Home Blog Page 63

ಕ್ರೈಸ್ಟ್ ಕಿಂಗ್: ಪ್ರಥಮ ಪಿಯುಸಿ ಆರಂಭೋತ್ಸವ

0

ಕ್ರೈಸ್ಟ್ ಕಿಂಗ್: ಪ್ರಥಮ ಪಿಯುಸಿ ಆರಂಭೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಆರಂಭೋತ್ಸವ ಸಂಸ್ಥೆಯ ನೂತನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಮುಖ್ಯಶಿಕ್ಷಕ ಹಾಗೂ ವಾಗ್ಮೀ ಮುನಿರಾಜ ರೆಂಜಾಳ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ದೀಪ ಬೆಳಗಿ ಪ್ರಥಮ ಪಿಯುಸಿ ಆರಂಭೋತ್ಸವನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದ ಅವರು “ಮಕ್ಕಳು ಒಳ್ಳೆಯ ಶಿಕ್ಷಣ ಪಡೆದು, ಒಳ್ಳೆಯ ಮನುಷ್ಯರಾಗಿ, ಒಳ್ಳೆಯ ಬದುಕನ್ನು ಬದುಕಬೇಕು. ಅದರೊಂದಿಗೆ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಜೊತೆಗೆ ಪ್ರೀತಯಿಂದ ಮಾತನಾಡಬೇಕು, ಆ ಮೂಲಕ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಮೂಡಿಸಬೇಕು” ಎಂದು ಹೇಳಿದರು.

ಇನ್ನೋರ್ವ ಅತಿಥಿ ಉದ್ಯಮಿ ವಿವೇಕಾನಂದ ಶೆಣೈ ಅವರು ಮಾತನಾಡಿ “ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಡುವ ಪರಿಶ್ರಮದ ಬಗ್ಗೆ ಅರಿತುಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸುವುದರಲ್ಲಿಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಈ ಕಾರ್ಕಳಕ್ಕೆ ಮಾದರಿ ಸಂಸ್ಥೆಯಾಗಿದೆ” ಎಂದು ಹೇಳಿದರು.

ಶಿಕ್ಷಕ –ರಕ್ಷಕ ಸಂಘದ ಮಾಜೀ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಹಾಲಿ ಅಧ್ಯಕ್ಷ ಪ್ರಕಾಶ್ ಡಿಸೋಜ, ಸಂಸ್ಥೆಯ ವಿದ್ಯಾರ್ಥಿ ಆಪ್ತ ಸಮಾಲೋಚಕರಾದ ಡಾ.ಸಿಸ್ಟರ್ ಶಾರ್ಲೆಟ್ ಸಿಕ್ವೇರಾ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ನೀಟ್ ಸಂಯೋಜಕ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಮೌನೇಶ್ವರ ಆಚಾರ್ಯ ಪ್ರಸ್ತಾವನೆಗೈದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೇ ರ‍್ಯಾಂಕ್, ಕೆಸಿಇಟಿ ಪರೀಕ್ಷೆಯ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 57ನೇ ರ‍್ಯಾಂಕ್ ಹಾಗೂ ರಾಷ್ಟ್ರಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ 99.69 ಪರ್ಸೆಂಟೈಲ್ ಪಡೆದ ಸಂಸ್ಥೆಯ ಸಾಧಕ ವಿದ್ಯಾರ್ಥಿ ಅನಂತ್ ಎನ್.ಕೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಸ್ವಾಗತಿಸಿ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಮ್ಯ ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಮೇ.30:ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

0

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪ್ರತಿಭಾ ಪುರಸ್ಕಾರ:ರೂ.1 ಕೋಟಿ 5 ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ

ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ವಿ.ವಿ.ಕುಲಪತಿ ಪ್ರೊ.ಪಿ.ಎಲ್.ಧರ್ಮ ಭಾಗಿ ಶಾಸಕರಾದ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ

ಗಣಿತ ನಗರ : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು 30.05.2025ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆ ತಲಾ ರೂ. ಒಂದು ಸಾವಿರದಂತೆ ರೂ. 7 ಲಕ್ಷದ 21 ಸಾವಿರ ಸೇರಿದಂತೆ ಒಟ್ಟು ರೂ. 1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೋ.ಪಿ. ಎಲ್. ಧರ್ಮರವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹತ್ತರೊಳಗಿನ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಪ್ರಕಟಣೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22 ರಂದು ನಡೆಯುವ ಎರಡನೇ ಹಂತದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿ ಒಟ್ಟು 1 ಕೋಟಿ 79 ಲಕ್ಷದ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ರೂ. 51 ಲಕ್ಷದ 64 ಸಾವಿರವನ್ನು ನೀಡಲಾಗಿರುವುದನ್ನು ಸ್ಮರಿಸಿಕೊಳ್ಳ ಬಹುದು.

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

0

ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5.00 ಕೋಟಿ ರೂಪಾಯಿ ಅನುದಾನ ಬಿಡುಗಡೆ.-ವಿ ಸುನಿಲ್‌ ಕುಮಾರ್

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 05.00 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ‌. ಸುನಿಲ್ ಕುಮಾರ್ ತಿಳಿಸಿದ್ದಾರೆ

ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ವಿ.ಸುನಿಲ್‌ ಕುಮಾರ್‌ ರವರು ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಕಾರಣ ಇದೀಗ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.05.00 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತೆ.

ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

0

ಬಿಜೆಪಿಯಲ್ಲಿ ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ-ಎಸ್.ಟಿ.ಸೋಮಶೇಖರ್

ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್‌ಟಿ ಸೋಮಶೇಖರ್ ಹೇಳಿದರು.

ಬಿಜೆಪಿಯ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಸ್‌ಟಿ ಸೋಮಶೇಖರ್ ಅವರು,ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು, ಒಳ್ಳೆಯದಾಯ್ತು ಎಂದರು.

1% ಸಹ ಬೇಸರ, ಅಸಮಾಧಾನ ಇಲ್ಲ. ಉಚ್ಚಾಟನೆ ಮಾಡಿದ್ದು ಖುಷಿ ಇದೆ. ಬಿಜೆಪಿಯಲ್ಲಿ ನನ್ನ ಪರವಾಗಿ ಮಾತನಾಡಲು ಯಾರಿಗೂ ಧೈರ್ಯ ಇಲ್ಲ. ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯರ‍್ಯಾರೋ ಇದ್ದಾರೆ. ಅತ್ಯಾಚಾರದ ಆರೋಪ ಹೊತ್ತಿರೋರು ಇದ್ದಾರೆ. ಅವರೆಲ್ಲರನ್ನೂ ಬಿಟ್ಟು ನನ್ನ ಉಚ್ಛಾಟನೆ ಮಾಡಿದ್ದಾರೆ ಎಂದು ಹೇಳಿದರು.

ಉಚ್ಚಾಟನೆ ಯಾಕೆ ಮಾಡಿದ್ದೀರಿ ಅಂತಾನೂ ಕೇಳೋದಿಲ್ಲ. ನಾನು ಈಗ ಫ್ರೀ ಬರ್ಡ್ ಆಗಿದ್ದೀನಿ. ಇನ್ನು ಫ್ರೀ ಬರ್ಡ್ ಆಗಿ ಓಡಾಡುತ್ತೇನೆ. ಕಾಂಗ್ರೆಸ್ ಇಲ್ಲ, ಬಿಜೆಪಿ ಇಲ್ಲ ಆರಾಮಾಗಿ ಇದ್ದೇವೆ. ಮುಂದಿನ ನಡೆ ಬಗ್ಗೆ ಈಗ ಯೋಚನೆ ಮಾಡಿಲ್ಲ ಎಂದರು.

ಕೆಸಿಇಟಿಯಲ್ಲಿ ಕ್ರೈಸ್ಟ್ ಕಿಂಗ್ ಸಾಧನೆ

0

ಕೆಸಿಇಟಿಯಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಅನಂತ್ ಎನ್.ಕೆ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 57 ನೇ ರ‍್ಯಾಂಕ್
ಸಂಸ್ಥೆಗೆ ಐದು ನೂರರ ಒಳಗಡೆ ಎರಡು ರ‍್ಯಾಂಕ್

ಕಾರ್ಕಳ: ಈ ಬಾರಿಯ ಕೆಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಅನಂತ್ ಎನ್ ಕೆ ಇಂಜಿನಿಯರಿAಗ್‌ನಲ್ಲಿ ರಾಜ್ಯಕ್ಕೆ 57 ನೇ ರ‍್ಯಾಂಕ್ ಹಾಗೂ ಬಿ-ಫಾರ್ಮಾದಲ್ಲಿ 333ನೇ ರ‍್ಯಾಂಕ್ ಪಡೆದುಕೊಳ್ಳುವುದರ ಮೂಲಕ ಸಂಸ್ಥೆಯು ಅಮೋಘ ಸಾಧನೆಯನ್ನು ದಾಖಲಿಸಿದೆ.

ಇದರ ಜೊತೆಗೆ ಸಂಹಿತ್ ಎಸ್ ಆಚಾರ್ಯ ಅಗ್ರಿಕಲ್ಚರ್‌ನಲ್ಲಿ 826ನೇ ರ‍್ಯಾಂಕ್ ಹಾಗೂ ಬಿಎನ್‌ವೈಎಸ್‌ನಲ್ಲಿ 1888ನೇ ರ‍್ಯಾಂಕ್, ಇಂಜಿನಿಯರಿ0ಗ್‌ನಲ್ಲಿ 2527 ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. ಶ್ರೀಯಾ ಅಗ್ರಿಕಲ್ಚರ್‌ನಲ್ಲಿ 1591ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.

ಸಂಸ್ಥೆಯು ಈ ಸಾಲಿನಲ್ಲಿ ಅಗ್ರ ನೂರರ ಒಳಗೆ ಒಂದು, ಐದು ನೂರರ ಒಳಗೆ ಎರಡು, ಸಾವಿರದ ಒಳಗೆ ಮೂರು, ಐದು ಸಾವಿರದ ಒಳಗೆ 15, ಹತ್ತು ಸಾವಿರದ ಒಳಗೆ 29 ರ‍್ಯಾಂಕ್ ಹಾಗೂ ಹದಿನೈದು ಸಾವಿರದ ಒಳಗೆ 40 ರ‍್ಯಾಂಕ್‌ಗಳನ್ನು ಪಡೆದುಕೊಂಡಿದೆ. ಗ್ರಾಮೀಣ ಹಾಗೂ ಬಡ ಸಮುದಾಯದ ವಿದ್ಯಾರ್ಥಿಗಳ ಆಶಾಕಿರಣವಾಗಿ, ದಾಖಲಾತಿಗೆ ಯಾವುದೇ ಅಂಕಗಳ ಮಿತಿಯಿಲ್ಲದೆ ದಾಖಲಾತಿ ನೀಡಿ ಸಿಇಟಿ ತರಬೇತಿ ಪಡೆದ  124 ವಿದ್ಯಾರ್ಥಿಗಳಲ್ಲಿ ಹದಿನೈದು ಸಾವಿರದ ಒಳಗೆ 40 (39%) ರ‍್ಯಾಂಕುಗಳನ್ನು ಗಳಿಸುವ ಮೂಲಕ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಗಮನಾರ್ಹ ಸಾಧನೆ ಮಾಡಿದೆ.

ಶ್ರೀಕಾಂತ್ ಶೆಟ್ಟಿ ಕಾರ್ಕಳ ವಿರುದ್ಧ ಪ್ರಕರಣ ದಾಖಲು

0

ಬಜ್ಪೆ ಚಲೋ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ:ಕಾರ್ಕಳ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ:ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (NIA)ಗೆ ವಹಿಸಬೇಕೆಂದು ಆಗ್ರಹಿಸಿ ಬಜಪೆಯಲ್ಲಿ ನಡೆದಿದ್ದ ‘ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಿದ್ದ ಶ್ರೀಕಾಂತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ Crime no-90/25. Section 189(2)-191(2)-285-192,351(2)-351(3)-190Bns,107-109kP ಆಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಭಾನು ಭಾಸ್ಕರ್ ಪೂಜಾರಿ,ಅನಿತಾ ಡಿ’ಸೋಜಾ ನೇಮಕ

0

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಭಾನು ಭಾಸ್ಕರ್ ಪೂಜಾರಿ,ಅನಿತಾ ಡಿ’ಸೋಜಾ ನೇಮಕ

ಅಖಿಲ ಭಾರತ ಮಾಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಅಲ್ಕಾ ಲಾಂಬಾ ಇವರ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಸೌಮ್ಯಾರೆಡ್ಡಿಯವರು ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ ಹಾಗೂ ಕಾರ್ಕಳ ಮಹಿಳಾ ಕಾಂಗ್ರೇಸ್‌ ನಿಕಟಪೂರ್ವ ಅದ್ಯಕ್ಷರಾದ ಶ್ರೀಮತಿ ಅನಿತಾ ಡಿ’ ಸೋಜಾ ಬೆಳ್ಮಣ್ಣ್ ಇವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್‌

0

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ‍್ಯಾಂಕ್‌

ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ‍್ಯಾಂಕ್‌ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ.
ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್ ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್‌, ಬಿ.ಎನ್.ವೈ.ಎಸ್. ವಿಭಾಗದಲ್ಲಿ 9ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗದಲ್ಲಿ 18 ನೇ ರ‍್ಯಾಂಕ್‌, ಪಶು ವೈದ್ಯಕೀಯ ವಿಭಾಗದಲ್ಲಿ 18ನೇ ರ‍್ಯಾಂಕ್‌, B/ D-ಫಾರ್ಮ್ ವಿಭಾಗಗಳಲ್ಲಿ 25 ನೇ ರ‍್ಯಾಂಕ್‌ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ 34ನೇ ರ‍್ಯಾಂಕ್‌ ಗಳಿಸಿದ್ದಾರೆ.
ಹಾಗು ವಿದ್ಯಾರ್ಥಿ ಹೆಚ್ ಎ ರಾಜೇಶ್ ಬಿ.ಎನ್.ವೈ.ಎಸ್. ವಿಭಾಗದಲ್ಲಿ 35ನೇ ರ‍್ಯಾಂಕ್‌, ಬಿ.ಎಸ್.ಸಿ. ನರ್ಸಿಂಗ್ ವಿಭಾಗ ಮತ್ತು ಪಶು ವೈದ್ಯಕೀಯ ವಿಭಾಗದಲ್ಲಿ 52ನೇ ರ‍್ಯಾಂಕ್‌, B/ D-ಫಾರ್ಮ್ ವಿಭಾಗಗಳಲ್ಲಿ 62 ನೇ ರ‍್ಯಾಂಕ್‌ ಪಡೆದು ಶ್ಲಾಘನೀಯ ಸಾಧನೆ ಮಾಡಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಕೆ. ಪಿ 84ನೇ ರ‍್ಯಾಂಕ್, ಅಭಿನಂದನ್ ಭರಮಪ್ಪ 288 ನೇ ರ‍್ಯಾಂಕ್, ಪ್ರಜ್ವಲ್ ಎಸ್ ಎನ್ 438 ನೇ ರ‍್ಯಾಂಕ್, ಎನ್ ಸಮರ್ಥನ್ 534 ನೇ ರ‍್ಯಾಂಕ್ ಹಾಗೂ ಚೈತನ್ಯ ಜಿ 744 ನೇ ರ‍್ಯಾಂಕ್ ಗಳಿಸಿದ್ದಾರೆ.

ನ್ಯಾಚುರೋಪತಿ ವಿಭಾಗದಲ್ಲಿ ಪ್ರಜ್ವಲ್ ಎಸ್ ಎನ್ 60 ನೇ ರ‍್ಯಾಂಕ್, ಅಭಿನಂದನ್ ಭರಮಪ್ಪ 94 ನೇ ರ‍್ಯಾಂಕ್,
ಗಣೇಶ್ ಜಿ 276ನೇ ರ‍್ಯಾಂಕ್‌,
ಚೈತನ್ಯ ಜಿ 336 ನೇ ರ‍್ಯಾಂಕ್, ಹೇಮಂತ್ ಕುಮಾರ್ 420 ನೇ ರ‍್ಯಾಂಕ್, ಶ್ರೀನಿಧಿ 469 ನೇ ರ‍್ಯಾಂಕ್,
ಧ್ರುವ 444 ನೇ ರ‍್ಯಾಂಕ್ ಹಾಗೂ ಬಿಂದುಪ್ರಿಯ 482 ನೇ ರ‍್ಯಾಂಕ್ ಪಡೆದಿದ್ದಾರೆ.

ಕೃಷಿ ವಿಭಾಗದಲ್ಲಿ ಅಭಿನಂದನ್ ಭರಮಪ್ಪ 60 ನೇ ರ‍್ಯಾಂಕ್, ಪ್ರಜ್ವಲ್ ಎಸ್ ಎನ್ 75 ನೇ ರ‍್ಯಾಂಕ್,
ಚೈತನ್ಯ ಜಿ 123 ನೇ ರ‍್ಯಾಂಕ್, ಗಣೇಶ್ ಜಿ 298 ನೇ ರ‍್ಯಾಂಕ್,
ಬಿಂದುಪ್ರಿಯ 259ನೇ ರ‍್ಯಾಂಕ್ , ಭರತ್ ಕೆ 275 ನೇ ರ‍್ಯಾಂಕ್,
ಹೇಮಂತ್ ಕುಮಾರ್ 326 ನೇ ರ‍್ಯಾಂಕ್, ಶ್ರೀನಿಧಿ 347 ನೇ ರ‍್ಯಾಂಕ್
ಸಂಜನಾ ಕೆ ಆರ್ 337 ನೇ ರ‍್ಯಾಂಕ್, ಪ್ರೇರಣಾ ಪಾಂಡುರಂಗ 428 ನೇ ರ‍್ಯಾಂಕ್,ಹೇಮಂತ್ ಕುಮಾರ್ 420 ನೇ ರ‍್ಯಾಂಕ್, ಸಂಗೀತ ಎಂ 426 ನೇ ರ‍್ಯಾಂಕ್
ಧ್ರುವ 440 ನೇ ರ‍್ಯಾಂಕ್ ಪಡೆದಿದ್ದಾರೆ.

ಪಶು ವೈದ್ಯಕೀಯದಲ್ಲಿ ಪ್ರಜ್ವಲ್ ಎಸ್ ಎನ್ 78 ನೇ ರ‍್ಯಾಂಕ್, ಅಭಿನಂದನ್ ಭರಮಪ್ಪ 116 ನೇ ರ‍್ಯಾಂಕ್, ಧ್ರುವ 238ನೇ ರ‍್ಯಾಂಕ್
ಸಾತ್ವಿಕ್ ಭಂಡಾರಿ 362ನೇ ರ‍್ಯಾಂಕ್, ಪಡೆದಿದ್ದಾರೆ.

ನರ್ಸಿಂಗ್ ವಿಭಾಗದಲ್ಲಿ ಪ್ರಜ್ವಲ್ ಎಸ್ ಎನ್ 78 ನೇ ರ‍್ಯಾಂಕ್, ಅಭಿನಂದನ್ ಭರಮಪ್ಪ 117 ನೇ ರ‍್ಯಾಂಕ್,
ಧ್ರುವ 240 ನೇ ರ‍್ಯಾಂಕ್, ಸಾತ್ವಿಕ್ ಭಂಡಾರಿ 365ನೇ ರ‍್ಯಾಂಕ್, ಪಡೆದಿದ್ದಾರೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು 100 ರ ರ‍್ಯಾಂಕ್ ಒಳಗಿನ 156 ವಿದ್ಯಾರ್ಥಿಗಳು 1000 ರ‍್ಯಾಂಕ್‌ನೊಳಗೆ, 302 ವಿದ್ಯಾರ್ಥಿಗಳು 2000 ರ‍್ಯಾಂಕ್‌ನೊಳಗೆ ಸ್ಥಾನ ಗಳಿಸಿಕೊಂಡಿದ್ದಾರೆ.

ಕಾಲೇಜು ನಿರಂತರ ನಾಲ್ಕು ವರ್ಷಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

 

”ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ”-ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವೇದವ್ಯಾಸ ಕಾಮತ್ ಅವರು ಮಾಹಿತಿಯ ಕೊರತೆ

0

ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇ.50ರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಯಕ್ಷಗಾನ, ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ. ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣ ಒದಗಿಸಲಾಗುತ್ತದೆ. ಸಾಹಿತ್ಯ, ಸಾಂಸ್ಕೃತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ. ಯಾವುದೇ ಸಂಘ, ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ, ಕಮ್ಮಟ, ಸೆಮಿನಾರ್‌ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫಿಕೇಟ್ ಆಯಾ ಸಂದರ್ಭದಲ್ಲಿ ನೀಡಲಾಗುತ್ತಿದೆ.

ತುಳು ಮಾತೃ ಭಾಷಾ ಪ್ರಮಾಣ ಪತ್ರವನ್ನು (ತುಳು ಕೋಟ ಸರ್ಟಿಫಿಕೇಟ್) ಆಯಾ ವಿದ್ಯಾರ್ಥಿಗಳು ವಾಸಿಸುವ ತಾಲೂಕಿನ ತಹಶೀಲ್ದಾರರು ನೀಡುವವರಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಭಾಷಾ ಪ್ರಮಾಣ ಪತ್ರ ನೀಡಲಾಗುತ್ತಿದೆ. ಭಾಷಾ ಪ್ರಮಾಣ ಪತ್ರ ನೀಡುವ ಅಧಿಕಾರ ತಾಲೂಕು ದಂಡಾಧಿಕಾರಿಗಳ ವ್ಯಾಪ್ತಿಗೆ ಸೇರಿದ್ದಾಗಿರುತ್ತದೆ. ಕರ್ನಾಟಕದ ಯಾವುದೇ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಭಾಷಾ ಪ್ರಮಾಣ ನೀಡುವ ಸಕ್ಷಮ ಪ್ರಾಧಿಕಾರವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಭಾಷಾ ಪ್ರಮಾಣ ಪತ್ರದ ಅರ್ಜಿ ನಮೂನೆಯನ್ನು ತುಳು ಅಕಾಡೆಮಿಯ ನೋಟಿಸ್ ಬೋರ್ಡ್‌ನಲ್ಲಿ ಲಗತ್ತಿಸಲಾಗಿರುತ್ತದೆ.

ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರವನ್ನು ಪಡೆಯುವ ರೀತಿಯಲ್ಲೇ ಮಾತೃ ಭಾಷಾ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ ಇರುವಂತಹದು. ಶಾಲಾ ದಾಖಲಾತಿ ವಿವರದೊಂದಿಗೆ ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಿದಾಗ ಭಾಷಾ ಪ್ರಮಾಣ ಪತ್ರವನ್ನು ತಹಶೀಲ್ದಾರರು ನೀಡುತ್ತಾರೆ. ತುರ್ತು ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಈ ಪ್ರಮಾಣ ಪತ್ರವನ್ನು ನೀಡುತ್ತಾರೆ. ತಹಶೀಲ್ದಾರರ ಹೊರತುಪಡಿಸಿ ಯಾರೇ ನೀಡುವ ಮಾತೃ ಭಾಷಾ ಸರ್ಟಿಫಿಕೇಟ್‌ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ. ಈ ಮೇಲಿನ ಎಲ್ಲ ವಿಚಾರಗಳ ಬಗ್ಗೆ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಮಾಹಿತಿಯ ಕೊರತೆಯಿಂದ ವಾಸ್ತವ ಅಲ್ಲದ ಹೇಳಿಕೆಯನ್ನು ನೀಡಿರುವುದರಿಂದ ಈ ಸ್ಪಷ್ಟೀಕರಣವನ್ನು ನೀಡುವುದು ಅಗತ್ಯವಾಯಿತು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಾದಂಬರಿಯು ನಮ್ಮ ಜೀವನದ ಪ್ರತಿಬಿಂಬ-ಡಾ. ವಸಂತ್ ಕುಮಾರ್ ಪೆರ್ಲ ಕೆ. ಬಾಲಕೃಷ್ಣ ರಾವ್ ಬರೆದ ‘ಪಥ’ ಕಾದಂಬರಿ ಬಿಡುಗಡೆ

0

ಕಾದಂಬರಿಯು ನಮ್ಮ ಜೀವನದ ಪ್ರತಿಬಿಂಬ-ಡಾ. ವಸಂತ್ ಕುಮಾರ್ ಪೆರ್ಲ

ಕೆ. ಬಾಲಕೃಷ್ಣ ರಾವ್ ಬರೆದ ‘ಪಥ’ ಕಾದಂಬರಿ ಬಿಡುಗಡೆ

‘ಕಾದಂಬರಿಯು ನಮ್ಮ ಜೀವನದ ಕನ್ನಡಿ, ಇದು ಸಮಾಜವನ್ನು ಒಂದುಗೂಡಿಸುವ ಸರಪಳಿಯ ಕೊಂಡಿ’ ಎಂದು ಮಂಗಳೂರು ಆಕಾಶವಾಣಿಯ ವಿಶ್ರಾಂತ ನಿಲಯ ನಿರ್ದೇಶಕ ಡಾ. ವಸಂತ್ ಕುಮಾರ್ ಪೆರ್ಲಅಭಿಪ್ರಾಯಪಟ್ಟರು.ಅವರು ಕೆ. ಬಾಲಕೃಷ್ಣ ರಾವ್ ಇವರು ಬರೆದಿರುವ ‘ಪಥ’ ಕಾದಂಬರಿಯ ಲೋಕಾರ್ಪಣೆಗೊಳಿಸಿ ಮಾತನಾಡಿದರು.

”ಇಂದು ನಾವು ಸಂಬಂಧಗಳ ಕೊಂಡಿಯನ್ನು ಕಳೆದುಕೊಂಡಿದ್ದೇವೆ. ಒಂದೇ ಮನೆಯಲ್ಲಿದ್ದರೂ ಅಪರಿಚಿತರಾಗಿ ಬದುಕುತ್ತಿದ್ದೆವೆ.ಮಕ್ಕಳು ಒಂದು ಕಡೆ, ತಂದೆ ತಾಯಿ ಇನ್ನೊಂದು ಕಡೆ.ಹೀಗೆ ಬೇರೆ ಬೇರೆ ಕಡೆ ಚದುರಿ ಹೋಗಿರುವುದರಿಂದ ಭಾವನೆಗಳಿಗೆ ಬೆಲೆ ಇಲ್ಲದಾಗಿದೆ.ಮನೆಯೊಳಗೂ ಸದಸ್ಯರು ಮಾತನಾಡಬೇಕಿದ್ರೆ ಮೊಬೈಲ್ ನಲ್ಲಿಯೇ ಮಾತನಾಡುವ ಸಮಯ ಇದಾಗಿದೆ”

”ಕೆ. ಬಾಲಕೃಷ್ಣ ರಾವ್ ಬರೆದ ಕಾದಂಬರಿಯು ಇಂದಿನ ಸಮಾಜಕ್ಕೆ ಎಚ್ಚರಿಕೆಯ ಕರೆಗಂಟೆ ಆಗಿದೆ. ಇವರು ಬರೆದ ‘ಪಥ’ ಕಾದಂಬರಿ ತನ್ನದೇ ಆದ ಶೈಲಿ ಯನ್ನು ಹೊಂದಿದೆ. ಈ ಕಾದಂಬರಿಯಲ್ಲಿ ಬರುವ ಪಾತ್ರಗಳು ನಮ್ಮ ಸುತ್ತ ನಡೆಯುವ ಘಟನೆಗಳನ್ನು ಪ್ರತಿಬಿಂಬಿಸುತ್ತವೆ. ಈ ಕಾದಂಬರಿ ಓದುಗರನ್ನು ವಿಶಿಷ್ಟ ಶೈಲಿಯ ಕಡೆಗೆ ಕೊಂಡೋಯ್ಯುತದೆ” ಎಂದು ಹೇಳಿದರು.

ಡಾ. ಜನಾರ್ದನ ಭಟ್ ರವರು ಮಾತನಾಡಿ ‘ಪಥ’ ಕಾದಂಬರಿಯ ಸಮಗ್ರ ವಿಮರ್ಶೆ ಮಾಡಿದರು. ”ಈ ಕಾದಂಬರಿಯು ಒಟ್ಟಿಗೆ ಐದು ಆಯಾಮಗಳನ್ನು ಹೊಂದಿದ್ದು, ಪ್ರತಿಯೊಂದು ಆಯಾಮಕ್ಕೂ ಸರಪಣಿಗಳ ಕೊಂಡಿಯಂತೆ ಹೆಣಿದುಕೊಂಡಿದೆ. ಪ್ರತಿಯೊಂದು ಆಯಾಮವೂ ಓದುಗರನ್ನು ಓದಿಸಿಕೊಂಡು ಹೋಗುವುದರಲ್ಲಿ ಯಶಸ್ವಿಯಾಗಿದೆ. ನಡು ನಡುವೆ ಇರುವ ತಿರುವುಗಳು ವೈಜ್ಞಾನಿಕವಾಗಿದೆ. ಕೆಲವು ತಮಾಷೆಯ ಸಂಭಾಷಣೆಗಳು ಓದುಗರನ್ನು ಸಂತೋಷಪಡಿಸುತದೆ. ಕಾದಂಬರಿಯ ಕಥೆಯ ನಾಯಕ ಸದಾನಂದನ ಬದುಕಿನ ಏರಿತಗಳು, ಮಗಳು ಶಾರದೆಯ ಜೀವನ ಈಗಿನ ಪರಿಸ್ಥಿತಿಯನ್ನು ಪ್ರತಿಬಿಂಬಿಸುತದೆ. ಸದಾನಂದ ವಿದ್ಯೆಯ ಪಥದೊಂದಿಗೆ ಐಎಎಸ್ ಆಫೀಸರ್ ಆಗಿ ಜೀವನದಲ್ಲಿ ಗೌರವದ ಸ್ಥಾನ ಗಳಿಸುವ ಗುರಿಯನ್ನು ಹೊಂದಿ, ಕೊನೆಗೂ ಅದನ್ನು ಪಡೆದು, ಹಲವಾರು ಸವಾಲುಗಳನ್ನು ಎದುರಿಸಿ ಗೆಲ್ಲುತಾನೇ.ಒಂದು ಕಡೆ ಆಡಳಿತ ವ್ಯವಸ್ಥೆಯಲ್ಲಿ ಎದುರಾಗುವ ಬೆದರಿಕೆ, ಇನ್ನೊಂದು ಕಡೆ ಕುಟುಂಬದಲ್ಲಿ ಉಂಟಾಗುವ ಸೋಲು, ಇವುಗಳನ್ನು ನಿಭಾಯಿಸುವ ರೀತಿ ಕಾದಂಬರಿಯನ್ನು ಕೂತುಹಲದಿಂದ ಓದುಗನನ್ನು ಓದುವಂತೆ ಮಾಡುತದೆ. ಈ ಕಾದಂಬರಿಯ ಕಥೆ ಟಿ. ವಿ. ಸೀರಿಯಲ್ ಅಥವಾ ಚಲನಚಿತ್ರಗಳಿಗೆ ಸರಿಹೊಂದುತ್ತದೆ, ಕಥೆಯ ಕೊನೆಯಲ್ಲಿ ಕಥಾನಾಯಕ, ಅನುಭವಿಸುವ ಏಕಾಂಗೀತನ ಎಲ್ಲರ ಮನೆಯಲ್ಲಿ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ” ಎಂದು ಹೇಳಿದರು.

ಕಾರ್ಕಳ ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಫ್ರೋಫೆಸರ್. ಬಿ. ಪದ್ಮನಾಭಗೌಡ ಮಾತನಾಡಿ ‘ಗಣಿತ ಮತ್ತು ಸಾಹಿತ್ಯ ಎರಡನ್ನೂ ಒಗ್ಗೂಡಿಸಿರುವ ಕೆ. ಬಾಲಕೃಷ್ಣ ರಾವ್ ಅವರದ್ದು ವಿಶೇಷ ವ್ಯಕ್ತಿತ್ವ, ವಿದ್ಯಾರ್ಥಿ ದೆಸೆಯಿಂದಲೂ ಇವರು ಕಥೆ, ಕವನ, ಲೀಖನಗಳನ್ನು ಬರೆಯುತಿದ್ದು, ಮಂಗಳೂರು ಆಕಾಶವಾಣಿಯಲ್ಲಿಯೂ ಇವರ ಕಥೆ, ಕವನ, ಚಿಂತನ ಕಾರ್ಯಕ್ರಮಗಳ ಪ್ರಸಾರವಾಗಿದೆ’ ಎಂದು ಹೇಳಿದರು.

ಇತ್ತೀಚಿಗೆ ನಿಧನರಾದ ಸಾಹಿತಿ ಫ್ರೋ.ಹೆರಿಂಜೆ ಕೃಷ್ಣ ಭಟ್ ಮತ್ತು ನಂದಳಿಕೆ ಬಾಲಚಂದ್ರ ರಾವ್ ಇವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಲಾಯಿತು.ಪ್ರಾರ್ಥನೆಯನ್ನು ವೈ. ಅನಂತ ಪದ್ಮನಾಭ ಭಟ್ ನೆರವೇರಿಸಿದರು.ವೇದಿಕೆಯಲ್ಲಿ ಕಾರ್ಕಳ ಸಾಹಿತ್ಯ ಸಂಘದ ಕೋಶಧಿಕಾರಿ ನಿತ್ಯಾನಂದ ಪೈ, ಕಾರ್ಕಳ ಸಾಹಿತ್ಯ ಸಂಘದ ಗೌರವಾಧ್ಯಕ್ಷರಾದ ತುಕಾರಾಮ ನಾಯಕ್, ಕೃತಿಕಾರರಾದ ಕೆ. ಬಾಲಕೃಷ್ಣರಾವ್ ಉಪಸ್ಥಿತರಿದ್ದರು.ಡಾ. ಸುಮತಿ. ಪಿ. ಕಾರ್ಯಕ್ರಮ ನಿರೂಪಿಸಿದರು. ಬೇಬಿ. ಕೆ. ಈಶ್ವರ ಮಂಗಳ ಸಹಕರಿಸಿದರು.