Home Blog Page 19

ನಿಟ್ಟೆ: 5,000 ಮೀಟರ್ ಓಟದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿಗೆ ಬೆಳ್ಳಿ ಪದಕ

0

 

ಸೆಪ್ಟೆಂಬರ್ 23 ರಂದು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ 5,000 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ದ್ವಿತಿಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ನಂದಿನಿ ಅವರು ಬೆಳ್ಳಿ ಪದಕ ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಅವರು 5 ನೇ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಯನ್ನು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

ಕಾರ್ಕಳ: ಲಲಿತ ಕಲಾ ಸಂಘದ ಉದ್ಘಾಟನಾ ಕಾರ್ಯಕ್ರಮ

0

 

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಲಲಿತ ಕಲಾ ಸಂಘದ ಪ್ರಸ್ತುತ ಸಾಲಿನ ಉದ್ಘಾಟನೆಯನ್ನು ಕಾರ್ಕಳದ ಸಂಗೀತ ಶಿಕ್ಷಕರಾಗಿರುವ ಶ್ರೀಮತಿ ಪೂರ್ಣಿಮಾ ಗೋರೆಯವರು ನೆರವೇರಿಸಿದರು.

ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ಸಂಗೀತ ಹಾಗೂ ಭರತ ನಾಟ್ಯದಲ್ಲಿ ವಿದ್ಯಾರ್ಥಿನಿಯರು ಸೂಕ್ತ ರೀತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವೇದಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದರು.

ಲಲಿತ ಕಲಾ ಸಂಘದ ನಿರ್ದೇಶಕರಾದ ಶ್ರೀಯುತ ಸೀತಾರಾಮ್ ನಾಯಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿಸಿದರು. ವಿದ್ಯಾರ್ಥಿ ನಾಯಕಿ ಸುರಕ್ಷಾ ವಂದಿಸಿದರು. ಕು.ಇಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಅಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

ಕಾರ್ಕಳ: ಸೇವಾ ಪಾಕ್ಷಿಕ ಅಭಿಯಾನ-ಕುಂಬಾರಿಕೆ ಪರಿಣತರಿಗೆ ಸನ್ಮಾನ

0

 

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಶ್ರೀಮತಿ ವಿನಯಾ ಡಿ ಬಂಗೇರ ಅವರ ಅಧ್ಯಕ್ಷತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆಯಡಿಯಲ್ಲಿ ಗ್ರಾಮೀಣ ಭಾಗದ ಕುಶಲಕರ್ಮಿಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಮಾರು 50 ವರ್ಷಗಳಿಂದ ಕುಂಬಾರಿಕೆ ವೃತ್ತಿಯಲ್ಲಿ ತೊಡಗಿರುವ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಕಡಾರಿ ಬೊಗ್ಗು (ಅಣ್ಣು)ಮೂಲ್ಯ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ಕುಂಬಾರಿಕೆ ಉತ್ಪನ್ನಗಳನ್ನು ಖರೀದಿಸಲಾಯಿತು.

ಈ ಸಂದರ್ಭದಲ್ಲಿ ಸೇವಾಪಾಕ್ಷಿಕ ಸಂಚಾಲಕ ರವೀಂದ್ರ ಕುಮಾರ್ ಅವರು ಮಾತನಾಡಿ ಗ್ರಾಮೀಣ ಭಾಗದ ಕುಶಲಕರ್ಮಿಗಳನ್ನು ಗುರುತಿಸಿ, ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿ ಕೊಡುವುದರಿಂದ ಪ್ರಧಾನಿ ಮೋದಿಜಿ ಅವರ ಆತ್ಮ ನಿರ್ಭರ ಭಾರತ ಕನಸು ಸಾಕಾರಗೊಳ್ಳುತ್ತದೆ ಎಂದರು.

ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಅವರು ಮಾತನಾಡಿ, ಸೇವಾ ಪಾಕ್ಷಿಕದ ನಿರಂತರ ಸೇವಾ ಕಾರ್ಯಗಳು ಮಹಿಳಾ ಮೋರ್ಚಾದಿಂದ ನಡೆಯುತ್ತಿದ್ದು, ನಮ್ಮ ಹಿರಿಯರು ಸಾಂಪ್ರದಾಯಿಕ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದು, ಇದರಿಂದ ಉತ್ತಮ ಆರೋಗ್ಯ ವೃದ್ಧಿ ಮಾತ್ರವಲ್ಲದೆ ಗ್ರಾಮೀಣ ಭಾಗದ ಆರ್ಥಿಕತೆಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮಹಿಳಾ ಮೋರ್ಚಾದ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ಬೋಳ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ಕವಿತಾ ಹರೀಶ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಸುಮಾ ರವಿಕಾಂತ್, ವಿನುತಾ ಆಚಾರ್ಯ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರಜತ್, ಮಹಿಳಾ ಮೋರ್ಚಾ ನಗರ ಶಕ್ತಿ ಕೇಂದ್ರ ಅಧ್ಯಕ್ಷರಾದ ಮಮತಾ ಸುವರ್ಣ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿಗಾರ್,,ಮುಡಾರು ಪಂಚಾಯತ್ ಅಧ್ಯಕ್ಷರಾದ ಶೃತಿ ಅದಿಕಾರಿ,ಮಾಳ ಪಂಚಾಯತ್ ಉಪಾಧ್ಯಕ್ಷರಾದ ವಿಮಲ ಪೂಜಾರಿ, ಪಂಚಾಯತ್ ಸದಸ್ಯರುಗಳಾದ ಮಾಲತಿ ನಾಯ್ಕ್, ಸರಸ್ವತಿ ಆಚಾರ್ಯ, ಸುಂದರಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಚಿತ್ರಾ, ಶುಭ ಜಗದೀಶ್, ಹರಿಣಿ, ಕುಶಲ, ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.
9900782313

 

ಸೆ.21 ರಂದು ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅಹ್ವಾನ

0

 

ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಬೆಳ್ಮಣ್‌ ಮಹಾಶಕ್ತಿಕೇಂದ್ರ, ಮಹಿಳಾ ಮೋರ್ಚಾ ವತಿಯಿಂದ ಸೆ.21 ರಂದು ಭಾರತದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಅಭಯ ರಾಣಿ ಉಳ್ಳಾಲದ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ಬೆಳ್ಮಣ್ ಶ್ರೀಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಇದರ ಪ್ರಯುಕ್ತ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೈಸ್ಕೂಲ್‌ ಮತ್ತು ಪದವಿಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ವಿಕಸಿತ ಭಾರತ ವಿಷಯದ ಕುರಿತು ಚಿತ್ರಕಲೆ ಹಾಗು ಅಭಯ ರಾಣಿ ಉಳ್ಳಾಲದ ಅಬ್ಬಕ್ಕ ವಿಷಯದ ಕುರಿತು ಭಾಷಣ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಪ್ರಥಮ ಬಹುಮಾನವಾಗಿ 2 ಸಾವಿರ ರೂ., ದ್ವಿತೀಯ ಬಹುಮಾನ 1500 ರೂ. ತೃತೀಯ ಬಹುಮಾನವಾಗಿ ಸಾವಿರ ರೂ. ಸಿಗಲಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ:
1. ಹೈಸ್ಕೂಲ್‌ ಮತ್ತು ಕಾಲೇಜು ವಿಭಾಗಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳು ನಡೆಯುತ್ತದೆ.
2.ಚಿತ್ರಕಲಾ ಸ್ಪರ್ಧೆಗೆ 45 ನಿಮಿಷ ಮತ್ತು ಭಾಷಣ ಸ್ಪರ್ಧೆಗೆ 3+1 ನಿಮಿಷಗಳ ಅವಕಾಶ.
3. ಚಿತ್ರಕಲಾ ಸ್ಪರ್ಧೆಗೆ ಡ್ರಾಯಿಂಗ್‌ ಪೇಪರ್ ಒದಗಿಸಲಾಗುವುದು. ಉಳಿದೆಲ್ಲಾ ಪರಿಕರಗಳನ್ನು ಸ್ಪರ್ಧಿಗಳು ತರಬೇಕು. ಬಣ್ಣದ ಚಿತ್ರ ಬಿಡಿಸಲು ಅವಕಾಶ ಇರುತ್ತದೆ.
4. ಸ್ಪರ್ಧಿಗಳು ಶಾಲಾ- ಕಾಲೇಜು ಮುಖ್ಯಸ್ಥರಿಂದ ಧೃಡೀಕರಣ ಪತ್ರವನ್ನು ತರವುದು.
5. ಸ್ಪರ್ಧಿಗಳು 18 ಸೆಪ್ಟೆಂಬರ್‌ ಒಳಗೆ ಹೆಸರನ್ನು ದೂರವಾಣಿ ಮೂಲಕ ನೋಂದಾಹಿಸಬಹುದು.

ಮೈಸೂರು ದಸರಾ ಉದ್ಘಾಟನೆಗೆ ಕವನದ ಮೂಲಕ ʼಬಾಗಿನʼ ನೀಡಿದ ಬಾನು ಮುಷ್ತಾಕ್‌

0

 

ಮೈಸೂರು: ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ ಎಂದು ಬಾನು ಮುಷ್ತಾಕ್‌ ಆಶಿಸಿದ್ದಾರೆ.

ಸಾಹಿತಿ ಹಾಗೂ 2025ರ ಅಂತಾರಾಷ್ಟ್ರೀಯ ಬೂಕರ್ ಬಹುಮಾನ ವಿಜೇತೆ ಬಾನು ಮುಷ್ತಾಕ್ ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು, ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಬಾಸ್ಕೆಟ್‌ಬಾಲ್ : ಕಾರ್ಕಳ ಜ್ಞಾನಸುಧಾದ ಭುವನ್ ರಾಜ್ಯಮಟ್ಟಕ್ಕೆ

0

 

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಚದುರಂಗ : ಕಾರ್ಕಳ ಜ್ಞಾನಸುಧಾದ ಆಜ್ಲೀನ್ ರಾಜ್ಯಮಟ್ಟಕ್ಕೆ

0

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವಕಾಲೇಜು ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿಯ ಅಜ್ಲೀನ್ ಅನ್ನ ಅರಹ್ನ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಕ÷್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಖೋ ಖೋ : ಕಾರ್ಕಳ ಜ್ಞಾನಸುಧಾದ ಪವಿತ್ರ ರಾಜ್ಯಮಟ್ಟಕ್ಕೆ ಆಯ್ಕೆ

0

 

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ವಿವೇಕ ಪದವಿ ಪೂರ್ವ ಕಾಲೇಜು ಕೋಟ, ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ಪವಿತ್ರಾ ಸರಸ್ವತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಜಂಪ್‌ರೋಪ್ : ಕಾರ್ಕಳ ಜ್ಞಾನಸುಧಾದ 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

 

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ನ್ಯಾಷನಲ್ ಪಿ.ಯು. ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಜಂಪ್‌ರೋಪ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಕಾರ್ತಿಕ್ ಎಲ್.ಎಚ್ ಫ್ರೀಸ್ಟೈಲ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

30ಸೆಕೆಂಡ್ ಡಬಲ್ ಅಂಡರ್‌ನಲ್ಲಿ ಕಾರ್ಕಳ ಜ್ಞಾನಸುಧಾ ಬಾಲಕರ ತಂಡವು (ನಿಖಿಲ್ ಎಂ.ವಿ, ಪೂರ್ವಜ್ ಗೌಡ ವಿ, ಪ್ರಥಮೇಶ್ ಡಿ.ಪಿ ಹಾಗೂ ಎನ್.ನಿಖಿಲ್) ಪ್ರಥಮ ಸ್ಥಾನವನ್ನು, 3 ನಿಮಿಷಾ ಎಂಡುರೆನ್ಸ್ನಲ್ಲಿ ಶಾನ್ವಿ ಎಸ್ ದ್ವಿತೀಯ ಸ್ಥಾನವನ್ನು, 30ಸೆಕೆಂಡ್ ಸ್ಪೀಡ್ ನಲ್ಲಿ ಕಾಜೊಲ್ ಎಂ ಪಿ ದ್ವಿತೀಯ ಸ್ಥಾನವನ್ನು ಪಡೆದು ಒಟ್ಟು 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾದ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

0

 

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತೋಷಿತ್ ಎಸ್ ಬಾಬು 50ಮೀ ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಹಾಗೂ 50ಮೀ ಬ್ರೆಸ್ಟ್‍ಸ್ಟ್ರೋಕ್‍ಲ್ಲಿ ದ್ವಿತೀಯ, ಸುಯಾಶ್ ಎನ್ ಹೆಗ್ಡೆ 100ಮೀ ಬಟರ್‍ಫ್ಲೈಲ್ಲಿನಲ್ಲಿ ಪ್ರಥಮ ಹಾಗೂ 100ಮೀ ಫ್ರೀಸ್ಟೈಲ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು, ಶಶಾಂಕ್ ವಿ 50ಮೀ ಬಟರ್‍ಫ್ಲೈನಲ್ಲಿ ಪ್ರಥಮ ಮತ್ತು 400ಮೀ ಫ್ರೀಸ್ತೈಲ್‍ನಲ್ಲಿ ತೃತೀಯ ಸ್ಥಾನವನ್ನು, ಯು.ಭಕ್ತಿ 50ಮೀ. ಮತ್ತು 100ಮೀ ಬ್ರೆಸ್ಟ್‍ಸ್ಟ್ರೋಕ್‍ನಲ್ಲಿ ಪ್ರಥಮ ಸ್ಥಾನವನ್ನು, ಶ್ರೇಯಾ ಎಸ್.ಆರ್.ಯು 50ಮೀ. ಮತ್ತು 100ಮೀ ಫ್ರೀಸ್ಟೈಲ್‍ನಲ್ಲಿ ಪ್ರಥಮ ಸ್ಥಾನವನ್ನು ಹಾಗೂ 4×100ಮೀ ರಿಲೆಯಲ್ಲಿ ಕಾರ್ಕಳ ಜ್ಞಾನಸುಧಾ ತಂಡವು ಪ್ರಥಮ ಸ್ಥಾನವನ್ನು ಪಡೆದು ಈ ಮೂಲಕ ದಿಗಂತ್ ಎಚ್ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಕ್ಷಕ್ಷರಾದ ಡಾ, ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.