ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇದರ ಅಮೃತ ಮಹೋತ್ಸವದ ಕಾರ್ಯಕ್ರಮದ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾಗಭೂಷಣ ಜೋಶಿ ಮಾಳ, ಕಾರ್ಯಾಧ್ಯಕ್ಷರಾದ ಗಜಾನನ ಮರಾಠೆ, ಪ್ರಧಾನ ಕಾರ್ಯದರ್ಶಿ ಶ್ರೀರಾಮ ಸೇರಿಗಾರ, ಜೊತೆ ಕಾರ್ಯದರ್ಶಿ ನಾಗಭೂಷಣ ಮರಾಠೆ, ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ, ಕೋಶಾಧಿಕಾರಿ ಗೀತಾ, ಸದಸ್ಯರಾದ ರವೀಂದ್ರನಾಥ ಜೋಶಿ, ವೆಂಕಟೇಶ್ ಗೋರೆ, ಮುಖ್ಯ ಶಿಕ್ಷಕರು ಹಳೆ ವಿದ್ಯಾರ್ಥಿ ಸದಸ್ಯರು ಮತ್ತು ಊರಿನವರು ಶಾಲಾಭಿಮಾನಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಕಳ ತಾಲೂಕು ಕುಕ್ಕುಂದೂರು ವಿಜೇತ ವಿಶೇಷ ಶಾಲೆಯ ಮಕ್ಕಳಿಗೆ ಇಂದು ದಾನಿಗಳಾದ ಮಲ್ಲೇಶ್ವರಂ ನಿವಾಸಿ ಬಾಲಕೃಷ್ಣ ಹಾಗೂ ಉಷಾ ಬಾಲಕೃಷ್ಣ ರವರು ನೀಡಿದ ಸಮವಸ್ತ್ರ ಬಟ್ಟೆಗಳು ಹಾಗೂ ತಮ್ಮ ವೈಯಕ್ತಿಕ ಸಹಾಯಧನವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ದೇವರ ಮಕ್ಕಳ ಬಗ್ಗೆ ನಮಗೆ ವಿಶೇಷ ಕಾಳಜಿ ಇದೆ, ಹಿಂದಿನಿಂದಲೂ ಈ ಶಾಲೆಯ ಮಕ್ಕಳಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ ಮುಂದೆಯೂ ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬೆನ್ನು ಹುರಿ ಅಪಘಾತಕ್ಕೆ ಒಳಗಾದ ಬೊಂಡುಕುಮೇರಿ ಸಚಿನ್ ನಾಯ್ಕ್ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ರಾಷ್ಟ್ರಮಟ್ಟದ ಫುಟ್ ಬಾಲ್ ಆಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿದಿಸಿ ಚಿನ್ನದ ಪದಕವನ್ನು ಪಡೆದ ವಿಜೇತ ವಿಶೇಷ ಶಾಲಾ ವಿದ್ಯಾರ್ಥಿಗಳಾದ ಕಿಶೋರ್ ಹಾಗೂ ಪ್ರೀತಿ ಇವರನ್ನು ಗೌರವಿಸಲಾಯಿತು.
ಮುಖ್ಯ ಅಥಿತಿಗಳಾಗಿ ಗ್ಯಾರಂಟಿ ಸಮಿತಿ ಸದಸ್ಯರಾದ ಸಂತೋಷ್ ದೇವಾಡಿಗ, ಪಂಚಾಯತ್ ಸದಸ್ಯರಾದ ರುಕ್ಮಿಯ್ಯ ಶೆಟ್ಟಿಗಾರ್, ಶಾಲಾ ಸಂಸ್ಥಾಪಕಿ ಡಾ.ಕಾಂತಿ ಹರೀಶ್, ಮ್ಯಾನೇಜಿಂಗ್ ಟ್ರಸ್ಟಿ ಹರೀಶ್, ವಿಜೇತ ವಿಶೇಷ ಶಾಲಾ ಹಿತೈಷಿಗಳಾದ ಸತೀಶ್ ಭಂಡಾರಿ, ಶಾಲಾ ಸಿಬ್ಬಂದಿ ವರ್ಗ, ಮುಗ್ಧ ಮಕ್ಕಳು ಉಪಸ್ಥಿತರಿದ್ದರು.
ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಪ್ರಾರ್ಥಮಿಕ ಪೂರ್ವ ವಿಭಾಗದ ಪೋಷಕರಿಗೆ “ಮಿನಿ ಒಲಂಪಿಕ್ಸ್” ಎಂಬ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ “ಫ್ರೆಂಡ್ಸ್ ಪವರ್ ಜಿಮ್ ಅಂಡ್ ಲೇಡೀಸ್ ಫಿಟ್ನೆಸ್ ಹೌಸ್ ಜೋಡಿರಸ್ತೆ” ಸಂಸ್ಥೆಯ ನಿರ್ದೇಶಕ ಮೊಹಮ್ಮದ್ ಅಲಿ ಅವರು ‘ಇಂತಹ ಕಾರ್ಯಕ್ರಮಗಳನ್ನು ವಿದ್ಯಾಸಂಸ್ಥೆಗಳಲ್ಲಿ ಆಯೋಜಿಸುವುದರಿಂದ ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡಾಮನೋಭಾವ ಬೆಳೆಯಲು ಸಹಕಾರಿಯಾಗುತ್ತದೆ’ ಎಂದರು.
ಅಂತೆಯೇ ಮತ್ತೋರ್ವ ಅತಿಥಿಯಾಗಿ ಆಗಮಿಸಿದ ಆಲ್ವಿನ್ ಸೌಂಡ್ಸ್ ಅಂಡ್ ಡೆಕೋರೇಷನ್ ನಕ್ರೆ ಇದರ ಮಾಲಕರಾದ ಶ್ರೀಮತಿ ಜಸಿಂತ ಡಿ ಅಲ್ಮೆಡ ಇವರು ” ಈಗಿನ ಬಿಡುವಿಲ್ಲದ ಸಮಯದಲ್ಲೂ ಆಟ-ಪಾಠಗಳಲ್ಲಿ ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಯಶಸ್ಸಿನಲ್ಲಿಯೇ ಸಂತಸ ಪಡುವ ಪಾಲಕರು ಸ್ವತಃ ಕ್ರೀಡೆಗಳಲ್ಲಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿಯೊಂದಿಗೆ ಸಂಭ್ರಮಿಸಿದ ಕ್ಷಣ ಇಂದಿನದಾಗಿದೆ” ಎಂದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಕೆ. ಬಾಲಕೃಷ್ಣ ರಾವ್, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಪಾಟ್ಕರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಲೊಲಿಟ.ಡಿ. ಸಿಲ್ವ ಹಾಗೂ ಶಿಕ್ಷಕರು, ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಾಲಕರಿಗಾಗಿ ವಿವಿಧ ರೀತಿಯ ಆಟಗಳನ್ನು ಏರ್ಪಡಿಸಿದ್ದು, ಪಾಲಕರು ಉತ್ಸಾಹದಿಂದ ಪಾಲ್ಗೊಂಡು ಮನರಂಜನೆಯೊಂದಿಗೆ ಮಕ್ಕಳಿಗೆ ಸ್ಫೂರ್ತಿಯಾದರು.
ಅಪಪ್ರಚಾರ ನಡೆಸುವವರಿಗೆ ಪಡುಕುಡೂರಿನ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ: ಗೋಪಿನಾಥ ಭಟ್
ಬ್ರಹ್ಮಾಂಡ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ನಕಲಿ ಪರಶುರಾಮ ಪ್ರತಿಮೆ ವಿವಾದದಿಂದ ಕಾರ್ಕಳದಲ್ಲಿ ವರ್ಚಸ್ಸು ಕಳೆದುಕೊಂಡಿರುವವರು ವಿನಾಕಾರಣ ಕಾಂಗ್ರೆಸ್ ನಾಯಕರ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ತಿಳಿಸಿದ್ದಾರೆ.
ಒಂದು ಕಡೆ ಆರೋಪಗಳಿಂದ ಮುಖ ತೋರಿಸಲಾಗದ ಪರಿಸ್ಥಿತಿ, ಮತ್ತೊಂದೆಡೆ ಹೆಚ್ಚುತ್ತಿರುವ ಕಾಂಗ್ರೆಸ್ ಸರಕಾರದ ಜನಪ್ರೀಯತೆಯಿಂದ ಕಂಗಾಲಾಗಿರುವ ಕಾರ್ಕಳ ಬಿಜೆಪಿ ನಾಯಕರು ದಿನಕ್ಕೊಂದು ಸುಳ್ಳುಗಳೊಂದಿಗೆ ಕಾಂಗ್ರೆಸ್ ನಾಯಕರ ವಿರುದ್ದ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ ಎಂದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಯಥೇಚ್ಛವಾಗಿ ಅನುದಾನವನ್ನು ನೀಡುತ್ತಿದ್ದು, ಅದರಂತೆ ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೂ ಅನುದಾನ ಮಂಜೂರಾಗಿದೆ. ರಾಜ್ಯ ಸರ್ಕಾರದ ಅನುದಾನವನ್ನು ನನ್ನದೇ ಸಾಧನೆ ಎಂದು ಬಿಂಬಿಸಿಕೊಳ್ಳಲು ತಿಣುಕಾಡುತ್ತಿರುವ ಶಾಸಕ ಸುನೀಲ್ ಕುಮಾರ್ ತನ್ನ ಹಿಂಬಾಲಕರ ಮೂಲಕ ಕಾಂಗ್ರೆಸ್ ನಾಯಕರ ವಿರುದ್ದ ಹೇಳಿಕೆ ಕೊಡಿಸುತ್ತಿದ್ದಾರೆ.
ಮುನಿಯಾಲು ಪಡುಕುಡೂರು ರಸ್ತೆಯಾಗಲಿ ಅಥವಾ ಕಾರ್ಕಳದ ಯಾವುದೇ ರಸ್ತೆಯಾಗಲಿ ಗುತ್ತಿಗೆ ಪಡೆದುಕೊಂಡವರಿಗೆ ಮಾತ್ರ ಕಾಮಗಾರಿ ನಡೆಸಲು ಸಾಧ್ಯ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಹಿಸದ ಬಿಜೆಪಿ ನಾಯಕರು ಕಾಮಗಾರಿಗೆ ಅಡ್ಡಿಪಡಿಸುವ, ಗುತ್ತಿಗೆದಾರರನ್ನು ಬೆದರಿಸುವ ಕೃತ್ಯಕ್ಕೆ ಇಳಿದಿರುವುದು ಸರಿಯಲ್ಲ. ಕಾರ್ಕಳದಲ್ಲಿ ಎಲ್ಲವೂ ನಾನು ಹೇಳಿದಂತೆ ನಡೆಯಬೇಕು ಎನ್ನುವ ಸರ್ವಾಧಿಕಾರಿ ಧೋರಣೆಯನ್ನು ಶಾಸಕರು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ನೀಡಬೇಕು.
ಶಾಸಕರ ಆಣತಿಯಂತೆ ಹೇಳಿಕೆ ನೀಡುವ ಮೊದಲು ಸುರೇಶ್ ಶೆಟ್ಟಿಯವರು ಪಡುಕುಡೂರು ಮುನಿಯಾಲು ಅಭಿವೃದ್ಧಿಯ ಕುರಿತು ಕಾಳಜಿ ಹೊಂದಲಿ, ಶಾಸಕರ ಕೈಗೊಂಬೆಯಂತೆ ವರ್ತಿಸದೇ ಸ್ವಂತ ಬುದ್ದಿಯಿಂದ ಆಲೋಚಿಸಿ ಊರಿನ ಅಭಿವೃದ್ಧಿಗೆ ಕೈ ಜೋಡಿಸಲಿ, ವಿನಾಕಾರಣ ಪದೇ ಪದೇ ನಮ್ಮ ನಾಯಕರ ವಿರುದ್ದ ಅಪಪ್ರಚಾರಗಳನ್ನು ನಡೆಸುತ್ತಿರುವ ವಿಘ್ನ ಸಂತೋಷಿಗಳಿಗೆ ಪಡುಕುಡೂರಿನ ತಾಯಿ ಭದ್ರಕಾಳಿ ಸದ್ಬುದ್ದಿ ನೀಡಲಿ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬಾಲಿವುಡ್ ಹೀ ಮ್ಯಾನ್ ಎಂದೇ ಖ್ಯಾತಿ ಪಡೆದ, ಹಿರಿಯ ನಟ ಧರ್ಮೇಂದ್ರ ಮೃತಪಟ್ಟಿದ್ದಾರೆ.
ಧರ್ಮೇಂದ್ರ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 89 ವರ್ಷದ ಧರ್ಮೇಂದ್ರ ಅವರನ್ನು ಕೆಲವು ದಿನಗಳ ಹಿಂದೆ ಮುಂಬೈಯ ಬ್ರೀಜ್ ಕ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡ ಅವರನ್ನು ಡಿಸ್‌ಚಾರ್ಚ್ ಮಾಡಲಾಗಿತ್ತು. ಆದರೆ ಇದೀಗ ಅವರು ಮೃಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಇಡಿ ಚಿತ್ರರಂಗವೇ ಕಂಬನಿ ಮಿಡಿದಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಉಡುಪಿ ಇದರ ವತಿಯಿಂದ ಉಡುಪಿಯ ವಿವಿಧ ಕಾಲೇಜುಗಳನ್ನು ಏಕಕಾಲದಲ್ಲಿ ನಡೆದ ಪದವಿಪೂರ್ವ ವಿಭಾಗದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಷಾನ ವಿಭಾಗದ ಸ್ಮೃತಿ ಮರಾಠೆ ಹಾಗೂ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಬ್ರೋವಿನ್ ಅಗೇರಾ ಪ್ರಥಮ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸಿ.ಎ ಕಮಾಲಾಕ್ಷ ಕಾಮತ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು “ವಿದ್ಯಾರ್ಥಿಗಳು ಆತ್ಮ ವಿಶ್ವಾಸದೊಂದಿಗೆ ಮಾನವೀಯತೆ, ಸಾತ್ವಿಕತೆ ಹಾಗೂ ಸಕಾರಾತ್ಮಕ ಚಿಂತನೆಗಳನ್ನು ತಮ್ಮಲ್ಲಿ ಬೆಳೆಸಿಕೊಂಡಾಗ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ” ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕಾರ್ಕಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿರುವ ಗಿರಿಜಮ್ಮರವರು ಮಾತನಾಡಿ “ಪ್ರತಿಯೊಂದು ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ವಿದ್ಯಾರ್ಥಿಯು ತನ್ನಲ್ಲಿ ಅಳವಡಿಸಿಕೊಂಡಾಗ ಆತ ಬದುಕಿನಲ್ಲಿ ಎತ್ತರಕ್ಕೇರಲು ಸಾಧ್ಯ” ಎಂದು ಹೇಳಿದರು.
ಕಾರ್ಯಕ್ರಮದ ಇನ್ನೊರ್ವ ಅತಿಥಿಯಾಗಿದ್ದ ಕ್ಷೇತ್ರ ಸಮನ್ವಯಾಧಿಕಾರಿಯಾಗಿರುವ ಇಂದಿರಾರವರು ಮಾತನಾಡಿ “ವಿಜ್ಞಾನದ ಮೂಲಕ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು”. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಜೋಸ್ನ ಸ್ನೇಹಲತಾರವರು ಮಾತನಾಡಿ “ಪ್ರತಿಯೊಂದು ಮಗುವಿನಲ್ಲಿಯೂ ವೈಜ್ಞಾನಿಕ ಆಲೋಚನೆಗಳು ಇರುತ್ತವೆ. ಅದನ್ನು ಆ ಮಗು ತನ್ನಲ್ಲಿ ಅಳವಡಿಸಿಕೊಂಡಾಗ ಮಾತ್ರ ಆ ಮಗು ವಿಜ್ಞಾನ ಕ್ಷೇತ್ರದಲ್ಲಿ ಮುಂದುವರಿಯಲು ಸಾಧ್ಯ” ಎಂದು ಹೇಳಿದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾಗಿರುವ ಸಂತೋಷ್ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರಾದ ಲಕ್ಷ್ಮಿನಾರಾಯಣ ಕಾಮತ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೋ, ಸಂಸ್ಥೆಯ ಆಪ್ತ ಸಮಾಲೋಚಕಿಯಾಗಿರುವ ಸಿಸ್ಟರ್ ಡಾ. ಶಾಲೆಟ್ ಸಿಕ್ವೇರಾ ಹಾಗೂ ಆಡಳಿತಾಧಿಕಾರಿ ಕಿರಣ್ ಕ್ರಾಸ್ತರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕಿಯಾದ ಶ್ರೀಮತಿ ಅಶ್ವಿನಿ ಪೈ ಸ್ವಾಗತಿಸಿ, ಶ್ರೀಮತಿ ರೇಖಾ ಸಂತೋಷ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಕಾರ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ಉದ್ಘಾಟಿಸಿ ಬೋಳ ಪ್ರಶಾಂತ್ ಕಾಮತ್ ಅಭಿಮತ
ಕ್ಯಾನ್ಸರ್ ಕಾಯಿಲೆ ಇಡೀ ಜಗತ್ತನ್ನು ಆವರಿಸಿದ್ದು, ನಮ್ಮ ದೇಶ ಭಾರತದಲ್ಲೂ ಕೂಡ ಇದರ ಪ್ರಮಾಣ ಏರು ಗತಿಯಲ್ಲಿ ಸಾಗುತ್ತಾ ಇದೆ. ವೈದ್ಯ ವಿಜ್ಞಾನ ಕ್ಯಾನ್ಸರ್ ನಿರ್ಮೂಲನೆಗಾಗಿ ಆವಿಷ್ಕಾರಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದರೂ ಖಚಿತ ಯಶಸ್ಸು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ನ ಕುರಿತಾದ ಜಾಗೃತಿಯನ್ನು ಮೂಡಿಸುವುದೊಂದೇ ಸದ್ಯಕ್ಕೆ ಇರುವ ಪರಿಹಾರ. ಕ್ಯಾನ್ಸರ್ ನ ವಿಧಗಳು ಮತ್ತು ಆರಂಭದ ದೆಸೆಯಲ್ಲಿ ರೋಗಿಗಳು ಅನುಸರಿಸ ಬೇಕಾದ ಎಚ್ಚರಿಕೆ ಮತ್ತು ಸುಲಭ ಪರಿಹಾರ ಗಳನ್ನು ಈ ಜಾಗೃತಿ ಕಾರ್ಯಕ್ರಮಗಳಲ್ಲಿ ತಿಳಿಯುವುದು ಸಾಧ್ಯ ಎಂದು ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಹೇಳಿದರು.
ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಕ್ಯಾನ್ಸರ್ ಮಾಹಿತಿ ಕೇಂದ್ರ ಕಾರ್ಕಳ ನೇತೃತ್ವದಲ್ಲಿ, ಟೀಮ್ ಸಿಂಧೂರ್ ಕಾರ್ಕಳ, ಹೊಸ ಸಂಜೆ ಬಳಗ , ಕಾರ್ಕಳ ಟೈಗರ್ಸ್, ಸೌತ್ ಕೆನರಾ ಫೋಟೋಗ್ರಾಫರ್ಸ್
ಅಸೋಸಿಯೇಷನ್ ಕಾರ್ಕಳ ವಲಯ , ಜೆಸಿಐ ಕಾರ್ಕಳ, ಎಸ್ ವಿಟಿ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಸಹಯೋಗದಲ್ಲಿ ನ.22 ರಂದು ಆಯೋಜಿಸಿದ್ದ ” ಕ್ಯಾನ್ಸರ್ ಜಾಗೃತಿ ಜಾಥಾ ” ಉದ್ಘಾಟಿಸಿ ಮಾತನಾಡಿದರು .
ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ, ಕಾರ್ಕಳ ಜೆಸಿಐ ಅಧ್ಯಕ್ಷೆ ಶ್ವೇತಾ ಎಸ್ ಜೈನ್ , ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್
ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲು , ಕಾರ್ಯದರ್ಶಿ ಶೇಖರ್, ಮನಶ್ಯಾಸ್ತ್ರಜ್ಞೆ ಜ್ಯೇಷ್ಠಲಕ್ಷ್ಮೀ ಮಂಗಳೂರು, ಹೊಸಸಂಜೆ ಬಳಗದ ಅಧ್ಯಕ್ಷ ಆರ್ ದೇವರಾಯ ಪ್ರಭು , ಲಯನ್ಸ್ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ದತ್ತಾತ್ರೇಯ ಹಿರಿಯಂಗಡಿ , ಟೀಮ್ ಸಿಂಧೂರದ ಶೋಭಾ ಭಾಸ್ಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ನಯನಾ ಸ್ವಾಗತಿಸಿದರು. ದಿವ್ಯಶ್ರೀ ಪ್ರಾಸ್ತಾವಿಕ ಮಾತನಾಡಿದರು. ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಅಮೃತಾ ವಂದಿಸಿದರು.
ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ : ಡಾ. ಸುಬ್ರಹ್ಮಣ್ಯ ಭಟ್
ನಿರ್ಧರಿಸಿದ ಗುರಿಯೆಡೆಗೆ ಕನಸನ್ನು ಮಾತ್ರ ಕಾಣದೆ ಅದರಡೆಗೆ ಯೋಜಿತ ಕೆಲಸಗಳನ್ನು ಮಾಡುತ್ತಾ ಸಾಗುವುದು ಮುಖ್ಯ. ಅನಗತ್ಯ ವಿಷಯಗಳಿಂದ ದೂರವಿದ್ದರೆ ಶೈಕ್ಷಣಿಕ ಸಾಧನೆ ಸುಲಭ. ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿರುವ ಜ್ಞಾನಸುಧಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ನನ್ನ ಮನಸ್ಸಿನ ಮಾತುಗಳನ್ನು ಸಾಧನೆಯ ಹಾದಿಯಲ್ಲಿರುವ ಮಕ್ಕಳೆದುರು ಹಂಚಿಕೊಳ್ಳುವ ಅವಕಾಶ ಸಿಕ್ಕಿರುವುದು ಖುಷಿ ತಂದಿದೆ ಎಂದು ಬೈಂದೂರಿನ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.
ಅವರು ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉದಯವಾಣಿ ಮಣಿಪಾಲದ ನಿವೃತ್ತ ಹಿರಿಯ ಉಪಸಂಪಾದಕರಾದ ನಿತ್ಯಾನಂದ ಪಡ್ರೆ ಮಾತನಾಡಿ ಶಿಕ್ಷಣ ಕೇವಲ ಸಂಬಳ ಕೊಡುವ ಉದ್ಯೋಗವನ್ನು ಕೊಡಿಸುವ ಮಾಧ್ಯಮವಾಗದೆ ಜೀವನ ಕಟ್ಟಿಕೊಡುವ ನೈಜ ಶಿಕ್ಷಣವಾಗಬೇಕು ಎಂದು ಅವರು ತನ್ನ ಜೀವನದಲ್ಲಿ ಕಂಡುಕೊಂಡ ನೈಜ ನಿದರ್ಶನಗಳು ಮಕ್ಕಳಿಗೆ ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಮಣಿಪಾಲ್ ಹೈ ಸ್ಕೂಲ್ ಟ್ರಸ್ಟ್ ಸಂಚಾಲಕರಾದ ಪ್ರಕಾಶ್ ಶೆಟ್ಟಿ, ಅಜೆಕಾರು ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ವಿದ್ಯಾವತಿ ಎಸ್ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಮಣಿಪಾಲ ಜ್ಞಾನಸುಧಾ ಉಪ ಪ್ರಾಂಶುಪಾಲರುಗಳಾದ ರವಿ ಜಿ. ಹಾಗೂ ಹೇಮಂತ್, ವಿದ್ಯಾರ್ಥಿ ನಾಯಕರುಗಳಾದ ತನ್ಮಯಿ ಭಟ್ ಮತ್ತು ಅನಿರುದ್ಧ್ ಕಾಮತ್ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಕಳ ಕಡೆಯಿಂದ ಉಡುಪಿ ಕಡೆ ಚಲಿಸುತ್ತಿದ್ದ ಟಿಪ್ಪರ್ ಲಾರಿ ಹಾಗೂ ಉಡುಪಿಯಿಂದ ಕೊಪ್ಪ ಕಡೆಗೆ ಚಲಿಸುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಾರ್ಕಳದ ನೀರೆಜಡ್ಡು ಬಳಿ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತ ಸಹ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಗಾಯಾಳು ನೀಡಿದ ದೂರಿನ ಅನ್ವಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.