Home Blog Page 36

ಹಿಂದೂ ಯುವಕರು ಮುಸ್ಲಿಮರನ್ನು ಮದುವೆಯಾದರೆ 5 ಲಕ್ಷ. ರೂ. : ಯತ್ನಾಳ್

0

 

ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುತ್ತೇವೆ ಎನ್ನುವ ಅಭಿಯಾನ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆಯಿಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಮರ ಸರ್ಕಾರವಾಗಿದೆ. ಅಹಿಂದ ರಕ್ಷಣೆಯಾಗುತ್ತಿಲ್ಲ. ಅಲ್ಪಸಂಖ್ಯಾತರಲ್ಲೂ ಮುಖ್ಯವಾಗಿ ಮುಸ್ಲಿಮರನ್ನು ರಕ್ಷಿಸಲಾಗುತ್ತಿದೆ. ಮುಸ್ಲಿಂ ಯುವತಿಯರನ್ನು ಪ್ರೀತಿಸಬಾರದು ಹಾಗೂ ಮದುವೆಯಾಗಬಾರದು ಎನ್ನುವ ಕಾನೂನು ಇದೆಯೇ ಎಂದು ಪ್ರಶ್ನಿಸಿದರು.

ಪಳ್ಳಿ: ನಿಂಜೂರು ವಲಯ(ರಿ) ಬಂಟರ ಸಂಘದ ವತಿಯಿಂದ ವನಮಹೋತ್ಸವ ಆಚರಣೆ

0

 

ಭಾನುವಾರ (ಆ.10)ದಂದು ಬೆಳಿಗ್ಗೆ, ಪಳ್ಳಿ – ನಿಂಜೂರು ವಲಯ(ರಿ) ಬಂಟರ ಸಂಘದ ವತಿಯಿಂದ ಸಸಿ ನೆಡುವುದರ ಮೂಲಕ ವನ ಮಹೋತ್ಸವ ಆಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂಘದ ನೂತನ ಅಧ್ಯಕ್ಷರು ಹಾಗೂ ನಿಂಜೂರು ಕನ್ಸ್ಟ್ರಕ್ಷನ್ ಮಾಲೀಕರಾದ ಚಂದ್ರಶೇಖರ ಶೆಟ್ಟಿ ಅವರು ಗಿಡ ನೆಡುವುದರ ಮೂಲಕ ಚಾಲನೆಯನ್ನು ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ ಬಂಟ ಸಮಾಜ ಬಾಂಧವರು ಹಾಗೂ ಸಮಿತಿ ಸದಸ್ಯರು ಅವರೊಟ್ಟಿಗೆ ಕೈ ಜೋಡಿಸಿದರು.

ಆಗಮಿಸಿದ ಎಲ್ಲರಿಗೂ ಸಂಘದ ಸ್ಥಾಪಕ ಅಧ್ಯಕ್ಷರು ಮನೋಹರ ಶೆಟ್ಟಿ ಪಳ್ಳಿ ಸ್ವಾಗತಿಸಿದರು. ಕಾರ್ಯದರ್ಶಿ ಗೌರೀಶ್ ಶೆಟ್ಟಿ ನಿಂಜೂರು ಧನ್ಯವಾದವಿತ್ತರು. ದಿನಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಲ್ಯಾಂಪ್ಸ್ ಅಧ್ಯಕ್ಷರಾಗಿ ಸುಲೋಚನಾ ಆಯ್ಕೆ

0

 

ತಾಲೂಕು ಪ. ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ನೂತನ ಅಧ್ಯಕ್ಷರಾಗಿ ಸುಲೋಚನಾ ಅವರು ಆಯ್ಕೆಯಾಗಿದ್ದಾರೆ.

 

ಬೈಲೂರು: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

0

 

ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆ ಯ ಜಂಟಿ ಆಶ್ರಯದಲ್ಲಿ ಆ.9 ರಂದು ನಶಾಮುಕ್ತ ಭಾರತ ಅಭಿಯಾನದಡಿ ಅಗಸ್ಟ್ ತಿಂಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಕಳ ನಗರ ಠಾಣಾ ಉಪನಿರೀಕ್ಷಕರಾದ ಶ್ರೀ ಮುರಳೀಧರ ನಾಯಕ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತು ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಸಹಾಯಕ ಉಪನಿರೀಕ್ಷಕರಾದ ಶ್ರೀ ಕೃಷ್ಣ ಆಚಾರ್ಯ, ಹೆಡ್ ಕಾನ್ಸ್ಟೇಬಲ್ ಉಮೇಶ ನಾಯ್ಕ, ಕಾನ್ಸ್ಟೇಬಲ್ ಗಜ ಇವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಭಟ್ ಇವರು ಅಧ್ಯಕ್ಷತೆ ವಹಿಸಿದ್ದು, ಹಿರಿಯ ಉಪನ್ಯಾಸಕರಾದ ಗೋಪಾಲಕೃಷ್ಣ ಗೋರೆ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕ ಪ್ರಮೋದ್ ನಾಯಕ್ ಇವರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕ ರತ್ನಾಕರ ಪೂಜಾರಿ ನಿರೂಪಿಸಿದರು.

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0

ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆ.9 ರಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು.

ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ ಮತ್ತು ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯ ನುಡಿ ಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ” ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ ನಮಗೆ ಆತಂಕಗಳಿಲ್ಲ ನಾವೆಲ್ಲರೂ ಸುರಕ್ಷಿತ”. ಎಂದು ನುಡಿದರು. ವೇದಿಕೆಯಲ್ಲಿ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಉಪಸ್ಥಿತರಿದ್ದರು. ಕಾರ‍್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಶ್ರೀ ಸಂತೋಷ್ ರವರು ನಿರೂಪಿಸಿ ವಂದಿಸಿದರು.

ಕಾರ್ಕಳ : ಹೊಸ ಬೆಳಕು ಸಂಸ್ಥೆ ಆಶ್ರಮದಲ್ಲಿದ್ದ ವ್ಯಕ್ತಿ ಸಾವು

0

 

ಹೊಸ ಬೆಳಕು ಆಶ್ರಮದಲ್ಲಿ ದಾಖಲಾಗಿದ್ದ ಕುಂದಾಪುರ ಮೂಲದ ಉಮೇಶ್ ಎನ್ನುವ ವ್ಯಕ್ತಿ ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದಾರೆ.

ಉಮೇಶ ಎನ್ನುವವರನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ಕುಂದಾಪುರ ಬಳಿ ಬುದ್ದಿ ಮಾಂದ್ಯನಾಗಿ ತಿರುಗುತ್ತಿದ್ದ ವೇಳೆ ಹೊಸ ಬೆಳಕು ಆಶ್ರಮಕ್ಕೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುತ್ತಿದ್ದ ಇವರು ಗುರುವಾರದಂದು ಆಶ್ರಮದಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ.

ಕಾರ್ಕಳ: ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

0

 

ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು ‘ಕ್ರಿಯೇಟಿವ್ ಪುಸ್ತಕ ಧಾರೆ – 2025’ ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿತ್ರ ನಿರ್ದೇಶಕರು ಹಾಗೂ ಖ್ಯಾತ ಸಾಹಿತಿಗಳಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಆಗಮಿಸಲಿದ್ದಾರೆ. ಜೊತೆಗೆ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು, ಡಾ. ಪ್ರದೀಪಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಅನಾವರಣಗೊಳ್ಳಲಿರುವ ಕೃತಿಗಳು
• ಯಾತ್ರೆ – ಚಂದ್ರಕಾಂತ ಪೋಕಳೆ
• ವಿಜ್ಞಾನ ಕೌತುಕಗಳ ಮಹಾಯಾನ – ಎಲ್.ಪಿ ಕುಲಕರ್ಣಿ
• ಹರ್ಷ ರಾಗ – ಪೌಝಿಯಾ ಸಲೀಂ
• ಹಿತಶತ್ರು – ಪದ್ಮಲತಾ ಮೋಹನ್
• ಪುಟ್ಟ ದೇವರ ಕಣ್ಣೀರು – ಸದಾಶಿವ ಸೊರಟೂರು
• ಬದುಕು ಮಾಯೆಯ ಮಾಟ – ಕುಮಾರಸ್ವಾಮಿ ತೆಕ್ಕುಂಜ
• ಕಾವ್ಯ ಧ್ಯಾನ – ನಾಗೇಶ್ ಜೆ. ನಾಯಕ
• ನಿನಗೆ ನೀನೇ ಬೆಳಕು – ಪ್ರಜ್ವಲಾ ಶೆಣೈ
• ನಿನ್ನ ಇಚ್ಛೆಯಂತೆ ನಡೆವೆ – ಮನು ಗುರುಸ್ವಾಮಿ
• ಕಣ್ಣ ಬಾಗಿಲಿಗೆ ಬಂದ ನೀರು – ಸಂತೆಬೆನ್ನೂರು ಫೈಜ್ನಟರಾಜ್
• ಸ್ವಾತಿ ಬೊಂಬಾಟ್ – ಎಂ. ಮನೋಹರ ಪೈ
• ಗ್ಯಾಂಗ್ ಸ್ಟರ್ ಮತ್ತು ಅವಳು – ಮಂಜುನಾಥ್ ಕುಂಬಾರ್
• ಇದೊಳ್ಳೆ ವರಸೆ – ಸಂದೇಶ್ ಎಚ್. ನಾಯ್ಕ್
• ಮಾಂಡವ್ಯ ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
• ಬೆಳ್ದೀಪ – ಡಾ. ಪ್ರದೀಪ ಕುಮಾರ ಹೆಬ್ರಿ
• ನಿಲುಕದ ನಕ್ಷತ್ರ – ಡಾ. ಸುಮತಿ ಪಿ.
• ಸಿಹಿಜೀವಿ ಕಂಡ ಅಂಡಮಾನ್ – ಸಿಹಿಜೀವಿ ಸಿ.ಜಿ ವೆಂಕಟೇಶ್ವರ
• ಅನುಭವ ದೀಪ್ತಿ – ಶುಭಲಕ್ಷ್ಮಿ ಆರ್. ನಾಯಕ್
• ಈ ಪಯಣದಲ್ಲಿ – ಶ್ಯಾಮಲಾ ಗೋಪಿನಾಥ್
• ಸಂಗೀತ ಶರಧಿ – ರಾಜೇಂದ್ರ ಭಟ್. ಕೆ.
• ಅಸಂಗತ – ಅಕ್ಷತಾ ರಾಜ್ ಪೆರ್ಲ
• ವಿಜ್ಞಾನ ವಿಶಾರದರು – ಎಲ್‌.ಪಿ ಕುಲಕರ್ಣಿ

ಸಂವಾದ ಕಾರ್ಯಕ್ರಮ

ಅಪರಾಹ್ನ 2.00 ರಿಂದ 3.20 ರ ವರೆಗೆ ಡಾ. ನಾಗತಿಹಳ್ಳಿ ಚಂದ್ರಶೇಖರ್ ಅವರ ಚಲನಚಿತ್ರಗಳಲ್ಲಿ ಬಳಸಿರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಲಿರುವುದು. ಖ್ಯಾತ ನಿರೂಪಕರಾದ ಅವಿನಾಶ್ ಕಾಮತ್ ರವರು ಸಂವಾದ ಕಾರ್ಯಕ್ರಮ ನಿರ್ವಹಿಸಿಕೊಡಲಿದ್ದಾರೆ. ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ್ ಎಂ.ಜಿ ಇವರಿಂದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿರುವುದು.

ನವೀನತೆಯೊಂದಿಗೆ ಸೃಜನಾತ್ಮಕತೆಯನ್ನು ಸೃಷ್ಟಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನವು ಈಗಾಗಲೇ ರಾಜ್ಯ ವ್ಯಾಪಿ ಪ್ರಸಿದ್ಧಿ ಗಳಿಸಿದ್ದು, ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ಕ್ರಿಯೇಟಿವ್ ಎಲ್ಲರ ಮನೆಮಾತಾಗಿದೆ. ಆಗಸ್ಟ್ 13ರಂದು ನಡೆಯುವ ಪುಸ್ತಕಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೂ ಮುಕ್ತ ಅವಕಾಶವಿದ್ದು, ಸಾಹಿತ್ಯಾಸಕ್ತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದು ಆಡಳಿತ ಮಂಡಳಿಯವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೈಸ್ಟ್ ಕಿಂಗ್: ಹೂಡಿಕೆ ಜಾಗೃತಿ ಮತ್ತು ನಿರ್ವಹಣೆ ಮಾಹಿತಿ ಕಾರ್ಯಕ್ರಮ

0

 

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹೂಡಿಕೆ ಜಾಗೃತಿ ಮತ್ತು ನಿರ್ವಹಣೆ ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹೆಚ್‌ಡಿಎಫ್‌ಸಿ ಮ್ಯೂಚ್ವಲ್ ಫಂಡ್ ನ ಉಡುಪಿ ಶಾಖಾ ವ್ಯವಸ್ಥಾಪಕರಾದ ಪ್ರತಾಪ್ ನಾಯಕ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ “ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯವಾಗಿದೆ. ಆದರೆ ಎಲ್ಲಿ ಹೇಗೆ, ಯಾವುದರಲ್ಲಿ ಮತ್ತು ಯಾವಾಗ ಹೂಡಿಕೆ ಮಾಡಬೇಕೆಂಬ ಪೂರ್ವಾಲೋಚನೆ ಅತೀ ಅಗತ್ಯವಾಗಿರಬೇಕು. ಹೂಡಿಕೆ ಮಾಡುವುದರ ಜೊತೆಗೆ ಅದರ ನಿರ್ವಹಣಾ ವಿಧಾನಗಳ ಬಗ್ಗೆ ಸೂಕ್ತ ಜ್ಞಾನ ಹೊಂದಿರಬೇಕು. ವಿವೇಚನಾ ರಹಿತ ಹೂಡಿಕೆಗಳಿಂದ ಆರ್ಥಿಕ ಅಪಾಯವಾಗಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ಮ್ಯೂಚ್ವಲ್ ಫಂಡ್‌ಗಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ನಿರ್ಧಾರವಾಗುತ್ತದೆ” ಎಂದು ಹೇಳಿದರು.

ಸಂಸ್ಥೆಯ ಉಪಪ್ರಾಚಾರ್ಯ ಮತ್ತು ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಪ್ರಕಾಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಚಿನ್ನ, ಷೇರುಗಳು, ವಿವಿಧ ಆಸ್ತಿಗಳು, ಮ್ಯೂಚ್ವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದರಿಂದ ಭವಿಷ್ಯವನ್ನು ಸುಭದ್ರಗೊಳಿಸುವುದರ ಬಗ್ಗೆ ಮಾಹಿತಿ ನೀಡಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರಜ್ವಲ್ ಶೆಟ್ಟಿ ಸ್ವಾಗತಿಸಿ ಮದಿಹಾ ಫಾತಿಮ ವಂದಿಸಿದರು. ಜಿತೇಶ್ ಪಿಂಟೊ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ : ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ಗೌಸ್ ಮಿಯ್ಯಾರು

0

 

ಜಮೀಯ್ಯತುಲ್ ಫಲಾಹ್ ಕಾರ್ಕಳ ತಾಲೂಕು ಘಟಕದ 2024-25ನೇ ಸಾಲಿನ ಮಹಾಸಭೆಯು 07-08-25 ರಂದು ಕಾರ್ಕಳ ಸಾಲ್ಮರ ಜಾಮಿಯಾ ಮಸ್ಜಿದ್ ಕಾಂಪ್ಲೆಕ್ಸ್ ನಲ್ಲಿರುವ ಜಮೀಯ್ಯತುಲ್ ಫಲಾಹ್ ಕಛೇರಿಯಲ್ಲಿ ಅಧ್ಯಕ್ಷರಾದ ಅಷ್ಪಾಕ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಘಟಕದಿಂದ ನೇಮಿಸಲ್ಪಟ್ಟ ವೀಕ್ಷಕರಾಗಿ ಕಾಪು ತಾಲೂಕು ಘಟಕದ ಅಧ್ಯಕ್ಷ ಸಬಿಹ್ ಅಹ್ಮದ್ ಖಾಝಿಯವರು ಮಹಾಸಭೆಯಲ್ಲಿ ಭಾಗವಹಿಸಿ ಸದಸ್ಯರಿಗೆ ಜಮೀಯತುಲ್ ಫಲಹ್ ದ ನೂತನ ಕಾರ್ಯಕಾರಿ ಸಮಿತಿ ರಚನೆ ಬಗ್ಗೆ ಸೂಕ್ತ ಮಾಹಿತಿ, ಸಂವಿಧಾನದ ಬಗೆಗಿನ ಅರಿವು ಮೂಡಿಸಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

2025-27 ಸಾಲಿನ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಗೌಸ್ ಮಿಯ್ಯಾರು, ಕಾರ್ಯದರ್ಶಿಯಾಗಿ ಅಷ್ಪಕ್ ಅಹ್ಮದ್ ಜೋಡುರಸ್ತೆ, ಕೋಶಾಧಿಕಾರಿ ಯಾಗಿ ಮೊಹಮ್ಮದ್ ಶರೀಫ್ ಬಂಗ್ಲೆಗುಡ್ಡೆ, ಉಪಾಧ್ಯಕ್ಷರಾಗಿ ಅಬ್ದುಲ್ ರಶೀದ್ ಬಂಗ್ಲೆಗುಡ್ಡೆ, ಸಯ್ಯದ್ ಅಬ್ಬಾಸ್ ಅಂಚಿಕಟ್ಟೆ, ಜತೆ ಕಾರ್ಯದರ್ಶಿಯಾಗಿ ನಾಸಿರ್ ಶೇಕ್ ಬೈಲೂರು, ಸಂಘಟನಾ ಕಾರ್ಯದರ್ಶಿಯಾಗಿ ಸಯ್ಯದ್ ಹಸನ್ ಗಾಂಧಿಮೈದಾನ್, ಪತ್ರಿಕಾ ಕಾರ್ಯದರ್ಶಿಯಾಗಿ ಕೆ ಎಂ ಖಲೀಲ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನಾಸಿರ್ ನವಿದ್ ಶೇಕ್ ಕಾಬೆಟ್ಟು, ಸಮದ್ ಖಾನ್ ಇರ್ವತೂರ್, ಕೆ ಎಸ್ ಎಂ ಕಾಸಿಮ್, ಸಯ್ಯದ್ ಅಹ್ಮದ್ (ಲಾಲು)ಕಾಬೆಟ್ಟು, ಅಮೀರ್ ಹುಸೇನ್ ಕರಿಯಕಲ್ಲು, ಮೊಹಮ್ಮದ್ ಹುಸೇನ್ ಬಂಡಿಮಠ, ಅಬ್ದುಲ್ಲಾ ಅದಂ ಶೇಕ್ ಬೈಪಾಸ್, ಮೊಹಮ್ಮದ್ ಯಾಕೂಬ್ ಕಾಬೆಟ್ಟು, ಅಬ್ದುಲ್ ಮಜೀದ್ ತೆಲ್ಲಾರ್, ಮೊಹಮ್ಮದ್ ಹಸನ್ ಸಾಹೇಬ್ ನಿಟ್ಟೆ, ಮೊಹಮ್ಮದ್ ಸಾಹೇಬ್, ಇಜಾಜ್ ಶರೀಫ್ ಸಾಲ್ಮರ, ಇಕ್ಬಾಲ್ ಸುಲೈಮಾನ್ ಸೇಠ್, ಇವರನ್ನು ಆಯ್ಕೆ ಮಾಡಲಾಯಿತು.

ನಿರ್ಗಮನ ಅಧ್ಯಕ್ಷರಾದ ಅಷ್ಪಾಕ್ ಅಹ್ಮದ್ ಸ್ವಾಗತಿಸಿದರು. ಕೆ ಎಸ್ ಮೊಹಮ್ಮದ್ ಖಾಸಿಂ ಅಂಚಿಕಟ್ಟೆ ಖಿರಾತ್ ಪಟಿಸಿದರು. ಕಾರ್ಯದರ್ಶಿ ಸಯ್ಯದ್ ಅಬ್ಬಾಸ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಮೊಹಮ್ಮದ್ ಯಾಕೂಬ್ ವಾರ್ಷಿಕ ಲೆಕ್ಕ ಪತ್ರ ಮಂಡಿಸಿದರು. ಸಭೆ ಅನುಮೋದಿಸಿತು.

ಕಾರ್ಕಳ: ಪರಶುರಾಮ ಹಿತರಕ್ಷಣಾ ವೇದಿಕೆಯೋ ಅಥವಾ ಉದಯ ಶೆಟ್ಟಿ ರಕ್ಷಣಾ ವೇದಿಕೆಯೋ? – ಸಚ್ಚಿದಾನಂದ ಶೆಟ್ಟಿ ಪ್ರಶ್ನೆ

0

 

ಪರಶುರಾಮ ಹಿತರಕ್ಷಣಾ ಸಮಿತಿಯೋ ಅಥವಾ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ರಕ್ಷಣಾ ವೇದಿಕೆಯೋ ಎಂದು ಬೈಲೂರಿನ ಪರಶುರಾಮ ಥೀಂ ಪಾರ್ಕ್ ಜನಜಾಗೃತಿ ಸಮಿತಿಯ ಸಚ್ಚಿದನಾಂದ ಶೆಟ್ಟಿ ಪ್ರಶ್ನಿಸಿದ್ದಾರೆ.

ಪರಶುರಾಮ ಹಿತರಕ್ಷಣಾ ಸಮಿತಿ ವಿಸರ್ಜನೆ ಕುರಿತು ಪ್ರತಿಕ್ರಿಯಿಸಿರುವ ಅವರು ಸಮಿತಿಯ ನಿಜ ಬಣ್ಣ ಈಗ ಬಯಲಾಗಿದೆ. ಸಮಿತಿ ಪ್ರವಾಸೋದ್ಯಮ ಉಳಿವು, ಜನರ ಹಿತರಕ್ಷಣೆಗಾಗಿ ಅಸ್ತಿತ್ವಕ್ಕೆ ಬಾರದೆ ಇದರ ಅಸ್ತಿತ್ವವೂ ವಿಸರ್ಜನೆಯೂ ಉದಯ ಶೆಟ್ಟಿಯ ರಾಜಕೀಯ ಲಾಭಕ್ಕಾಗಿ ಹುಟ್ಟಿಕೊಂಡಿತ್ತು. ಕಾಂಗ್ರೆಸ್ ನ ಮುಖವಾಣಿಯಾಗಿಯೇ ಅಂದಿನಿಂದ ಇಂದಿನವರೆಗೂ ಕೆಲಸ ಮಾಡಿಕೊಂಡು ಬಂದಿತ್ತು. ಎನ್ನುವ ಸತ್ಯ ಸಾರ್ವಜನಿಕವಾಗಿ ಬಹಿರಂಗಗೊಂಡಿದೆ ಎಂದು ಆರೋಪಿಸಿದರು.

ಪ್ರವಾಸೋದ್ಯಮವಾಗಿದ್ದ ಥೀಂ ಪಾರ್ಕ್ ಕಾಮಗಾರಿಗೆ ನಾನಾ ತರಹ ಅಡ್ಡಿ ಪಡಿಸಿ, ತಡೆದು ಕಳೆದೆರಡು ವರ್ಷ ನಾಟಕವಾಡಿ ಪ್ರವಾಸೋದ್ಯಮಕ್ಕೆ ನಷ್ಟ ಮಾಡಿದರಲ್ಲ? ಆದ ಕೋಟ್ಯಾಂತರ ರೂಪಾಯಿ ನಷ್ಟಕ್ಕೆ ಸಮಿತಿಯವರು ಹಾಗೂ ಕಾಂಗ್ರೆಸ್ ನಾಯಕ ಉದಯ ಶೆಟ್ಟಿಯೇ ನೇರ ಹೊಣೆಗಾರರು. ಅಂದು

“ರಸ್ತೆಗೆ ಮಣ್ಣು ಹಾಕಿ ಕಾಮಗಾರಿ ಅಡ್ಡಿಪಡಿಸಿದ್ದು ಯಾರ ಹಿತಕ್ಕಾಗಿ? ಜನರ ಹಿತಕ್ಕಾಗಿ ಅಲ್ಲ, ಕಾಂಗ್ರೆಸ್ ಲಾಭ ಪಡೆಯುವುದರ ಹಿತಕ್ಕಾಗಿ” ಎಂದು ಹೇಳಿದ ಅವರು, ದಿನಕ್ಕೊಂದು ನಾಟಕ ಮಾಡಿ ಥೀಂ ಪಾರ್ಕ್ ಅನ್ನು ರಾಜಕೀಯವಾಗಿ ಮುಗಿಸುವುದೇ ಇವರ ಗುರಿ ಎಂದು ಆರೋಪಿಸಿದರು.

“ರಾಜಕೀಯ ರಹಿತ” ಎಂದು ಹೇಳಿಕೊಂಡಿದ್ದ ಸಮಿತಿ ವಾಸ್ತವದಲ್ಲಿ ಕಾಂಗ್ರೆಸ್ ಸ್ವಹಿತಕ್ಕಾಗಿ ಮಾತ್ರ ಕೆಲಸ ಮಾಡಿದ ಕಾಂಗ್ರೆಸ್ ನ ಅಂಗ ಸಂಸ್ಥೆಯಾಗಿತ್ತು. ಕಾಂಗ್ರೆಸ್ ನ ನಕಲಿ ಹೋರಾಟದಂತೆ ಇದು ಕೂಡ ಒಂದು ನಕಲಿ ಹಿತರಕ್ಷಾಣಾ ಸಮಿತಿ ಆಗಿ ಕಾರ್ಯನಿರ್ವಹಿಸಿತ್ತು ಎಂದು ಆರೋಪಿಸಿದ್ದಾರೆ.