Home Blog Page 13

ಮಾಳ : ನಾಳೆ (ಆ .3)ಕಟ್ಟೆಬೈಲ್ ಮುಳ್ಳೂರು-ಮಾಳದ ಗಣೇಶ್ ಶೆಟ್ಟಿಗಾರ್ ಗದ್ದೆಯಲ್ಲಿ ಮಲೆಕುಡಿಯ ಸಮಾಜ ಬಾಂಧವರ ಆಟಿಡೊಂಜಿ ಕೆಸರ್ದ ಗೊಬ್ಬು

0

 

ಮಲೆಕುಡಿಯ ಸಮಾಜ ಬಾಂಧವರ ವತಿಯಿಂದ ನಾಳೆ (ಆ .3) ಆಟಿಡೊಂಜಿ ಕೆಸರ್ದ ಗೊಬ್ಬು ಕಾರ್ಯಕ್ರಮವು ಕಟ್ಟೆಬೈಲ್ ಮುಳ್ಳೂರು-ಮಾಳದ ಗಣೇಶ್ ಶೆಟ್ಟಿಗಾರ್ ಗದ್ದೆಯಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. .

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೆರ್ವಾಶೆ ಪ್ರಗತಿ ಪರ ಕೃಷಿಕ ಬೋಜ ಗೌಡ ಬೆರ್ಕಳ ನಡೆಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ವಿ.ಸುನಿಲ್ ಕುಮಾರ್, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುನಿಯಾಲು ಉದಯ್ ಶೆಟ್ಟಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ್ ಗೌಡ ಈದು, ಮಾಳ ಪಂಚಾಯತ್ ಅಧ್ಯಕ್ಷ ಉಮೇಶ್ ಪೂಜಾರಿ ಆಗಮಿಸಲಿದ್ದಾರೆ.

ಅತಿಥಿಗಳಾಗಿ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ, ಮಲೆಕುಡಿಯ ಕ್ರೀಡಾಕೂಟ ಸಮಿತಿ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಕರ್ಣ ನೂರಾಳ ಬೆಟ್ಟು, ಕೇಂದ್ರಿಯ ನಾಟಿ ಸಂಗ್ರಹಾಲಯ ಹಾರ್ದಲ್ಲಿ ಮಂಡಳಿ ಕುಂದಾಪುರ ಇದರ ಅರಣ್ಯ ರಕ್ಷಕ ರಾಜು ಗೌಡ, ಗೋವಿಂದ ಗೌಡ ಹೇರಾಂಡೆ, ಪ್ರಗತಿ ಪರ ಕೃಷಿಕರು, ಮಲ್ಲಾರು ಮಾಳ, ನಿತೀಶ್, ಅರಣ್ಯ ವೀಕ್ಷಕರು, ಕುದುರೆಮುಖ ವನ್ಯಜೀವಿ ವಿಭಾಗ, ಗಣೇಶ್ ಶಿರ್ವ, ಉದ್ಯಮಿಗಳು, ಕಲ್ಯಾಣಿ ಆಗೋ ಕೆಮಿಕಲ್ಸ್ ಪಂಚಾಯತ್ ಸಂಕೀರ್ಣ, ಹರಿಶ್ಚಂದ್ರ ತೆಂಡುಲ್ಕರ್, ಉದ್ಯಮಿಗಳು, ಮಾಳ, ಅಜಿತ್ ಹೆಗ್ಡೆ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಮಾಳ, ಸುಶೀಲ ಶೆಟ್ಟಿಗಾರ್, ಕಟ್ಟೆಬೈಲು (ಕೋಂಕ) ಮುಳ್ಳೂರು-ಮಾಳ
ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಕಂಬಳ ಕ್ಷೇತ್ರದ ಸಾಧಕ ಬಂಗಾಡಿ ಪರಂಬೇರು ನಾರಾಯಣ ಮಲೆಕುಡಿಯ ಹಾಗೂ ಆ ಮನೆತನದ ಮುದ್ದಿನ ಕೋಣ ರಾಜ್ಯ ರಾಜಧಾನಿ ಬೆಂಗಳೂರು ಕಂಬಳದ ನೇಗಿಲು ಹಿರಿಯ ವಿಭಾಗದ ರಾಜ ಕಿರೀಟ ಪಡೆದ ಬಂಗಾಡಿ ಗುಂಡು ಕೋಣನಿಗೆ ಮತ್ತು ಇದೇ ಫೆಬ್ರವರಿ ತಿಂಗಳಲ್ಲಿ ಕೆಫೇ ಕಾಫಿ ಡೇ ಮಾಲೀಕರಾದ
ಬಿ. ವಿ. ಸಿದ್ಧಾರ್ಥ ಹೆಗ್ಡೆಯವರ ಭಾವಚಿತ್ರವನ್ನು ಕಾಫಿ ಹಣ್ಣಿನಲ್ಲಿ ರಚಿಸಿ WORLD WIDE BOOK OF RECORD ನಲ್ಲಿ ತಮ್ಮ ಹೆಸರನ್ನು ಗಿಟ್ಟಿಸಿಕೊಂಡ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ವಿನಯ್ ಕುಮಾರ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹಲವು ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆ ಹಾಗೂ ಕೇರಳ ರಾಜ್ಯದ ಸ್ವಜಾತಿ ಬಾಂಧವರಿಗೆ ಮುಕ್ತ ಆಹ್ವಾನವಿದೆಯೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಆಂಗ್ಲ ಮಾಧ್ಯಮ ವಿಭಾಗ ಉದ್ಘಾಟನೆ

0

 

ಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜು.28 ರಂದು ಶಿಕ್ಷಣ ಇಲಾಖೆಯ ಆದೇಶದಂತೆ ಒಂದನೆಯ ತರಗತಿ ಆಂಗ್ಲ ಮಾಧ್ಯಮ ವಿಭಾಗವನ್ನು ಉದ್ಘಾಟಿಸಲಾಯಿತು.

ಶಾಲೆಯ ಹಳೆಯ ವಿದ್ಯಾರ್ಥಿ ರಘುನಾಥ್ ಶೆಟ್ಟಿ ಪಳ್ಳಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಜಗದೀಶ್ ಹೆಗ್ಡೆ ಪಳ್ಳಿ ಮತ್ತು ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್ ಇಂಗ್ಲಿಷ್ ತರಗತಿ ಉದ್ಘಾಟಿಸಿ, ಆಂಗ್ಲ ಮಾಧ್ಯಮದ ಅಗತ್ಯತೆಯನ್ನು ತಿಳಿಸಿ ಶುಭ ಹಾರೈಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಇಲಾಖೆಯ ವತಿಯಿಂದ ಆಗಮಿಸಿದ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ ಶೆಟ್ಟಿ, ಕನ್ನಡದ ಜೊತೆಗೆ ಆಂಗ್ಲ ಭಾಷೆ ಕಲಿಕೆಯ ಮಹತ್ವವನ್ನು ತಿಳಿಸಿ ಇಲಾಖೆಯ ಆಶಯವನ್ನು ಪ್ರಾಸ್ತಾವಿಕದ ಮೂಲಕ ತಿಳಿಸಿದರು. ಆಂಗ್ಲ ಮಾಧ್ಯಮ ವಿಭಾಗಕ್ಕೆ ಹಳೆ ವಿದ್ಯಾರ್ಥಿಗಳ ನೆರವಿನಿಂದ ಶಿಕ್ಷಕರನ್ನು ನೇಮಿಸಿ ವೇತನವನ್ನು ನೀಡುವ ವ್ಯವಸ್ಥೆ ಮಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ದಾನಿಗಳಾದ ಶೇಖರ್ ಶೆಟ್ಟಿ ಪಳ್ಳಿ, ಜಯಕರ ಶೆಟ್ಟಿ, ಮನೋಹರ್ ಶೆಟ್ಟಿ, ಪಂಚಾಯತ್ ಸದಸ್ಯ ವಿಜಯ್ ಎಂ ಶೆಟ್ಟಿ, ಗೋವಿಂದ ಜೋಗಿ, ದಿನಕರ ಶೆಟ್ಟಿ, ಪ್ರಶಾಂತ್ ಶೆಟ್ಟಿ, ನಿಟ್ಟೆ ಸಮೂಹ ಸಂಪನ್ಮೂಲ ವ್ಯಕ್ತಿ ಶಿವಾನಂದ ಕೆ, ಎಸ್ ಡಿ ಎಮ್ ಸಿ ಅಧ್ಯಕ್ಷ ಪ್ರಭಾಕರ ಬಂಗೇರ, ಮುಖ್ಯ ಶಿಕ್ಷಕಿ ನಾಗರತ್ನ, ವಿದ್ಯಾರ್ಥಿ ನಾಯಕಿ ಸೌಮ್ಯ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಪ್ರೇಮಲತಾ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ ಜ್ಞಾನಸುಧಾ : ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನೆ

0

 

ಕಾರ್ಕಳದ ಜ್ಞಾನಸುಧಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎನ್.ಎಸ್.ಎಸ್‌ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶಿವರಾಮ್ ಅಜ್ರಿ ಎಂ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಅವಿನಾಶ್ ಜಿ. ಶೆಟ್ಟಿ ನೆರವೇರಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ಎಂ. ಕೊಡವೂರ್, ಸಹಯೋಜನಾಧಿಕಾರಿ ಪ್ರಸಾದ್ ಆಚಾರ್ಯ ಎಚ್, ಘಟಕದ ವಿದ್ಯಾರ್ಥಿ ನಾಯಕರಾದ ಭವಿಷ್ ಎಸ್ ಶೆಟ್ಟಿ ಹಾಗೂ ಸೃಷ್ಟಿ ಶೆಟ್ಟಿ ರೆಂಜಾಳ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲರಾದ ಸಾಹಿತ್ಯ, ಉಷಾ ರಾವ್ ಯು, ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಮಿತ್ರಾ, ಸಂಖ್ಯಾಶಾಸ್ತ್ರ ಉಪನ್ಯಾಸಕ ಮಂಜುನಾಥ್ ಮುದೂರು ಉಪಸ್ಥಿತರಿದ್ದರು.

ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಶೈಲೇಶ್ ಶೆಟ್ಟಿ, ಬೈಲೂರು ಸ್ವಾಗತಿಸಿ, ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಥೀಮ್ ಪಾರ್ಕ್ ನಲ್ಲಿ ಕಂಚಿನ ಮೂರ್ತಿ ಸ್ಥಾಪನೆಗೆ ಮುನಿಯಾಲು ಉದಯ್ ಶೆಟ್ಟಿ ಅರ್ಜಿ ಸಲ್ಲಿಸುರುವದು ಸ್ವಾಗತಾರ್ಹ-ಸುಧೀರ್ ಹೆಗ್ಡೆ

0

ಹಲವಾರು ವಿವಾದಗಳಿಗೆ ಕಾರಣವಾದ ಬೈಲೂರು ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್,ನಲ್ಲಿ ಮತ್ತೆ ನೈಜ ಕಂಚಿನ ಪರಶುರಾಮ ಪ್ರತಿಮೆ ಪ್ರತಿಷ್ಟಾಪನೆಗಾಗಿ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದನ್ನು ಬೈಲೂರಿನ ಹಿರಿಯ ಮುಖಂಡರಾದ ಸುಧೀರ್ ಹೆಗ್ಡೆ ಸ್ವಾಗತಿಸಿದ್ದಾರೆ.

2023 ರ ಜನವರಿಯಲ್ಲಿ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆಯಾದಾಗ ನಮ್ಮೂರಿನಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರ ಉದ್ಘಾಟನೆಯಾಗಿದೆ ಎಂದು ಸ್ಥಳೀಯರಾದ ನಾವು ಅತ್ಯಂತ ಸಂತಸಪಟ್ಟಿದ್ದೆವು, ಆದರೆ ಪ್ರತಿಮೆ ನಿರ್ಮಾಣದಲ್ಲಾದ ಲೋಪ ದೋಷಗಳ ವಿವಾದದಿಂದಾಗಿ ಊರಿನವರಾದ ನಮ್ಮ ಸಂತಸವು ಹೆಚ್ಚು ಸಮಯ ಉಳಿಯದೆ ನಮಗೆ ಬೇಸರ ಉಂಟಾಗಿದೆ. ಪರಶುರಾಮ ಪ್ರತಿಮೆ ವಿವಾದದಿಂದಾಗಿ ನಮ್ಮೂರಿನ ಹೆಸರು ಪದೇ ಪದೇ ಮಾದ್ಯಮದಲ್ಲಿ ಬರುತ್ತಿರುವುದು ನಮಗೆ ತೀವ್ರ ಮುಜುಗರ ಉಂಟಾಗಿದೆ.

ಪ್ರತಿಮೆ ನಿರ್ಮಾಣದ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಆ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಆದರೆ ಯಾರದ್ದೋ ತಪ್ಪಿನಿಂದಾಗ ಊರವರಾದ ನಮಗೆ ತೀವ್ರ ಮುಜುಗರ ಉಂಟಾಗುತ್ತಿದೆ. ಹಾಗಾಗಿ ಮತ್ತೆ ಅದೇ ಜಾಗದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣ ಆಗಬೇಕು ಆ ಮೂಲಕ ಊರಿಗೆ ಅಂಟಿದ ಕಳಂಕದ ಕೊಳೆ ತೊಳೆದು ಹೋಗಬೇಕು ಎನ್ನುವುದು ಸ್ಥಳೀಯರ ಹಾಗೂ ಗ್ರಾಮಸ್ಥರಾದ ನಮ್ಮೆಲ್ಲರ ಆಶಯವಾಗಿದೆ.

ಮಾಧ್ಯಮಗಳಲ್ಲಿ ವರದಿಯಾದಂತೆ ಇಲ್ಲಿ ಮತ್ತೆ ಕಂಚಿನ ಪರಶುರಾಮ ಪ್ರತಿಮೆ ನಿರ್ಮಾಣವಾಗಬೇಕು ಎಂದು ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿರುವುದನ್ನು ನಾವೆಲ್ಲ ಸ್ವಾಗತಿಸುತ್ತೇವೆ ಮತ್ತು ತುಳುನಾಡಿನ ಸೃಷ್ಠಿಕರ್ತ ಮಹಾವಿಷ್ಣುವಿನ ಅವತಾರವಾಗಿರುವ ಭಗವಾನ್ ಪರಶುರಾಮನ ಕಂಚಿನ ಪ್ರತಿಮೆ ಪುನರ್ ಪ್ರತಿಷ್ಠಾಪನೆಯ ಕೆಲಸ ಕಾರ್ಯಗಳಿಗೆ ಊರವರಾಗಿ ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸುಧೀರ್ ಹೆಗ್ಡೆ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಲ್ಲೂರು ಪ್ರೌಢಶಾಲೆಯಲ್ಲಿ ನೋಟ್ ಬುಕ್ ವಿತರಣೆ ಕಾರ್ಯಕ್ರಮ

0

ಹುರ್ಲಾಡಿ ಶ್ರೀ ರಘುವೀರ್ ಎ. ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗಾಯತ್ರಿ ಪ್ರಭು ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಪಂಚಾಯತ್ ಅಧ್ಯಕ್ಷ ಅಶೋಕ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯೆ ನಳಿನಿ, ಉದ್ಯಮಿ ಚಂದ್ರಶೇಖರ ಶೆಟ್ಟಿ ನಲ್ಲೂರು, ಶಾಲಾ ಮುಖ್ಯೋಪಾಧ್ಯಾಯಿನಿ ಗೀತಾ ಪೈ, SDMC ಅಧ್ಯಕ್ಷೆ ದಿವ್ಯ ಶೆಟ್ಟಿ, ಯತೀಶ್ ಶೆಟ್ಟಿ ಕಲ್ಕುಡ ಸಮಿತಿ ಸದಸ್ಯರು, ಸತ್ಯೇಂದ್ರ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಕೆಲಸದಾಕೆಯ ಮೇಲೆ ರೇ* ಪ್ರಕರಣ; ಪ್ರಜ್ವಲ್‌ ರೇವಣ್ಣ ಅತ್ಯಾ*ರಿ ಎಂದು ಕೋರ್ಟ್‌ ತೀರ್ಪು

0

 

ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ ಕಣ್ಣೀರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು. ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು.

ತೀರ್ಪು ಕಾಯ್ದಿರಿಸಿದ್ದ ಕೋರ್ಟ್‌ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.

ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣದಲ್ಲಿ ತೀರ್ಪು ಬರಬೇಕಿದೆ.

ಕ್ರೈಸ್ಟ್ ಕಿಂಗ್: ಪ್ರಾಥಮಿಕ ಹಾಗೂ ಪ್ರೌಢಶಾಲೆಯ ನಾಲ್ಕು ವಿದ್ಯಾರ್ಥಿಗಳು ಚೆಸ್‍ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದಿಂದ ಎಂಟನೇ ತರಗತಿಯ ಮೌಲ್ಯ, ಪ್ರೌಢಶಾಲಾ ವಿಭಾಗದಿಂದ ಒಂಬತ್ತನೇ ತರಗತಿಯ ವರುಣ್ ಕಾಮತ್, ಹತ್ತನೇ ತರಗತಿಯ ಸೋಹನ್ ಭಂಡಾರಿ ಮತ್ತು ಅಕ್ಷಿತಾ ತಾಲೂಕು ಮಟ್ಟದಲ್ಲಿ ಪ್ರಶಸ್ತಿ ಗಳಿಸಿ, ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ರೋಟರಿ ಕ್ಲಬ್ ಕಾರ್ಕಳ:ಆಮ್ಲಜನಕ ಸಾಂದ್ರೀಕರಣ ಯಂತ್ರ ಹಸ್ತಾಂತರ

0

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಉಸಿರಾಟದ ತೊಂದರೆ ಇರುವ ವ್ಯಕ್ತಿಗೆ ಆಮ್ಲಜನಕ ಸಾಂದ್ರೀಕರಣ ಯಂತ್ರವನ್ನು ಹಸ್ತಾಂತರಿಸಿ ಮಾತನಾಡಿದ ರೋಟರಿ ಸಂಸ್ಥೆಯ ಮುಖ್ಯ ಧ್ಯೇಯ ಸಮುದಾಯ ಸೇವೆಯೇ ಆಗಿರುತ್ತದೆ. ಸಮಾಜದ ಅಶಕ್ತರಿಗೆ ಸಹಾಯ ಮಾಡುವುದರಲ್ಲಿ ತೃಪ್ತಿ ಕಾಣುವ ಸಂಸ್ಥೆಯೇ ರೋಟರಿ ಎಂದು ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು.

ಇದೇ ಸಂದರ್ಭದಲ್ಲಿ ರೋಟರಿಯ ಮೇಜರ್ ಡೋನರ್ ತುಕಾರಾಮ ನಾಯಕ್ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು. ರೊ.ಸುವರ್ಣ ನಾಯಕ್, ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ಭರತೇಶ್ ಆಧಿರಾಜ್, ಮೋಹನ್ ಶೆಣೈ ಎರ್ಮಾಳು, ಶೈಲೇಂದ್ರ ರಾವ್, ಇಕ್ಬಾಲ್ ಅಹಮದ್, ಶೇಖರ್ ಹೆಚ್. ಅರುಣ್ ಕುಮಾರ್ ಶೆಟ್ಟಿ, ಸುರೇಶ್ ನಾಯಕ್, ಬಾಲಕೃಷ್ಣ ದೇವಾಡಿಗ, ಶ್ರೀಶ ಭಟ್, ಗಣೇಶ್ ಸಾಲಿಯಾನ್, ಕಾರ್ಯದರ್ಶಿ ಚೇತನ್ ನಾಯಕ್, ಚೇತನ್ ಕುಮಾರ್,ವಸಂತ್ ಎಂ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಕಳ: ಅಸಲಿ ಕಂಚಿನ ಪ್ರತಿಮೆ ಸ್ಥಾಪನೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ – ಪ್ರದೀಪ್ ಬೇಲಾಡಿ

0

 

ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ಪ್ರತಿಷ್ಟಾಪನೆಯಾದ ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ಸತ್ಯವು ಪೋಲಿಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ ಸಾಬೀತಾಗಿದ್ದು, ಈ ಕಾರಣದಿಂದ ಬೆಟ್ಟದ ಮೇಲೆ ಮತ್ತೆ ಕಂಚಿನಿಂದಲೇ ತಯಾರಿಸಿದ ಪರಶುರಾಮ ಪ್ರತಿಮೆಯನ್ನು ವಿಧಿವತ್ತಾಗಿ ಪುನರ್ ಪ್ರತಿಷ್ಟಾಪಿಸಬೇಕು ಎಂದು ನಮ್ಮ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಸ್ವಾಗತಾರ್ಹ ಎಂದು ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.

ನಕಲಿ ಪರಶುರಾಮ ಪ್ರತಿಮೆಯ ಪ್ರತಿಷ್ಟಾಪನೆಯಿಂದ ಅನೇಕ ವಿವಾದಗಳು ಎದ್ದು ಇದು ಕಾರ್ಕಳದ ಗೌರವಕ್ಕೆ ಬಹುದೊಡ್ಡ ಕಪ್ಪು ಚುಕ್ಕೆಯಾಗಿದೆ, ಶಾಸಕ ಸುನೀಲ್ ಕುಮಾರ್,ರವರ ರಾಜಕೀಯ ಹಿತಾಸಕ್ತಿಗಾಗಿ ಚುನಾವಣೆಯನ್ನು ಗೆಲ್ಲುವುದಕ್ಕೋಸ್ಕರ ಪರಶುರಾಮ ಪ್ರತಿಮೆಯನ್ನು ನಿರ್ಮಿಸಲಾಗಿತ್ತು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಉದ್ದೇಶಿತ ಯೋಜನೆಯಂತೆ ಕಂಚಿನಿಂದಲೇ ತಯಾರಿಸಲಾದ ಪರಶುರಾಮನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿದ್ದರೆ ಅದೊಂದು ಶ್ರದ್ದೆ ಮತ್ತು ಭಕ್ತಿ ನಂಬಿಕೆಗೊಂದು ಗೌರವ ಲಭಿಸುತ್ತಿತ್ತು. ಆದರೆ ಕಂಚಿನ ಲೋಹದ ಹೆಸರಿನಲ್ಲಿ ಪೈಬರ್ ಮತ್ತು ಇತರ ವಸ್ತುಗಳಿಂದ ಪರಶುರಾಮನ ಪ್ರತಿಮೆಯನ್ನು ನಿರ್ಮಿಸಿರುವುದರಿಂದ ಜನರ ಭಾವನೆಗಳು ಮತ್ತು ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿದೆ.

ಪರಶುರಾಮ ಪ್ರತಿಮೆಯು ಕಂಚಿನಿಂದ ತಯಾರಿಸಲಾಗಿಲ್ಲ ಎನ್ನುವ ವಿಚಾರ ಪೋಲಿಸರ ತನಿಖೆಯಿಂದ ಬಹಿರಂಗವಾಗಿದ್ದು, ಜನರ ನಂಬಿಕೆಗೆ ದ್ರೋಹ ಬಗೆದು ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸಲಾದ ಈ ಯೋಜನೆಯನ್ನು ಧಾರ್ಮಿಕ ಮುಂದಾಳುಗಳ ಮಾರ್ಗದರ್ಶನದೊಂದಿಗೆ ಮತ್ತೆ ಅದೇ ಜಾಗದಲ್ಲಿ ಕಂಚಿನ ಪರಶುರಾಮ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡುವುದು ಆಸ್ತಿಕ ಜನರ ಕರ್ತವ್ಯವಾಗುತ್ತದೆ. ಇಲ್ಲವಾದರೆ ಇದೊಂದು ಸಾಕ್ಷಾತ್ ದೇವರಿಗೆ ಎಸಗಿದ ಬಹುದೊಡ್ಡ ದ್ರೋಹವಾಗಿ ದೈವ ಶಾಪಕ್ಕೆ ಒಳಗಾಗುವ ಅಪಾಯವೂ ಇದೆ, ಅಷ್ಟು ಮಾತ್ರವಲ್ಲದೆ ಆಸ್ತಿಕ ಜನರಿಗೆ ದ್ರೋಹ ಬಗೆದ ಕೃತ್ಯವಾಗಿ ಇತಿಹಾಸದ ಪುಟ ಸೇರಲಿದೆ.

ಇತಿಹಾಸದಲ್ಲಿ ದಾಳಿಕೋರರಿಂದ ಆಕ್ರಮಣಕ್ಕೊಳಗಾಗಿ ವಿರೂಪಗೊಂಡ ದೈವ ದೇವಸ್ಥಾನಗಳ ಜೀರ್ಣೋದ್ದಾರ ಕಾರ್ಯವನ್ನು ಆಯಾಯ ಕಾಲಕ್ಕನುಗುಣವಾಗಿ ಆಗಿನ ಪ್ರಾಜ್ಙಾರು ಮತ್ತೆ ನಡೆಸಿಕೊಂಡು ತಮ್ಮ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಿದರೋ, ಅದೇ ರೀತಿ ರಾಜಕೀಯ ಹಿತಾಸಕ್ತಿಯಿಂದಾಗಿ ಉಮಿಕಲ್ ಬೆಟ್ಟದ ಮೇಲೆ ಧಾರ್ಮಿಕ ನಂಬಿಕೆಗೆ ಭಂಗವುಂಟಾದ ಯೋಜನೆಯನ್ನು ಮತ್ತೆ ಪುನರ್ ಪ್ರತಿಷ್ಟಾಪಿಸಿ ಜನರ ಧಾರ್ಮಿಕ ಭಾವನೆಯನ್ನು ಎತ್ತಿ ಹಿಡಿಯವುದು ಕೂಡ ನಾಗರಿಕ ಸಮಾಜದ ಕರ್ತವ್ಯವಾಗುತ್ತದೆ, ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ನಾಗರಿಕ ಸಮಾಜದ ಪರವಾಗಿ ಅರ್ಜಿ ಸಲ್ಲಿಸಿರುವುದು ಸ್ತುತ್ಯರ್ಹ ಕಾರ್ಯವಾಗಿದೆ.

ಕಂಚಿನ ಪರಶುರಾಮ ಪ್ರತಿಮೆಯ ಪುನರ್ ಸ್ಥಾಪನೆಯ ಬಗ್ಗೆ ಒಮ್ಮೆಯೂ ಮಾತನಾಡದ ಶಾಸಕ ಸುನೀಲ್ ಕುಮಾರ್ ಯೋಜನೆಗೆ ಹಣ ಬಿಡುಗಡೆ ಮಾಡಿ ಎಂದು ಪದೇ ಪದೇ ಸರ್ಕಾರಕ್ಕೆ ಆಗ್ರಹಿಸುತ್ತಿರುವುದು ಯಾಕಾಗಿ..? ಬಿಡುಗಡೆಯಾದ ಹಣದಲ್ಲಿ ನಕಲಿ ಪ್ರತಿಮೆ ನಿರ್ಮಿಸಿ ಜನರಿಗೆ ಒಮ್ಮೆ ಮೋಸ ಮಾಡಿದವರು ಮತ್ತೆ ಮತ್ತೆ ಹಣ ಬಿಡುಗಡೆ ಮಾಡಿ ಎನ್ನುತ್ತಿರುವುದು ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುದಕ್ಕಾಗಿಯೆ..?

ಕಂಚಿನ ಪರಶುರಾಮ ಪ್ರತಿಮೆಯನ್ನು ನಿರ್ಮಿಸಲಾಗಿತ್ತು ಎಂದು ಜನರನ್ನು ನಂಬಿಸಲಾಗಿತ್ತು ಆ ನಂಬಿಕೆಗೆ ದ್ರೋಹವಾಗಿದ್ದು ಅಲ್ಲಿ ಮತ್ತೆ ಕಂಚಿನ ಪ್ರತಿಮೆ ನಿರ್ಮಾಣ ಮಾಡುವುದಕ್ಕಾಗಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ, ಅವರ ಉದ್ದೇಶವು ಸ್ಪಷ್ಟವಾಗಿದೆ, ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳ: ಎಕನೋವನ್ಸಾ ವಿವಿಧ ಸ್ಪರ್ಧಾವಳಿ : ಕ್ರಿಯೇಟಿವ್ ಕಾಲೇಜಿಗೆ ಚಾಂಪಿಯನ್ ಶಿಪ್ ಗರಿ

0

ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳಾದ ಆದ್ಯ ಪಡ್ರೆ, ಚಿರಾಯು, ಸುಜೀತ್, ಶ್ರೇಯಸ್, ಮಂಗಿಲಲ್, ಅನ್ವಿತ್, ಕಿಶನ್, ಚಿನ್ಮಯ್, ಸೃಷ್ಟಿ, ಅರುಷಿ, ಸೋನಿಯಾ, ಸಂಜನಾ, ಪ್ರೇರಣಾ, ಹರ್ಷಿತ, ಅನಿಷಾ, ವೃದ್ಧಿ, ದ್ಯುತಿ, ಪೂರ್ವಿ ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಯನ್ನು ತಂದು ಕಾಲೇಜಿನ ಕೀರ್ತಿ ಹೆಚ್ಛ್ಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದ ಶ್ಲಾಘನೆ
ವ್ಯಕ್ತಪಡಿಸಿದ್ದಾರೆ.