Home Blog Page 37

ಜಪಾನೀಸ್ ವೆಬ್ ಸಿರೀಸ್ ‘ಡೆತ್ ನೋಟ್’ 14 ವರ್ಷದ ಬಾಲಕನ ಆತ್ಮಹತ್ಯೆಗೆ ಕಾರಣವಾಯ್ತಾ? ತನಿಖೆಯಲ್ಲಿ ಬಯಲಾಯಿತು ಬೆಚ್ಚಿ ಬೀಳಿಸುವ ವಿಚಾರ…!

0

ಜಪಾನೀಸ್ ವೆಬ್ ಸಿರೀಸ್ ‘ಡೆತ್ ನೋಟ್’ 14 ವರ್ಷದ ಬಾಲಕನ ಆತ್ಮಹತ್ಯೆಗೆ ಕಾರಣವಾಯ್ತಾ?

ತನಿಖೆಯಲ್ಲಿ ಬಯಲಾಯಿತು ಬೆಚ್ಚಿ ಬೀಳಿಸುವ ವಿಚಾರ…!

ಮೂರು ದಿನಗಳ ಹಿಂದೆ ಬೆಂಗಳೂರಿನ ಚೆನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ, ಅಮ್ಮ ಅಮ್ಮ ಅಣ್ಣ ಎಲ್ಲರ ಜೊತೆಗೂ ಚೆನ್ನಾಗಿಯೇ ಇದ್ದ ಆ ಬಾಲಕ ಏಕಾಏಕಿ ನೇಣಿಗೆ ಶರಣಾಗಿದ್ದು ಎಲ್ಲರಿಗೂ ಶಾಕ್‌ ಆಗಿತ್ತು. ಈ ಪ್ರಕರಣದ ತನಿಖೆಗೆ ಇಳಿದಾಗ ಹಲವರು ಶಾಕಿಂಗ್‌ ವಿಚಾರಗಳು ಮುನ್ನೆಲೆಗೆ ಬಂದಿವೆ.

ರಾತ್ರಿ ಎಲ್ಲರ ಜೊತೆಗೆ ಊಟ ಮಾಡಿ ತನ್ನ ಪ್ರೀತಿಯ ನಾಯಿ ರಾಕಿ ಜೊತೆಗೆ ಮಲಗಿದ್ದ ಗಂಧಾರ್ ಬೆಳಗಿನ ವೇಳೆ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ. ನೇಣಿಗೆ ಶರಣಾಗುವ ಮೊದಲು ಒಂದು ಡೆತ್ ನೋಟ್ ಬರೆದಿದ್ದ. ಅದರಲ್ಲಿ ತಂದೆ ತಾಯಿಯನ್ನು ಉದ್ದೇಶಿಸಿ ನೀವು ನನ್ನನ್ನು ಹದಿನಾಲ್ಕು ವರ್ಷ ಚೆನ್ನಾಗಿಯೇ ಸಾಕಿದ್ದೀರಿ. ನಿಮ್ಮ ಜೊತೆಗೆ ನಾನು ತುಂಬಾ ಖುಷಿಯಾಗಿದ್ದೆ. ಆದರೆ ನಾನು ಹೋಗುವ ಸಮಯ ಬಂದಿದೆ. ನೀವು ಈ ಪತ್ರ ಓದುವ ವೇಳೆಗೆ ನಾನು ಸ್ವರ್ಗದಲ್ಲಿ ಇರುತ್ತೇನೆ ಎಂದು ಡೆತ್ ನೋಟ್ ಬರೆದಿದ್ದ.

ಈ ಡೆತ್ ನೋಟ್ ನೋಡಿದ ಎಲ್ಲರಿಗೂ ಶಾಕ್‌ ಆಗಿತ್ತು. ಅದರಲ್ಲಿ ಯಾವುದೇ ನೆಗಟಿವ್ ವಿಚಾರಗಳಿಲ್ಲ, ಯಾರ ಮೇಲೂ ಆರೋಪಗಳಿಲ್ಲ. ಯಾವುದೇ ಸಮಸ್ಯೆ ಕೂಡ ಇಲ್ಲ. ಹೀಗಿದ್ದರೂ ಈ ಬಾಲಕ ಇಷ್ಟು ಚಿಕ್ಕವಯಸ್ಸಿಗೆ ಯಾಕೆ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಎಂಬ ಪ್ರಶ್ನೆ ಎದ್ದಿತ್ತು.

ಪ್ರಕರಣ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಾಗ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಗಂಧಾರ್ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿ ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದ್ದ ಡೆತ್ ನೋಟ್ ವೆಬ್‌ ಸೀರಿಸ್‌ ಎಲ್ಲಾ ಸಂಚಿಕೆಯನ್ನು ತಪ್ಪದೇ ನೋಡುತ್ತಿದ್ದ. ಅಷ್ಟೇ ಅಲ್ಲದೇ ಆ ವೆಬ್ ಸಿರಿಸ್ ಬರುವ ಒಂದು ಪಾತ್ರವನ್ನು ಗಂಧಾರ್‌ ತನ್ನ ರೂಮಿನಲ್ಲಿ ಬಿಡಿಸಿದ್ದ.

ಈ ವೆಬ್‌ ಸೀರಿಸ್‌ನಲ್ಲಿ ಒಂದು ಪಾತ್ರವಿದೆ. ಆ ಪಾತ್ರ ಹೇಳಿದಂತೆ ಹೀರೋ ನಡೆದುಕೊಳ್ಳುತ್ತಾನೆ. ಆ ಮಾಯಬುಕ್‌ನಲ್ಲಿ ಯಾರ ಹೆಸರು ಬರೆದು ಅವರು ಹೇಗೆ ಸಾಯಬೇಕು ಎಂದು ಊಹೆ ಮಾಡಿಕೊಂಡರೆ ಆ ವ್ಯಕ್ತಿ ಆ ರೀತಿ ಸಾಯುತ್ತಾನೆ. ಕೆಟ್ಟವರು ಯಾರು ಕೂಡ ಭೂಮಿ ಮೇಲೆ ಬದಕಬಾರದು. ಅವರನ್ನು ಕೊಲೆ ಮಾಡಬೇಕು ಎನ್ನುವುದೇ ಆ ವೆಬ್‌ ಸೀರಿಸ್‌ನ ಕಥಾವಸ್ತು.

ಈ ಡೆತ್‌ನೋಟ್‌ ವೆಬ್‌ ಸೀರಿಸ್‌ ನೋಡಿ ಅದರ ಅದರ ಪ್ರಭಾವಕ್ಕೆ ಒಳಗಾಗಿ ಗಂಧಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಅತಿಯಾದ ಅಧ್ಯಾತ್ಮದ ಕಡೆಗೆ ಒಲವು ಇರುವ ಅನುಮಾನವೂ ವ್ಯಕ್ತವಾಗಿದೆ. ಸದ್ಯ ಬಾಲಕ ಗಂಧಾರ್ ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಕಾರ್ಕಳ: ಉದಯ್ ಶೆಟ್ಟಿಗೆ ಬೆಂಬಲ ಸೂಚಿಸಿದ ಪರಶುರಾಮ‌ ಹಿತರಕ್ಷಣಾ ಸಮಿತಿ

0

 

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಕಾರ್ಕಳ ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ದೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ. ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಾನ್ಯ ಉದಯ ಕುಮಾರ್ ಶೆಟ್ಟಿಯವರು ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದರಿಂದ ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೇ ಕಾನೂನಿನ ತೊಡಕಾಗುವ ಸಾಧ್ಯತೆ ಇದ್ದು ಇದು ಮಾನ್ಯ ಉದಯ ಕುಮಾರ್ ಶೆಟ್ಟಿಯವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ತೊಂದರೆಯಾಗುವ ಸಂಭವ ಇರುವುದರಿಂದ ಮಾನ್ಯ ಉದಯ್ ಕುಮಾರ್ ಶೆಟ್ಟಿಯವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಪೂರ್ಣವಾಗಿ ಬೆಂಬಲವನ್ನು ನೀಡುವ ಉದ್ದೇಶದಿಂದ ಈ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಸಭೆ ಸೇರಿ ತೆಗೆದುಕೊಂಡಿರುತ್ತದೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಎಲ್ಲ ಪಧಾಧಿಕಾರಿಗಳು ಮತ್ತು ಸದಸ್ಯರು ಮಾನ್ಯ ಉದಯ ಕುಮಾರ್ ಶೆಟ್ಟಿಯವರ ನಿಲುವಿಗೆ ಮತ್ತು ಕಾನೂನಾತ್ಮಕ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ನಿರ್ಣಯಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ಬರ್ಖಾಸ್ತುಗೊಳಿಸಿರುವುದಾಗಿ ಈ ಪತ್ರಿಕಾ ಪ್ರಕಟಣೆಯ ಮೂಲಕ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ತಿಳಿಸಿದೆ. ಇನ್ನು ಮುಂದೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಅಸ್ತಿತ್ವದ್ಲಲಿ ಇರುವುದಿಲ್ಲ.

ನಿರ್ಮಿತಿ ಅರುಣ್ ಕುಮಾರ್ ಮತ್ತು ಸಚಿನ್ ವೈ ವಜಾಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಿಯೋಗ ಮನವಿ

0

 

ಪರಶುರಾಮನ ನಕಲಿ ಕಂಚಿನ ಪ್ರತಿಮೆಯ ವಿಚಾರವಾಗಿ ನಿರ್ಮಾತಿ ಕೇಂದ್ರದ ಅಧಿಕಾರಿಗಳ ವಿರುದ್ದ ಪೋಲೀಸರು ಕಾರ್ಕಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಹಿನ್ನಲೆಯಲ್ಲಿ ಆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಿದೆ.

ಮನವಿ
ಕಾರ್ಕಳ ಎರ್ಲಪಾಡಿ ಗ್ರಾಮದ ಉಮ್ಮಿಕಲ್ಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮನ ಪ್ರತಿಮೆಯನ್ನು ಕಂಚಿನಿಂದ ಮಾಡದೆ, ಕಾಮಗಾರಿಯ ವರ್ಕ್ ಆರ್ಡರ್ ನಲ್ಲಿರುವ ಷರತ್ತುಗಳನ್ನು ಪಾಲಿಸದೆ, ಮತ್ತು ಪ್ರತಿಮೆಯ ಸೊಂಟದ ಮೇಲ್ಬಾಗವನ್ನು ನಾಲ್ಕು ತಿಂಗಳ ಕಾಲ ನಿರ್ಮಿತಿ ಕೇಂದ್ರದ ಶೆಡ್ ನಲ್ಲಿ ಇರಿಸಿಕೊಂಡು ಅದನ್ನು ಬೆಂಗಳೂರಿಗೆ ಸಾಗಾಟ‌ ಮಾಡಿರುವುದಾಗಿ ಸುಳ್ಳು ಹೇಳಿದಕ್ಕಾಗಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ಧೇಶಕ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚ್ಚಿನ್ ವೈ ಇವರು ಅಪರಾಧಿಕ ಒಳಸಂಚು, ನಂಬಿಕೆ ದ್ರೋಹ, ವಂಚನೆ ಎಸಗಿ ಸಾಕ್ಷಿ ನಾಶ ಮಾಡಿರುತ್ತಾರೆ ಎಂದು ಅವರ ವಿರುದ್ದ ಕಲಂ 420, 409,201,120(ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿದ ಕಾರ್ಕಳ ಪೋಲೀಸರು ಮಾನ್ಯ ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇದೊಂದು ಗಂಭೀರ ಪ್ರಕರಣವಾಗಿದ್ದು ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳಲ್ಲಿಯೂ ಚರ್ಚೆಗಳಾಗಿ ಬಾರೀ ಕೋಲಾಹಲಕ್ಕೆ ಕಾರಣವಾಗಿರುತ್ತದೆ. ಸರ್ಕಾರಕ್ಕೆ ಮೋಸ ವಂಚನೆಯ ನಡೆಸಿ ರಾಜ್ಯದ ಗಮನ ಸೆಳೆದ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಅಧಿಕಾರಿಗಳನ್ನು ಮತ್ತೆ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟರೆ ಇನ್ನಷ್ಟು ಅಕ್ರಮಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ, ಮತ್ತು ಜಿಲ್ಲೆಯ ಜನರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದಂತಾಗುತ್ತದೆ. ಈ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಅಧಿಕಾರಿಗಳು ಮತ್ತೆ ಇಲ್ಲಿಯೇ ಮುಂದುವರಿಸಿದರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ.

ಈ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಅರುಣ್ ಕುಮಾರ್ ಮತ್ತು ಇಂಜಿನಿಯರ್ ಸಚಿನ್ ವೈ ಅವರನ್ನು ಸೇವೆಯಿಂದ ವಜಾ ಮಾಡಬೇಕಾಗಿ ತಮ್ಮಲ್ಲಿ ಈ ಮೂಲಕ ವಿನಂತಿ ಮಾಡುತ್ತಿದ್ದೇವೆ ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷ ಪುರಸಭೆಯ ಮಾಜಿ ಅಧ್ಯಕ್ಷ ಸುಬಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ, ಪುರಸಭಾ ಸದಸ್ಯ ವಿವೇಕಾನಂದ ಶೆಣೈ, ಗ್ರಾಮಿಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ, ರಹೀಮ್ ಅಜೆಕಾರ್, ವಕ್ತಾರ ಪ್ರದೀಪ್ ಬೇಲಾಡಿ, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಯೊಗೀಶ್ ಇನ್ನಾ, ಗ್ಯಾರಂಟಿ ಸಮಿತಿ ಸದಸ್ಯ ಸಂತೋಷ್ ದೇವಾಡಿಗ, ಪಂಚಾಯತ್ ಸದಸ್ಯ ದೀಕ್ಷಿತ್, ದೀಪಕ್ ಶೆಟ್ಟಿ, ರಂಜಿತ್ ಮಾಳ, ಸುಹಾಸ್ ಖಾವ ಮೊದಲಾದವರು ಉಪಸ್ಥಿತರಿದ್ದರು.

ವಿಶ್ವದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ 49ನೇ ಸ್ಥಾನ

0

ಜಗತ್ತಿನಲ್ಲೇ ಸುರಕ್ಷಿತ ನಗರಗಳ ಪೈಕಿ ದೇಶದಲ್ಲಿ ಮಂಗಳೂರು ನಗರ ಮೊದಲನೇ ಸ್ಥಾನ ಮತ್ತು ವಿಶ್ವದಲ್ಲಿ 49 ನೇ ಸ್ಥಾನ ಪಡೆದಿದೆ.

ಸ್ವತಂತ್ರ ಬಳಕೆದಾರರ ಜಾಗತಿಕ ಡಾಟಾಬೇಸ್ ಆಗಿರುವ ‘ನಂಬಿಯೋ’ ತನ್ನ 2025ರ ವರ್ಷದ ಮಧ್ಯ ಭಾಗದ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಮಂಗಳೂರು ಅಗ್ರಸ್ಥಾನ ಗಿಟ್ಟಿಸಿಕೊಂಡಿದೆ.

ಸುರಕ್ಷಿತ ನಗರಗಳ ವಿಭಾಗದಲ್ಲಿ ವಿಶ್ವದ ಒಟ್ಟು 393 ನಗರಗಳ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಭಾರತದ 23 ನಗರಗಳು ಈ ಪಟ್ಟಿಯಲ್ಲಿದೆ. ಇದರಲ್ಲಿ ಮಂಗಳೂರು ನಗರ ಶೇ.74.2 ಅಂಕದೊಂದಿಗೆ 49ನೇ ಸ್ಥಾನ, ವಡೋದರ 85 ನೇ ಸ್ಥಾನ, ಅಹಮದಾಬಾದ್ 93 ನೇ ಸ್ಥಾನ ಪಡೆದಿದೆ.

ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

0

ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

ಬೆಂಗಳೂರು:  2024-25 ಹಾಗೂ 2025-26 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆ–ಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.

 

2024-25ನೇ ಸಾಲಿನಲ್ಲಿ  ಸಲ್ಲಿಸಲಾದ ಪ್ರಸ್ತಾವನೆಯ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 2723.00 ಲಕ್ಷ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 2254.00 ಲಕ್ಷ, ನಗರಾಭಿವೃದ್ಧಿ ಇಲಾಖೆ 500.00 ಲಕ್ಷ ಹಾಗಾಗಿ ಒಟ್ಟು ಅಂದಾಜು ನಷ್ಟದ ಮೊತ್ತ 5477.00 ಲಕ್ಷ ರೂಪಾಯಿ ಆಗಿರುತ್ತದೆ. ಆದರೆ ಬಿಡುಗಡೆಯಾದ  ಅನುದಾನ  ಲೊಕೋಪಯೋಗಿ ಇಲಾಖೆ 140.00, ಗ್ರಾಮೀಣಾಭಿವೃದ್ದಿ ಇಲಾಖೆ 120.00 ಲಕ್ಷ, ನಗರಾಭಿವೃದ್ದಿ ಇಲಾಖೆ 16.75. ಲಕ್ಷ ಬಿಡುಗಡೆಯಾಗಿದ್ದು  ಒಟ್ಟಾರೆ 276.75 ಲಕ್ಷ ರೂಪಾಯಿ ಅನುದಾನ ಮಾತ್ರ ಬಿಡುಗಡೆ ಆಗಿರುತ್ತದೆ.

ಪ್ರಸಕ್ತ 2025-26 ಸಾಲಿನಲ್ಲಿ ಜುಲೈ 20ರವರೆಗೆ ಪ್ರಸ್ತಾವನೆ ಸಲ್ಲಿಸಿದ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 1623.00 ಲಕ್ಷ ರೂಪಾಯಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ 3797.00 ಲಕ್ಷ ರೂಪಾಯಿ ನಗರಾಭಿವೃದ್ಧಿ ಇಲಾಖೆ 2500.00 ಲಕ್ಷ ರೂಪಾಯಿ. ಒಟ್ಟು 7970.00 ಲಕ್ಷ ರೂಪಾಯಿ ಹಾನಿ ಆಗಿರುವುದಾಗಿ ಇಲಾಖೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

2025-26 ಸಾಲಿನಲ್ಲಿ  ಪ್ರತಿ ಇಲಾಖೆಗೆ ಬಿಡುಗಡೆಯಾದ ಅನುದಾನ ಶೂನ್ಯವಾಗಿದೆ ಎಂದು ಪತ್ರದಲ್ಲಿ ಅವರು  ಮನವರಿಕೆ ಮಾಡಿದ್ದಾರೆ. ಇನ್ನಷ್ಟು ಮಳೆ ಆಗುವ ಸಂಭವ ಇದ್ದು, ಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈವರೆಗೆ ಪ್ರಸ್ತಾವನೆ ಸಲ್ಲಿಸಿದರೂ, 2025-26 ನೇ ಸಾಲಿಗೆ ಯಾವುದೇ ಅನುದಾನ ಬಿಡುಗಡೆ ಆಗಿರುವುದಿಲ್ಲ, ಇದರಿಂದಾಗಿ ರಸ್ತೆಗಳ ನಿರ್ವಹಣೆಯಲ್ಲಿ ಗಂಭೀರ ಅಡಚಣೆ ಎದುರಾಗಿದೆ ಎಂದವರು ತಿಳಿಸಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 134.47 ಕೋಟಿಗೂ ಅಧಿಕ ಮೊತ್ತದ ಹಾನಿಯಾಗಿದ್ದು, ಹಾನಿಯಾದ ರಸ್ತೆಗಳು ಹಾಗೂ ಕಟ್ಟಡಗಳ ನಿರ್ವಹಣೆಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿರುತ್ತಾರೆ.

ಕಾರ್ಕಳ: ಶ್ರೀಗಂಧ ಮರ ಕಳ್ಳತನ:ಮೂವರ ಬಂಧನ

0

 

ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಅವರ ತೋಟದಿಂದ 4 ಲಕ್ಷ ರೂ‌. ಮೌಲ್ಯದ ಶ್ರೀಗಂಧದ ಮರಗಳನ್ನು ಕದ್ದೊಯ್ದ ಮೂವರು ಆರೋಪಿಗಳನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳವಾಗಿದ್ದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಕ್ಕುಂದೂರು ಅಯ್ಯಪ್ಪ ನಗರದ ಗಣೇಶ್ (44), ಮರ್ಣೆ ಗ್ರಾಮದ ಎಣ್ಣೆಹೊಳೆ ನಿವಾಸಿ‌ ಸಂತೋಷ್ (35), ಮತ್ತು ಬಂಟ್ವಾಳ ಬಾಳೆಪುಣಿ‌ ನಿವಾಸಿ ಮೊಯ್ದೀನ್ ಅಲಿಯಾಸ್ ಮೊಯಿದು ಕುಂಞ (60) ಬಂಧಿತ ಆರೋಪಿಗಳು.

ಆರೋಪಿಗಳು ಈ ಹಿಂದೆ ಶಿರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಶ್ರೀಗಂಧ ಕಳವು ಮಾಡಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಜೂ.16 ರಂದು ಕಳ್ಳತನ ನಡೆದಿತ್ತು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕಾರ್ಕಳ ಉಪವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ! ಹರ್ಷ ಪ್ರಿಯಂವದ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಗ್ರಾಮಾಂತರ ಠಾಣೆ ಪಿಎಸ್‌ಐ ಪ್ರಸನ್ನ ಎಂ.ಎಸ್, ಸುಂದರ್, ಎ.ಎಸ್.ಐ ಪ್ರಕಾಶ್, ಎ.ಎಸ್.ಐ ಸುಂದರ ಗೌಡ, ರುದ್ರೇಶ್, ಚಂದ್ರಶೇಖರ್, ಸುಮಿತ್ರ, ಮಹಾಂತೇಶ್, ಸೋಮಶೇಖರ ಎಸ್.ಜಿ, ರವೀಂದ್ರ, ಆನಂದ, ಮತ್ತು ಶಶಿಕಲಾ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

ಪುತ್ತೂರಿನ ಯುವ ಪಶುವೈದ್ಯೆ ಆತ್ಮಹತ್ಯೆ

0

 

ಪುತ್ತೂರಿನ ಬಪ್ಪಲಗುಡ್ಡೆಯ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಡಾ.ಕೀರ್ತನಾ ಜೋಶಿ ಪಶುವೈದ್ಯಕೀಯ ವಿಜ್ಞಾನದಲ್ಲಿ ಎಂಡಿ ಮುಗಿಸಿ ಪುತ್ತೂರು, ಕೊಲ್ಲೂರು ಮತ್ತು ಮಂಗಳೂರಿನಲ್ಲಿ ಖಾಸಗಿಯಾಗಿ ಅಭ್ಯಾಸ ಮಾಡುತ್ತಿದ್ದರು. ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಅವರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ ಮತ್ತು ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

ಪಕ್ಷದ ನಾಯಕರ ವಿರುದ್ದ ಬಹಿರಂಗ ಹೇಳಿಕೆ ನೀಡಿದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿಯನ್ನು ಪಕ್ಷದಿಂದ ಉಚ್ಚಾಟಿಸಬೇಕು: ಸೂರಜ್ ಶೆಟ್ಟಿ ನಕ್ರೆ ಆಗ್ರಹ

0

 

ರಾಜ್ಯದ ಗಮನ ಸೆಳೆದಿರುವ ಕಾರ್ಕಳದ ಪರಶುರಾಮ ನಕಲಿ ಪ್ರತಿಮೆ ಹಗರಣ ಮತ್ತು ಹಗರಣದ ರೂವಾರಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ದ ಕಾರ್ಕಳ ಕಾಂಗ್ರೆಸ್ ಪಕ್ಷವು ಸತತವಾಗಿ ಎರಡು ವರ್ಷಗಳಿಂದ ಹೋರಾಟ ಸಂಘಟಿಸುತ್ತಾ ಬಂದಿದೆ, ಮತ್ತು ಈ ಹೋರಾಟಕ್ಕೆ ಕೆಪಿಸಿಸಿ ಸಮಿತಿಯು ಪೂರ್ಣ ಬೆಂಬಲವನ್ನು ಘೋಷಿಸಿದ್ದು ಬೆಂಗಳೂರಿನ ಪ್ರೀಡಮ್ ಪಾರ್ಕ್ ಮೈದಾನದಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವಲ್ಲಿ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷದ ಹೋರಾಟದ ಫಲವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಗರಣದ ಕುರಿತು ವಿಧಾನಸಭಾ ಕಲಾಪದ ಸಂದರ್ಭದಲ್ಲಿಯು ಪ್ರಸ್ತಾಪ ಮಾಡಿದ್ದರು.

ಸುನೀಲ್ ಕುಮಾರ್ ಅವರ ನಕಲಿ ಪ್ರತಿಮೆಯ ವಿರುದ್ದದ ಕಾಂಗ್ರೆಸ್ ಪಕ್ಷದ ಹೋರಾಟದಲ್ಲಿ ಕಾನೂನು ಪ್ರಕ್ರಿಯೆಯ ಜವಾಬ್ದಾರಿ ವಹಿಸಿದ್ದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಇತ್ತೀಚೆಗೆ ಪರಶುರಾಮ ಹಗರಣದ ವಿಚಾರವಾಗಿ ನಮ್ಮ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ವಿರುದ್ದ ಬಹಿರಂಗ ಹೇಳಿಕೆ ನೀಡಿರುವುದು ಪಕ್ಷ ವಿರೋದಿ ಚಟುವಟಿಕೆಯಾಗಿದೆ.

ಜನವರಿಯಲ್ಲಿ ನಡೆದ ಕಾರ್ಕಳ ಕಾಂಗ್ರೆಸ್ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರು ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಭಾಷಣವನ್ನು ಆಕ್ಷೇಪಿಸಿ ಕೃಷ್ಣ ಶೆಟ್ಟಿ ಬಜಗೋಳಿಯವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿರುವುದು ಕ್ಷಮೆಗೆ ಅರ್ಹವಲ್ಲ. ಮಾಜಿ ಸಚಿವರು ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕರಾದ ವಿನಯಕುಮಾರ್ ಸೊರಕೆಯವರ ವಿರುದ್ದ ಮತ್ತು ಬೈಂದೂರಿನ ಮಾಜಿ ಶಾಸಕರು, ಹಿರಿಯರಾದ ಗೋಪಾಲ ಪೂಜಾರಿಯವರ ವಿರುದ್ದವು ಬೇರೆ ಬೇರೆ ಸಂದರ್ಭಗಳಲ್ಲಿ ಕಾರ್ಯಕರ್ತರ ನಡುವೆ ಅಪನಂಬಿಕೆ ಬರುವಂತೆ ಅಪಪ್ರಚಾರವನ್ನು ನಡೆಸುತ್ತಿದ್ದಾರೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಅವರ ಪಕ್ಷ ವಿರೋದಿ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದ ಸಂಘಟನೆಗೆ ತೀವ್ರ ಹಿನ್ನಡೆಯನ್ನು ಉಂಟುಮಾಡುತ್ತಿದೆ.

ಸಜ್ಜನ ರಾಜಕಾರಣಿ, ಶಿಕ್ಷಣ ತಜ್ನ ಕೆಪಿಸಿಸಿಯ ಕಾರ್ಯಾಧ್ಯಕ್ಷರು ಆಗಿರುವ ವಿಧಾನಪರಿಷತ್ ಸದಸ್ಯರಾದ ಮಾನ್ಯ ಮಂಜುನಾಥ ಭಂಡಾರಿಯವರ ಹೆಸರನ್ನು ಕೃಷ್ಣ ಶೆಟ್ಟಿ ಬಜಗೋಳಿಯವರು ದುರುಪಯೋಗ ಪಡಿಸಿಕೊಂಡು ಮಾನ್ಯ ಮಂಜುನಾಥ ಭಂಡಾರಿಯವರ ಹೆಸರಿಗೆ ಕಳಂಕ ತರುವ ಕೆಲಸವನ್ನು ನಡೆಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕರಾವಳಿಯ ಉಭಯ ಜಿಲ್ಲೆಗಳ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಅಪಪ್ರಚಾರ ನಡೆಸುತ್ತಾ ಪಕ್ಷ ವಿರೋದಿ ಚಟುವಟಿಕೆ ನಡೆಸುತ್ತಿರುವ ಕೃಷ್ಣ ಶೆಟ್ಟಿ ಬಜಗೋಳಿ ಅವರನ್ನು ತಕ್ಷಣ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕಾಗಿ ಪಕ್ಷದ ನಾಯಕರಲ್ಲಿ ವಿಂತಿಸುತ್ತೇನೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರ್ಡೊಂಜಿ ದಿನ ಕಾರ್ಯಕ್ರಮ

0

 

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ ಕ್ರಿಯೇಟಿವ್ ಕೆಸರ್ಡೊಂಜಿ ದಿನ ‘ ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ರಾಜ್ಯಾಧ್ಯಕ್ಷರು, ಫೆಡರೇಷನ್ ಆಫ್ ಕ್ವಾರಿ ಮತ್ತು ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ) ಬೆಂಗಳೂರು ಇವರು ಉದ್ಘಾಟನಾ ಭಾಷಣದಲ್ಲಿ ಪ್ರಕೃತಿಯ ಮಹತ್ವ, ಸಾಂಸ್ಕೃತಿಕ ಪರಂಪರೆಯ ಹಿನ್ನೆಲೆ ಮತ್ತು ಯುವ ಪೀಳಿಗೆಗೆ ಉತ್ತಮವಾದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಅಗತ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಸಭೆಯನ್ನು ಉದ್ದೇಶಿಸಿ ಮಾತುಗಳನ್ನಾಡಿದರು . “ಕೆಸರಿನಲ್ಲಿ ಆಡೋದು ಕೇವಲ ಆಟವಲ್ಲ, ಅದು ಒಂದು ಅನುಭವ, ಜೀವನಕ್ಕೆ ಪಾಠ ಕಲಿಸುವ ಕ್ರಿಯೆ”ಎಂದು ತಿಳಿಸಿದರು.

ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ. ರವರು ಪ್ರಾಸ್ತಾವಿಕ ನುಡಿಗಳನ್ನಡುತ್ತಾ ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುವ ಉದ್ದೇಶಗಳ ಬಗ್ಗೆ ತಿಳಿಸುತ್ತಾ, ಆಗಮಿಸಿದ ಸರ್ವರನ್ನು ಸ್ವಾಗತಿಸಿದರು. ಸ್ಥಳ ದಾನಿ ಯೋಗೀಶ್ ಕಿಣಿ, ಶಿಕ್ಷಕರು, ಸ.ಕಿ.ಪ್ರಾ ಶಾಲೆ ಪಲಾಯಿ ಬಾಕ್ಯಾರು, ತೆಳ್ಳಾರು ಇವರು ಸಭೆಯನ್ನು ಉದ್ದೇಶಿಸಿ “ಇಂದಿನ ತಾಂತ್ರಿಕ ಯುಗದಲ್ಲಿ ಮಕ್ಕಳಿಗೆ ಕ್ರೀಡೆ, ಮಣ್ಣು, ಪ್ರಕೃತಿಯ ಸಂಪರ್ಕ ಕಡಿಮೆ ಆಗುತ್ತಿದೆ. ಇಂತಹ ಕೆಸರ್ಡೊಂಜಿ ದಿನ ಕಾರ್ಯಕ್ರಮಗಳು ಮಕ್ಕಳಿಗೆ ನೈಜ ಅನುಭವಗಳನ್ನು ನೀಡುವ ಮೂಲಕ ಪ್ರಕೃತಿಯೊಂದಿಗೆ ಅವರ ಸಂಬಂಧವನ್ನು ಪುನರ್ ಸ್ಥಾಪಿಸುತ್ತದೆ” ಎಂದು ತಿಳಿಸಿದರು.

ಸಹ ಸಂಸ್ಥಾಪಕರಾದ ಆದರ್ಶ ಎಂ.ಕೆ ಹಾಗೂ ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಉದ್ಯಮಿಗಳಾದ ಸರ್ವೋತ್ತಮ ಕಡಂಬರವರು ಈ ಕಾರ್ಯಕ್ರಮದ ತಾತ್ಪರ್ಯವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಹಿರ್ಗಾನ ಗ್ರಾಮದ ಪ್ರಗತಿಪರ ಕೃಷಿಕರಾದ ಸತ್ಯನಾರಾಯಣ ಪಡ್ರೆ, ಸದಾನಂದ ಶೆಟ್ಟಿಗಾರ್, ವಿಠಲ್ ನಾಯಕ್ ಇವರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸಮಾರಂಭಕ್ಕೆ ಆಗಮಿಸಿದ ಎಲ್ಲರಿಗೂ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಖಾದ್ಯಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

ಸಮಾರೋಪ ಕಾರ್ಯಕ್ರಮ

ಅಧ್ಯಕ್ಷೀಯ ನುಡಿಗಳನ್ನಾಡಿದ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ವಿಮಲ್ ರಾಜ್. ಜಿ. ರವರು “ಗ್ರಾಮೀಣ ಜೀವನ ಶೈಲಿಯು ಪಾಠ ಪುಸ್ತಕದ ಹೊರಗಿನ ಶಿಕ್ಷಣವನ್ನು ನೀಡುತ್ತದೆ. ಆಧುನಿಕ ದಿನಚರಿಯಲ್ಲಿ ಮಕ್ಕಳಿಗೆ ಶಾರೀರಿಕ ಚಟುವಟಿಕೆ ಕಡಿಮೆಯಾಗಿದೆ. ಆದರೆ ಈ ಕೆಸರಿನ ಆಟಗಳು ಕೇವಲ ಮನರಂಜನೆ ಮಾತ್ರವಲ್ಲ, ಶಕ್ತಿಯ ಪೂರಕವೂ ಹೌದು” ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನವೀನ್ ಚಂದ್ರ ಶೆಟ್ಟಿ, ಅಧ್ಯಕ್ಷರು, ರೋಟರಿ ಕ್ಲಬ್, ಕಾರ್ಕಳ ಮತ್ತು ನಿರ್ದೇಶಕರು, ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್, ಕಾರ್ಕಳ ಇವರು “ನಮ್ಮ ಬಾಳಿನಲ್ಲಿ ಮಣ್ಣು ಎಂಬುದು ಅತ್ಯಂತ ಪ್ರಾಥಮಿಕ ಅಂಶ. ಮಣ್ಣಿನ ಜೊತೆ ನಮ್ಮ ಸಂಬಂಧ ಗಟ್ಟಿಯಾಗಿರಬೇಕೆಂದರೆ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯ “ಎಂದರು.

ಇನ್ನೋರ್ವ ಅತಿಥಿ Ar. ಸುನಿಲ್ ಕುಮಾರ್. ಜಿ. “ಕಲಿಕೆ ಎಂದರೆ ಪಾಠ ಮಾತ್ರವಲ್ಲ. ಅನುಭವವೂ ಕೂಡ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಶಿಸ್ತು, ಸಹಕಾರ ಮತ್ತು ಆತ್ಮವಿಶ್ವಾಸವನ್ನು ಕಲಿಯುತ್ತಾರೆ ಎಂದು ಅತಿಥಿ ನುಡಿಗಳನ್ನಾಡಿದರು. ಸಂಸ್ಥಾಪಕರಲ್ಲಿ ಓರ್ವರಾದ ವಿದ್ವಾನ್ ಗಣಪತಿ ಭಟ್, ಹಿರಿಯರೂ, ಉದ್ಯಮಿಗಳೂ ಆಗಿರುವ ಜಗದೀಶ್ ರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಎಲ್ಲಾ ಅತಿಥಿವರೇಣ್ಯರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅತಿಥಿಗಳಾದ ಚೇತನ್, ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ. ಬಿ., ಆದರ್ಶ ಎಂ.ಕೆ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಬೋಧಕ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕರಾದ ಲೋಹಿತ್ ಎಸ್.ಕೆ ಹಾಗೂ ಪ್ರಿಯಾಂಕ ತೀರ್ಥರಾಮ ರವರು ಕಾರ್ಯಕ್ರಮ ನಿರ್ವಹಿಸಿದರು.

ಕರ್ನಾಟಕದಲ್ಲಿ ಆರು ತಿಂಗಳಲ್ಲಿ 2.31 ಲಕ್ಷ ನಾಯಿ ಕಡಿತ-19 ರೇಬೀಸ್ ಸಾವು

0

ಕರ್ನಾಟಕದಲ್ಲಿ 2.31 ಲಕ್ಷ ನಾಯಿ ಕಡಿತ-19ರೇಬೀಸ್ ಸಾವು

2025 ರ ಮೊದಲ ಆರು ತಿಂಗಳಲ್ಲಿ ಕರ್ನಾಟಕದಲ್ಲಿ 2.31 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 19 ರೇಬೀಸ್ ಸಂಬಂಧಿತ ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳು ತಿಳಿಸಿವೆ. 2024 ರಲ್ಲಿ ಇದೇ ಅವಧಿಗೆ ಹೋಲಿಸಿದರೆ ಈ ಸಂಖ್ಯೆಗಳು ಗಮನಾರ್ಹ ಏರಿಕೆಯನ್ನು ಸೂಚಿಸುತ್ತವೆ. ಆಗ 1.69 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬೀಸ್ ಸಾವುಗಳು ದಾಖಲಾಗಿದ್ದವು. ಇದೀಗ 36.20% ಹೆಚ್ಚಳವನ್ನು ಸೂಚಿಸುತ್ತಿದೆ.

ಕಳೆದ ವರ್ಷ, 2024 ರ ಅಂತ್ಯದ ವೇಳೆಗೆ ರಾಜ್ಯದಲ್ಲಿ 3.6 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 42 ರೇಬೀಸ್ ಸಾವುಗಳು ದಾಖಲಾಗಿದ್ದವು. ಜನವರಿ 1 ರಿಂದ ಜೂನ್ 30 ರವರೆಗಿನ ಅವಧಿಯನ್ನು ಒಳಗೊಂಡ ಪ್ರಸಕ್ತ ವರ್ಷದ ಡೇಟಾವನ್ನು ಆರೋಗ್ಯ ಇಲಾಖೆಯ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ (IDSP) ಅಡಿಯಲ್ಲಿ ಸಂಗ್ರಹಿಸಲಾಗಿದೆ.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ, ಮೂರು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಎಳೆದಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ಮತ್ತಷ್ಟು ಒತ್ತಿಹೇಳಿದೆ. ಈ ಹಿಂದೆ ಇಂತಹ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಸುಧಾರಿತ ವರದಿ ಮಾಡುವ ಕಾರ್ಯವಿಧಾನಗಳು ಈಗ ಹೆಚ್ಚು ನಿಖರವಾದ ಡೇಟಾವನ್ನು ಬೆಳಕಿಗೆ ತಂದಿವೆ.