ ತೀವ್ರವಾಗಿ ಆ.25 ರಿಂದ 28 ರ ವರೆಗಿನ ಅವಧಿಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ದುರ್ವಾಸನೆ ಬಂದ ಕಾರಣ ಸ್ಥಳೀಯರು ಮನೆ ಪರೀಕ್ಷಿಸಿದಾಗ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: SVT ಕಾಲೇಜಿನಲ್ಲಿ 2025-26ನೇ ಸಾಲಿನ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ

0

ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ 2025-26ನೇ ಸಾಲಿನ ಸಾಹಿತ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

ಶಿಕ್ಷಕಿ, ಸಾಹಿತಿ ಪ್ರಜ್ವಲಾ ಶೆಣೈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಸಾಹಿತ್ಯ ಸಂಘದ ಮಹತ್ವವನ್ನು ತಿಳಿಸಿ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ ಜಿ. ವಹಿಸಿದ್ದರು. ವೇದಿಕೆಯಲ್ಲಿ ಸಾಹಿತ್ಯ ಸಂಘದ ಕಾರ್ಯದರ್ಶಿಗಳಾದ ಕು. ಮಂಜುಳಾ ತೃತೀಯ ಬಿ.ಎ, ಜಿಶಾ ತೃತೀಯ ಬಿ.ಕಾಂ ಉಪಸ್ಥಿತರಿದ್ದರು.

ಸಾಹಿತ್ಯ ಸಂಘದ ಅಧ್ಯಕ್ಷರಾದ ಕನ್ನಡ ಉಪನ್ಯಾಸಕಿ ರೇಖಾ ಸ್ವಾಗತಿಸಿದರು. ಕು.ದೀಪ ತೃತೀಯ ಬಿ.ಕಾಂ. ಕಾರ್ಯಕ್ರಮ ನಿರೂಪಿಸಿ, ಕು. ಮಂಜುಳಾ ತೃತೀಯ ಬಿ.ಎ ವಂದಿಸಿದರು.

ಕ್ರೈಸ್ಟ್ ಕಿಂಗ್: ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ವಿದ್ಯಾವರ್ಧಕ ಪ್ರೌಢಶಾಲೆ ಮುಂಡ್ಕೂರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಒಂಬತ್ತನೇ ತರಗತಿಯ ಶೈನಿ ಡಿಸೋಜಾ, ಶಗುನ್ ವರ್ಮಾ, ಕಾರ್ತಿಕಾ ಶೆಟ್ಟಿ, ಆಶಿಕಾ, ಹತ್ತನೇ ತರಗತಿಯ ವಿದ್ಯಾಶ್ರೀ, ಕೀರ್ತನಾ ಡಿಸೋಜ, ಎಂಟನೇ ತರಗತಿಯ ಸಾನ್ವಿ ಶೆಟ್ಟಿ ತಂಡವನ್ನು ಪ್ರತಿನಿಧಿಸಿದ್ದರು. ಈ ಪಂದ್ಯಾಟದಲ್ಲಿ ಶಗುನ್ ವರ್ಮಾ ಬೆಸ್ಟ್ ಅಟ್ಯಾಕರ್ ಮತ್ತು ಶೈನಿ ಡಿಸೋಜ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡರು.

19ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ

0

 

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ 19ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮವು ವಿಜೃಂಭಣೆಯಿಂದ ಜರಗಿತು.

ಬೆಳಿಗ್ಗೆಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ, ಸಾರ್ವಜನಿಕ ಗಣ ಹೋಮ, ಕುಣಿತ ಭಜನಾ ಕಾರ್ಯಕ್ರಮ, ಚೆಂಡೆವಾದನ, ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.

ಕ್ರೈಸ್ಟ್ ಕಿಂಗ್ : ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಹಾಗೂ ಪ್ರೌಢಶಾಲಾ ಬಾಲಕರ ತಂಡ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ಆಶ್ರಯದಲ್ಲಿ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ 14/17ರ ವಯೋಮಿತಿ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ 14ರ ವಯೋಮಿತಿಯ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆಯ 17ರ ವಯೋಮಿತಿಯ ಬಾಲಕರ ತಂಡಗಳು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿವೆ.

14ರ ವಯೋಮಿತಿಯ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಖುಷಿ ಶೆಟ್ಟಿ, ಆರನೇ ತರಗತಿಯ ತ್ರಿಷ್ಮ ಎಸ್. ಹಾಗೂ ಕೆಟ್ಲಿನ್ ಏಂಜೆಲ್ ಪಿಂಟೊ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾದರೆ ಪ್ರೌಢಶಾಲಾ ಬಾಲಕರ 17ರ ವಯೋಮಿತಿಯ ತಂಡವನ್ನು ಪ್ರತಿನಿಧಿಸಿದ್ದ ಹತ್ತನೇ ತರಗತಿಯ ಗೌರವ್ ಆರ್, ಪ್ರಥಮ್ ಶೆಟ್ಟಿ, ಶೋಭಿತ್ ಕೆ ಎಚ್ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಬಯಿ ಹೊಟೇಲ್ ಉದ್ಯಮಿ ಎಣ್ಣೆಹೊಳೆ ಸಂತೋಷ್ ಶೆಟ್ಟಿ ಕೊ*ಲೆ

0

 

ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ (46)ಯವರನ್ನು ಅದೇ ಹೊಟೇಲ್ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಉತ್ತರ ಪ್ರದೇಶ ಮೂಲದ ಸಿಬ್ಬಂದಿಯೋರ್ವನಿಗೆ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ, ಕತ್ತಿ ಹಿಡಿದುಕೊಂಡು ಬಂದು ಸಂತೋಷ್ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು ಹತ್ಯೆ ಮಾಡಿದ್ದಾನೆ. ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕಾರ್ಕಳ ಬಿಜೆಪಿ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತಾ ಸಭೆ

0

ಬಿಜೆಪಿಯ ಸಂಘಟನಾ ಪರ್ವದ ಅಂಗವಾಗಿ ಪಕ್ಷ ಸಂಘಟನೆಯ ವಿವಿಧ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಶಾಸಕರ ಮನೆಯಲ್ಲಿ ವಿಶೇಷ ಸಭೆ ನಡೆಯಿತು.

ಬಿಜೆಪಿ ಪಕ್ಷ ಸಂಘಟನೆ ಮತ್ತು ವಿವಿಧ ಶಕ್ತಿಕೇಂದ್ರ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯತ್ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ ಮಾನ್ಯ ಶಾಸಕರು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ಎಡಪಂಥೀಯರು ವ್ಯವಸ್ಥಿತ ಷಡ್ಯಂತ್ರ ರೂಪಿಸಿ ದಾಳಿ ನಡೆಸುತ್ತಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು, ಹಾಗೂ ನಮ್ಮ ಸಮಾಜದಲ್ಲಿ ಕೂಡ ಜಾಗೃತಿ ಮೂಡಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಕ್ಷೇತ್ರಾಧ್ಯಕ್ಷ ನವೀನ್ ನಾಯಕ ಎಲ್ಲಾ ಶಕ್ತಿ ಕೇಂದ್ರ ಹಾಗೂ ಗ್ರಾಮ ಸಮಿತಿಗಳ ಅಧ್ಯಕ್ಷರುಗಳಿಂದ ಪ್ರಸ್ತುತ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ಪಡೆದು ಮುಂದಿನ ಯೋಜನೆಗಳು ಹಾಗೂ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಶಾಸಕ ವಿ ಸುನಿಲ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಮಹಾವೀರ್ ಹೆಗ್ಡೆ, ಜಯರಾಮ್ ಸಾಲಿಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪಕ್ಷದ ಪ್ರಮುಖರಾದ ಮಣಿರಾಜ್ ಶೆಟ್ಟಿ, ರವೀಂದ್ರ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ ಶಿವಪುರ, ಕಾರ್ಯದರ್ಶಿಗಳಾದ ಪ್ರವೀಣ್ ಸಾಲಿಯಾನ್, ಕರುಣಾಕರ ಕೋಟ್ಯಾನ್, ಮಂಡಲ ಪದಾಧಿಕಾರಿಗಳು, ಶಕಿಕೇಂದ್ರ ಅಧ್ಯಕ್ಷರುಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಪ್ರಕೋಷ್ಠಾಗಳ ಪ್ರಮುಖರು ಹಾಗೂ ಪಕ್ಷದ ವಿವಿಧ ಗ್ರಾಮಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಂಡಲ ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನ ಆಭರಣಗಳ ದರದಲ್ಲಿ ವಿಶೇಷ ರಿಯಾಯಿತಿ

0

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕಾರ್ಕಳದ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ನಲ್ಲಿ ಆಭರಣಗಳು ವಿಶೇಷ ರಿಯಾಯಿತಿ ದರದಲ್ಲಿ ದೊರೆಯಲಿದೆ.

ಪ್ರತಿ ಗ್ರಾಂ ಬಂಗಾರಕ್ಕೆ ರೂ. 400 ರ ತನಕ ಹಾಗೂ ಪ್ರತಿ ಕ್ಯಾರೆಟ್ ಡೈಮಂಡ್ ಗೆ 5,ಸಾವಿರ ರೂ. ರಿಯಾಯಿತಿ ದೊರೆಯಲಿದೆ. ಬೆಳ್ಳಿಯ ಕಲಾಕೃತಿಗಳು ಪ್ರತಿ ಕೆಜಿಗೆ 3 ಸಾವಿರ ರಿಯಾಯಿತಿ ದರದಲ್ಲಿ ದೊರೆಯಲಿದ್ದು ಬೆಳ್ಳಿಯ ಆಭರಣಗಳು 10% ರಿಯಾಯಿತಿ ದರದಲ್ಲಿ ದೊರೆಯಲಿದೆ. ಈ ಆಫರ್ಸ್ ಆ.31 ವರೆಗೆ ಅನ್ವಯಿಸಲಿದ್ದು, ಕಾರ್ಕಳದ ಜೋಡು ರಸ್ತೆಯಲ್ಲಿರುವ ಸ್ವರ್ಣ ಪ್ರಕಾಶ್ ಜುವೆಲ್ಲರ್ಸ್ ಗೆ ಭೇಟಿ ನೀಡಿ ಈ ಕೊಡುಗೆಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7204429777 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ವಿದ್ಯಾರ್ಥಿ

0

 

ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟದಲ್ಲಿ ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಕುತ್ತಿಗೆಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿ ಅದನ್ನು ಕೈಯಲ್ಲಿ ಪಡೆದುಕೊಂಡಿದ್ದಾರೆ. ಈ ಕುರಿತ ವೀಡಿಯೊ ವೈರಲ್ ಆಗಿದೆ.

ಶೂಟಿಂಗ್ ಕ್ರೀಡಾಕೂಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅಣ್ಣಾಮಲೈ ವಿಜೇತರಿಗೆ ಪದಕ ಹಾಕುತ್ತಿದ್ದರು. ಆದರೆ ಅಣ್ಣಾಮಲೈ ಪದಕ ಹಾಕಲು ಮುಂದಾದಾಗ ಸೂರ್ಯ ರಾಜ ಬಾಲು ನಿರಾಕರಿಸಿದ್ದಾರೆ.

ಇದಕ್ಕೂ ಮೊದಲು ತಿರುನಲ್ವೇಲಿಯ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಸಂಶೋಧಕಿ ಜೀನ್ ಜೋಸೆಫ್ ರಾಜ್ಯಪಾಲ ಆರ್.ಎನ್. ರವಿಯವರಿಂದ ಡಾಕ್ಟರೇಟ್ ಪದವಿಯ ಪ್ರಮಾಣ ಪತ್ರ ಪಡೆಯಲು ನಿರಾಕರಿಸಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಸ್.ಐ.ಟಿ.

0

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆದೊಯ್ದಿದ್ದಾರೆ.

ಸಾಕ್ಷಿದಾರನಾಗಿ ಆಗಮಿಸಿ ಈಗ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.

ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಹೇಳಿದ್ದ.

ಈ ಕಾರಣಕ್ಕೆ ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಮತ್ತು ಮೊಬೈಲ್‌ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ.