Home Blog Page 51

ಕಾರ್ಕಳದ ಆಸ್ತಿ ಜ್ಞಾನಸುಧಾ: ಸುನಿಲ್ ಕುಮಾರ್ ಜ್ಞಾನಸುಧಾದ ಕಾರ್ಯ ರಾಷ್ಟ್ರಕ್ಕೆ ಮಾದರಿ:ಉದ್ಯಮಿ ಪ್ರಕಾಶ್ ಶೆಟ್ಟಿ

0

ಕಾರ್ಕಳದ ಆಸ್ತಿ ಜ್ಞಾನಸುಧಾ : ಸುನಿಲ್ ಕುಮಾರ್

ಜ್ಞಾನಸುಧಾದ ಕಾರ್ಯ ರಾಷ್ಟ್ರಕ್ಕೆ ಮಾದರಿ : ಉದ್ಯಮಿ ಪ್ರಕಾಶ್ ಶೆಟ್ಟಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ

3ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಕಾರ್ಕಳ:ಜ್ಞಾನಸುಧಾ ಕಾರ್ಕಳದ ಆಸ್ತಿಯಾಗಿದ್ದು, ಸಂಸ್ಕಾರ, ಸದ್ವಿಚಾರದ ಅಡಿಪಾಯವನ್ನು ಶಿಕ್ಷಣದ ಜೊತೆಗೆ ನೀಡುತ್ತಿರುವ ಇಲ್ಲಿನ ಕಾರ್ಯ ಶ್ಲಾಘನೀಯ. ಡಾ.ಸುಧಾಕರ್ ಶೆಟ್ಟಿಯವರ ತಂಡದ ಸಂಘಟಿತ ಪ್ರಯತ್ನ ಪ್ರಶಂಸನೀಯ. ವಿದ್ಯಾರ್ಥಿಗಳು ನವಭಾರತವನ್ನು ನಿರ್ಮಿಸುವುದಕ್ಕಾಗಿ ಸಂಕಲ್ಪತೊಡಬೇಕು ಎಂದು ಕ್ಷೇತ್ರದ ಶಾಸಕರಾದ ವಿ.ಸುನಿಲ್ ಕುಮಾರ್ ನುಡಿದರು.

ಅವರು ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಜ್ಞಾನಸುಧ ಸಂಸ್ಥಾಪಕರ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಳಿಗೆ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಎಂ.ಆರ್.ಜಿ.ಗ್ರೂಪ್‌ಗಳ ಸಂಸ್ಥಾಪಕ ಹಾಗೂ ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿಯವರು, ಸಮಾಜದ ಋಣವನ್ನು ತೀರಿಸುವ ಕೆಲಸ ನಮ್ಮಿಂದಾದಾಗ ಬದುಕು ಸಾರ್ಥಕ. ಅಂತಹ ಮಾದರಿಗಳನ್ನು ತೋರಿಸುತ್ತಿರುವ ಜ್ಞಾನಸುಧಾದ ಕಾರ್ಯ ಆದರ್ಶನೀಯ. ಜ್ಞಾನಸುಧಾ ಜ್ಞಾನದ ಭಂಡಾರವಾಗಿದೆ. ಇಲ್ಲಿನ ಕಾರ್ಯ ರಾಷ್ಟ್ರಕ್ಕೆ ಮಾದರಿ. ಡಾ.ಸುಧಾಕರ್ ಶೆಟ್ಟಿಯವರಿಂದ ಶಿಕ್ಷಣದ ಕ್ರಾಂತಿ ನಡೆಯುತ್ತಿದೆ ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕರಾದ ಪ್ರಸನ್ನ ಹೆಚ್. ಐ.ಎ.ಎಸ್. ಮಾತನಾಡುತ್ತಾ, ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿಗೆ ಸಮಯ ಪ್ರಜ್ಞೆ ಮುಖ್ಯ. ನಿರಂತರವಾದ ಓದು ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ. ಹಿಂಜರಿಕೆ ಬಿಟ್ಟು ಗುರಿಕಡೆಗೆ ಗಮನ ಕೊಟ್ಟಾಗಲೇ ವಿದ್ಯಾರ್ಥಿ ಕನಸು ನನಸಾಗಲು ಸಾಧ್ಯ. ಬದ್ದತೆ ಹಾಗೂ ಪೂರ್ವಭಾವಿ ಸಿದ್ಧತೆಯನ್ನು ಒಳಗೊಂಡ ಜ್ಞಾನಸುಧಾದ ವೇಳಾಪಟ್ಟಿಯು ವಿದ್ಯಾರ್ಥಿಯ ಶೈಕ್ಷಣಿಕ ಅಭ್ಯುದಯಕ್ಕೆ ಪೂರಕವಾಗಿದೆ ಎಂದರು.

ಸಂಸ್ಥೆಯ ಪೂರ್ವ ವಿದ್ಯಾರ್ಥಿ ಐ.ಎಂಎಸ್.ಬನಾರಸ್,ವಾರಣಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಗೌತಮ್ ಭಟ್ ಎಂ.ಬಿ.ಬಿ.ಎಸ್. ಎಂ.ಎಸ್. ಎಂ.ಸಿಹೆಚ್.( ಸರ್ಜಿಕಲ್‌ಆಂಕೋಲಜಿ) ಮಾತನಾಡುತ್ತಾ ಕನಸು ದೊಡ್ಡದಾಗಿದ್ದು, ಕಾರ್ಯನಿಷ್ಟೆ ಇದ್ದಾಗ, ಯಶಸ್ಸು ಕಟ್ಟಿಟ್ಟ ಬುತ್ತಿ ಎನ್ನುತ್ತಾ ತಾವು ಕಾಲೇಜಿನಲ್ಲಿ ಕಳೆದ ನೆನಪುಗಳನ್ನು ಹಂಚಿಕೊAಡರು.

ಇದೇ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ 2023-24ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆ.ಇ.ಇ ಅಡ್ವಾನ್ಸ್÷್ಡ ಮೂಲಕ ಐ.ಐ.ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ.ಎ. ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್‌ಗೆ (155) ರೂ,2000/- ದಂತೆ ಭಾರತೀಯ ಸೇನೆಗೆ ರೂ,3,10,000/-ವನ್ನು ದೇಣಿಗೆಯನ್ನು ಹಸ್ತಾಂತರಿಸಲಾಯಿತು. 3ನೇ ಹಂತದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಇದೀಗ 7,47,500ರೂ.ಗಳ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು.

ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ಅನಿಲ್ ಕುಮಾರ್ ಜೈನ್ ವಂದಿಸಿದರು.

ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ

0
ನಿಟ್ಟೆಯಲ್ಲಿ ಕ್ರಿಸ್ಮಸ್ ಆಚರಣೆ
ನಿಟ್ಟೆ: ಕಾರ್ಕಳದ ನಿಟ್ಟೆ ಕ್ಯಾಂಪಸ್ ನಲ್ಲಿ ಕ್ರಿಸ್ ಮಸ್ ಹಬ್ಬವನ್ನು ಡಿ.21ರಂದು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಹಾಯಕ ಧರ್ಮಗುರು ರೆವರೆಂಡ್ ಫಾದರ್ ಲ್ಯಾರಿ ಪಿಂಟೋ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ ಪ್ರೀತಿಯನ್ನು ನೀಡುವ ಮತ್ತು ಹರಡುವ ಮನೋಭಾವದ ಬಗ್ಗೆ ಸ್ಪೂರ್ತಿದಾಯಕ ಚಿಂತನೆ ನಡೆಸುವುದು ಅನುಸರಣೀಯ ಎಂದರು.
ಗೌರವಾನ್ವಿತ ಅತಿಥಿಗಳಾದ ಸೇಂಟ್ ಲಾರೆನ್ಸ್ ಬೆಸಿಲಿಕಾದ ಡಿಎನ್.ವಾಲೇಶ್ ಅರಾನ್ಹಾ ಮತ್ತು ನಿಟ್ಟೆ ಹಾಸ್ಟೆಲ್ ಗಳ ಮಾಜಿ ಹಿರಿಯ ವ್ಯವಸ್ಥಾಪಕ ಜಾನ್ ಡಿಸೋಜಾ ಅವರು ಉತ್ಸವದ ಬಗ್ಗೆ ಮತ್ತು ಸಮುದಾಯಗಳನ್ನು ಒಗ್ಗೂಡಿಸುವಲ್ಲಿ ಅದರ ಪ್ರಾಮುಖ್ಯತೆಯ ಬಗ್ಗೆ ತಮ್ಮ ಹೃತ್ಪೂರ್ವಕ ಆಲೋಚನೆಗಳನ್ನು ಹಂಚಿಕೊಂಡರು.
ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಆಫ್ ಕ್ಯಾಂಪಸ್ ಸೆಂಟರ್ ನ ನಿರ್ದೇಶಕ (ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ) ಎ. ಯೋಗೀಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ತಮ್ಮ ಭಾಷಣದಲ್ಲಿ, ಅವರು ಏಕತೆ, ಸಹಾನುಭೂತಿ ಮತ್ತು ಕ್ರಿಸ್ ಮಸ್ ನ ನಿಜವಾದ ಸಾರದ ಮಹತ್ವವನ್ನು ವಿವರಿಸಿದರು.
ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವು ಹಾಡುಗಾರಿಕೆ, ನಾಟಕಗಳು ಮತ್ತು ಸಾಂಸ್ಕೃತಿಕ ನೃತ್ಯಗಳು ಸೇರಿದಂತೆ ವಿವಿಧ ಪ್ರದರ್ಶನಗಳನ್ನು ಒಳಗೊಂಡಿತ್ತು. ಕೃತಜ್ಞತೆಗಳೊಂದಿಗೆ ಕಾರ್ಯಕ್ರಮವು ಕೊನೆಗೊಂಡಿತು, ನಂತರ ಸಿಹಿತಿಂಡಿಗಳ ವಿತರಿಸಲಾಯಿತು.

ಕಾರ್ಕಳ:ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪ್ರಮಲ್ ಕುಮಾರ್

0

ಕಾರ್ಕಳ:ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪ್ರಮಲ್ ಕುಮಾರ್

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಾರ್ಕಳ ಇದರ ನೂತನ ಅಧ್ಯಕ್ಷರಾಗಿ ಪ್ರಮಲ್ ಕುಮಾರ್ ಆಯ್ಕೆಯಾಗಿದ್ದಾರೆ.ಡಿ.ಆರ್. ರಾಜುರವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪೆರ್ವಾಜೆ ಶ್ರೇ ನಾರಾಯಣಗುರು ಸಭಾಭವನದಲ್ಲಿ ಆಯ್ಕೆ ಪ್ರಕ್ರಿಯೆ ಸಭೆ ನಡೆಯಿತು.

ಸಂಘದ ಹಿರಿಯ ಸದಸ್ಯ,ಉಪಾಧ್ಯಕ್ಷ ಉಪಾಧ್ಯಕ್ಷ ಕೆ. ಗೋಪಾಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.ಇನ್ನೋರ್ವ ಉಪಾಧ್ಯಕ್ಷ ಪ್ರದೀಪ್ ಎನ್. ಆರ್.,ಕಾರ್ಯದರ್ಶಿ ನವೀನ ಎನ್. ಸುವರ್ಣ,ಕೋಶಾಧಿಕಾರಿ ಪ್ರವೀಣ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿಗಳಾದ ಸುಭಾಸ್ ಸುವರ್ಣ,ಶ್ರೀಮತಿ ವಿಶಾಲಾಕ್ಷಿ ರಮೇಶ್,ಲೆಕ್ಕ ಪರಿಶೋಧಕರಾದ ಸುಭೀತ್ ಕುಮಾರ್ ಎನ್.ಆರ್.ಸಂಘಟನಾ ಕಾರ್ಯದರ್ಶಿ ಅಶೋಕ್ ಸುವರ್ಣ ಸಭೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಪ್ರಭಾಕರ್ ಬಂಗೇರ, ವಸಂತ್ ಎಂ., ಶ್ರೀಮತಿ ವಸಂತಿ ಪ್ರವೀಣ್ ಸುವರ್ಣ,ಸದಾನಂದ ಗುತ್ತಬೈಲ್,ಕೆ.ಕೃಷ್ಣ ತೆಳ್ಳಾರು,ವಿಠ್ಠಲ ಪೂಜಾರಿ,ಕೆ.ಪಿ.ಯಜ್ನೇಂದ್ರ,ಲಕ್ಷಣ್,ಅರುಣ್ ಮಾಂಜಾ,ಅಕ್ಷಯ್ ಪಿ. ಬಂಗೇರ,ಭಾರತ್,ಕೀರ್ತೇಶ್ ಕುಕ್ಕುಂದೂರು ಸಭೆಯಲ್ಲಿ ಉಪಸ್ಥಿತರಿದ್ದರು.

 

ಜೇಸಿಐ ಕಾರ್ಕಳ ರೂರಲ್ ಘಟಕದ ಅಧ್ಯಕ್ಷರಾಗಿ ಅರುಣ್ ಪೂಜಾರಿ ಮಾಂಜ, ಕಾರ್ಯದರ್ಶಿಯಾಗಿ ಚಿನ್ಮಯಿ ಶೆಣೈ

0

ಜೇಸಿಐ ಕಾರ್ಕಳ ರೂರಲ್ ಘಟಕದ ಅಧ್ಯಕ್ಷರಾಗಿ ಅರುಣ್ ಪೂಜಾರಿ ಮಾಂಜ, ಕಾರ್ಯದರ್ಶಿಯಾಗಿ ಚಿನ್ಮಯಿ ಶೆಣೈ

ದಶಮಾನೋತ್ಸವದ ಸಂಭ್ರಮದಲ್ಲಿರುವ ಜೇಸಿಐ ಭಾರತದ ವಲಯ 15ರ ಘಟಕವಾದ ಜೇಸಿಐ ಕಾರ್ಕಳ ರೂರಲ್ ಇದರ 2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ ಅರುಣ್ ಪೂಜಾರಿ ಮಾಂಜ ಮತ್ತು ಕಾರ್ಯದರ್ಶಿಯಾಗಿ ಜೇಸಿ ಚಿನ್ಮಯಿ ಶೆಣೈ ಆಯ್ಕೆಯಾಗಿದ್ದಾರೆ.

ಘಟಕದ ಸಾಮಾನ್ಯ ಸಭೆಯಲ್ಲಿ ಆಯ್ಕೆ ಸಮಿತಿ ಅಧ್ಯಕ್ಷ ಜೆಸಿ ಮಂಜುನಾಥ್ ಕೋಟ್ಯಾನ್ ಅವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಈ ಸಂದರ್ಭ ಘಟಕದ ಸ್ಥಾಪಕರಾದ ಜೇಸಿ ಸತೀಶ್ ಪೂಜಾರಿ ಕಳತ್ರಪಾದೆ, ಪೂರ್ವಾಧ್ಯಕ್ಷರುಗಳಾದ ಜೇಸಿ ಶೋಭ ಭಾಸ್ಕರ್, ಜೇಸಿ ಮೋಹನ್ ನಕ್ರೆ, ಜೇಸಿ ಸಂತೋಷ್ ಪೂಜಾರಿ ಮಾಳ, ಜೇಸಿ ವೀಣಾ ರಾಜೇಶ್ ಮತ್ತು ಘಟಕದ ಅಧ್ಯಕ್ಷರಾದ ಜೇಸಿ ಸಂತೋಷ್ ಪೂಜಾರಿ ಮಿಯ್ಯಾರು ಇವರುಗಳು ಉಪಸ್ಥಿತರಿದ್ದರು.

ಕಾರ್ಕಳ ಇನ್ ಶುಭಾರಂಭ ಪ್ರಯುಕ್ತ ‘ಕಾರ್ಕಳ ಸಂಸ್ಕೃತಿ ನೃತ್ಯ ವೈಭವ’ ಸ್ಪರ್ಧೆ ಹೆಸರು ನೋಂದಾಯಿಸಲು ಜನವರಿ 5 ಕೊನೆಯ ದಿನಾಂಕ

0

ಕಾರ್ಕಳ ಇನ್ ಶುಭಾರಂಭ ಪ್ರಯುಕ್ತ ‘ಕಾರ್ಕಳ ಸಂಸ್ಕೃತಿ ನೃತ್ಯ ವೈಭವ’ ಸ್ಪರ್ಧೆ

ಹೆಸರು ನೋಂದಾಯಿಸಲು ಜನವರಿ 5 ಕೊನೆಯ ದಿನಾಂಕ

ಕಾರ್ಕಳ ಪುಲ್ಕೇರಿ ಬೈಪಾಸ್ ನಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿರುವ ‘ಕಾರ್ಕಳ ಇನ್’ ವಾಣಿಜ್ಯ ಸಮುಚ್ಚಾಯ ಹಾಗೂ ಹೋಟೆಲ್ ‘ಅನಘ ಗ್ರ್ಯಾಂಡ್’ ಶುಭಾರಂಭದ ಪ್ರಯುಕ್ತ ಕಾರ್ಕಳ ಸಂಸ್ಕೃತಿ ನೃತ್ಯ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ನೃತ್ಯ ತಂಡಗಳ ಸ್ಪರ್ಧೆಗಳಾಗಿದ್ದು ಇದರಲ್ಲಿ 30 ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ

ಸ್ಪರ್ಧೆಯ ನಿಯಮಗಳು
ಒಂದು ತಂಡಕ್ಕೆ ಗರಿಷ್ಠ 7 ನಿಮಿಷದ ಕಾಲಾವಕಾಶ ನೀಡಲಾಗಿದ್ದು,ಒಂದು ತಂಡದಲ್ಲಿ ಕನಿಷ್ಠ ನಾಲ್ಕು ಸದಸ್ಯಗರಿಗಿಂತ ಹೆಚ್ಚಿನ ಸದಸ್ಯರು ಭಾಗವಹಿಸಬೇಕು.

ಈ ಸ್ಪರ್ಧೆವು ದಿನಾಂಕ 19 ಜನವರಿ ಭಾನುವಾರ ಸಂಜೆ 5:00 ಗಂಟೆಗೆ ಜರಗಲಿದೆ.ಹೆಸರನ್ನು ನೋಂದಾಯಿಸಲು ಕೊನೆಯ ದಿನಾಂಕ ಜನವರಿ 5

ಪ್ರಥಮ ಬಹುಮಾನ ರೂಪಾಯಿ 15,000 ದ್ವಿತೀಯ ಬಹುಮಾನ 10000 ತೃತೀಯ ಬಹುಮಾನ7000 ಒಳಗೊಂಡಿದ್ದು ಹೆಚ್ಚಿನ ಮಾಹಿತಿಗಾಗಿ ಆಶಿಶ್ ಶೆಟ್ಟಿ ಹಾಗೂ ಸುನಿಲ್ ಕೋಟ್ಯಾನ್ ಇವರನ್ನ ಸಂಪರ್ಕಿಸಬಹುದು.
8277392576,9880380305

ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ತಂಡ ಚಾಂಪಿಯನ್

0
ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ತಂಡ ಚಾಂಪಿಯನ್
ಕಾರ್ಕಳ: ನಿಟ್ಟೆಯ ಬಿ.ಸಿ.ಆಳ್ವ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿನಡೆದ ವಿಟಿಯು ಅಂತರ ಕಾಲೇಜು ಮಂಗಳೂರು ವಿಭಾಗ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ಚಾಂಪಿಯನ್ ಶಿಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಮಂಗಳೂರು ವಿಭಾಗದ ವಿಟಿಯು ಸಂಯೋಜಿತ ಕಾಲೇಜುಗಳಿಂದ ಒಟ್ಟು 18 ತಂಡಗಳು ಭಾಗವಹಿಸಿದ್ದವು.
ಫೈನಲ್ ನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಕ್ರಿಕೆಟ್ ತಂಡವು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ತಂಡವನ್ನು 4 ರನ್ ಗಳಿಂದ ಸೋಲಿಸಿತು. ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ ಮೆಂಟ್ ರನ್ನರ್ ಅಪ್ ಸ್ಥಾನ ಪಡೆದರೆ, ಮೂಡುಬಿದಿರೆಯ ಎಂಐಟಿಇ ಮತ್ತು ಭಟ್ಕಳದ ಎಐಟಿಎಂ ಕ್ರಮವಾಗಿ 3 ಮತ್ತು 4ನೇ ಸ್ಥಾನಗಳನ್ನು ಪಡೆದುಕೊಂಡಿವೆ.

ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ:ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ

0

ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ
ಇಂಗ್ಲಿಷ್ ಪ್ರಬಂಧ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ

ಉಡುಪಿ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ ಸ್ಥಾನವನ್ನು ಹಾಗೂ ಪ್ರಥಮ ವಿಜ್ಞಾನ ವಿಭಾಗದ ಜಾಹ್ನವಿ ಜೆ. ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಇವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.

ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು

0

ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು.

ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ಸಪ್ತಸ್ವರ ವೇದಿಕೆ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜರುಗಿತು.

ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ ಎಸ್ ರವರು ” ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ. ” ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ ಶ್ರೀ ಮಾರುತಿ ರವರು” ಗ್ರಾಮಾಂತರ ಭಾಗದಲ್ಲಿ ಇಂತಹ ಶೈಕ್ಷಣಿಕ ಸಂಸ್ಥೆಯನ್ನು ಕಟ್ಟಿ ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವುದು ಅದ್ಭುತ ಸಾಧನೆಯೇ ಸರಿ. ವಿದ್ಯಾರ್ಥಿಗಳು ಭಾರತದ ಮುಂದಿನ ಆಶಾಕಿರಣಗಳು, ಭವಿಷ್ಯತ್ತಿನಲ್ಲಿ ದೇಶವನ್ನು ಆಳುವವರು,ಆದುದರಿಂದ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ” ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು “ಒಂದು ಉತ್ತಮ ಧ್ಯೇಯೋದ್ದೇಶವನ್ನು ಇಟ್ಟುಕೊಂಡು ಸಂಸ್ಥೆಯನ್ನು ಏಳು ಮಂದಿ ಸಮಾನ ಮನಸ್ಕರು ಸೇರಿ ಕಟ್ಟಿರುವೆವು. ಅದು ಇಂದು ಹೆಮ್ಮರವಾಗಿ ಬೆಳೆಯುವುದಕ್ಕೆ ಎಲ್ಲರೂ ಕಾರಣೀಕರ್ತರು ” ಎಂದು ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ.ಎಸ್., ಉಪ ನಿರ್ದೇಶಕರಾದ ಶ್ರೀ ಮಾರುತಿ, ತಹಶೀಲ್ದಾರರಾದ ಶ್ರೀ ಪ್ರದೀಪ್ ಆರ್. ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುನೀತಾ ಪೂಜಾರಿ,ಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ. ಹಾಗೂ ಗಣಪತಿ ಭಟ್ ಕೆ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜೀವಶಾಸ್ತ್ರ ವಿಭಾಗದ ಉಪನ್ಯಾಸಕರದ ಶ್ರೀ ಲೋಹಿತ್ ರವರು ನಿರೂಪಿಸಿ ವಂದಿಸಿದರು.

ಸಮಾರೋಪ ಸಮಾರಂಭವು ಅಪರಾಹ್ನ 3.00 ಗಂಟೆಗೆ ನೆರವೇರಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ವರ್ಗೀಸ್ ಪಿ. “ಜೀವನದ ಪ್ರತಿ ಹಂತದಲ್ಲೂ ನಾವು ತಿದ್ದಿಕೊಂಡು ಮುನ್ನಡೆಯಬೇಕು. ಸೋಲು ಗೆಲುವಿಗಿಂತ ನಾನು ಏನು ಕಲಿತೆ ಎಂಬುವುದು ಬಹುಮುಖ್ಯ” ಎಂದು ತಿಳಿಸಿದರು. ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಎಂ ಕೊಡವೂರು ರವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಿದ ಕ್ರಿಯೇಟಿವ್ ಸಂಸ್ಥೆಯ ಎಲ್ಲ ಸಂಸ್ಥಾಪಕರುಗಳಿಗೆ ಅಭಿನಂದನೆಗಳನ್ನು ತಿಳಿಸುತ್ತಾ ವಿದ್ಯಾರ್ಥಿಗಳಿಗೆ ಶುಭನುಡಿಗಳನ್ನಾಡಿದರು.

ಸಹ ಸಂಸ್ಥಾಪಕರಲ್ಲಿ ಓರ್ವರಾದ ಶ್ರೀ ಅಶ್ವತ್ ಎಸ್.ಎಲ್. ರವರು ” ಶಿಕ್ಷಣ ಕೇವಲ ತರಗತಿ ಕೋಣೆಯಲ್ಲಿ ಕಲಿಯುವ ವಿದ್ಯಾರ್ಜನೆಗೆ ಸೀಮಿತವಾಗಿರದೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಉನ್ನತೀಕರಿಸಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಮುಂತಾದ ಎಲ್ಲಾ ವಿಚಾರಗಳನ್ನು ವಿದ್ಯಾರ್ಥಿ ಜೀವನದಲ್ಲಿ ರೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮೌಲ್ಯಯುತ ಬದುಕು ನಮ್ಮೆಲ್ಲರದ್ದಾಗಬೇಕು”.ಎಂದು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಗಣ್ಯರನ್ನು ಸ್ವಾಗತಿಸಿದರು.

ವೇದಿಕೆಯಲ್ಲಿ ಉಪ ನಿರ್ದೇಶಕರಾದ ಶ್ರೀಮಾರುತಿ, ಉಡುಪಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಶ್ರೀಮತಿ ಸುಚೇತಾ,ಸಂಸ್ಥಾಪಕರುಗಳಾದ ಅಮೃತ್ ರೈ, ವಿಮಲ್ ರಾಜ್ ಜಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಪ್ರಿಯಾಂಕ ನಿರೂಪಿಸಿ ವಂದಿಸಿದರು. ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಕನ್ನಡ ಉಪನ್ಯಾಸಕ ಶಿವಕುಮಾರ್ ವಾಚಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.

ಇನ್ನಾ400 ಕೆವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ ಮಂಜುನಾಥ ಭಂಡಾರಿ:ಉದಯ ಶೆಟ್ಟಿ ಸಂತಸ

0

ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ.

ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿ ಅವರು ನಂದಿಕೂರು ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ಹಾಗೂ ಇದರಿಂದ ರೈತರಿಗೆ ಆಗುವ ಅನಾನುಕೂಲವನ್ನು ವಿವರಿಸಿದರು.

ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರನ್ನು ಒತ್ತಾಯಿಸಿದರು.

ಉದಯ ಶೆಟ್ಟಿ ಸಂತಸ:ವಿಧಾನ ಪರಿಷತ್ ನಲ್ಲಿ ಇಂದು ಮಂಜುನಾಥ ಭಂಡಾರಿಯವರು ವಿದ್ಯುತ್ ಪವರ್ ಲೈನ್ ಬಗ್ಗೆ ಮಾಡಿರುವ ಪ್ರಸ್ತಾಪ ಇನ್ನಾದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಿಕ್ಕ ಮೊದಲ ಜಯ ಎಂದು ಉದಯ ಶೆಟ್ಟಿ ಸಂತಸ ತಿಳಿಸಿದ್ದಾರೆ.

ಈ ಯೋಜನೆಯನ್ನು ವಿರೋಧಿಸಿ ಅಹೋ ರಾತ್ರಿ ಹೋರಾಟವನ್ನು ರೈತರೊಂದಿಗೆ ಸೇರಿ ಮಾಡಿದ್ದೆವು. ಈ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಮತ್ತಷ್ಟು ಬಲ ನೀಡಿರುವುದು ಹೋರಾಟಗಾರರಿಗೆ ಸಿಕ್ಕ ಮೊದಲ ಜಯ ಎಂದು ಹೇಳಿದ್ದಾರೆ.

 

 

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: 3ಚಿನ್ನ, 2ಬೆಳ್ಳಿ ಹಾಗೂ 3 ಕಂಚು ಗೆದ್ದ ಕರಾಟೆ ಬುಡೋಕಾನ್ ಆಂಡ್ ಮಾರ್ಷಲ್ ಆರ್ಟ್ಸ್ ಪಲಿಮಾರು ಕರಾಟೆ ತರಗತಿಯ ವಿದ್ಯಾರ್ಥಿಗಳು

0

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: 3ಚಿನ್ನ, 2ಬೆಳ್ಳಿ ಹಾಗೂ 3 ಕಂಚು ಗೆದ್ದ ಕರಾಟೆ ಬುಡೋಕಾನ್ ಆಂಡ್ ಮಾರ್ಷಲ್ ಆರ್ಟ್ಸ್ ಪಲಿಮಾರು ಕರಾಟೆ ತರಗತಿಯ ವಿದ್ಯಾರ್ಥಿಗಳು

ಡಿಸೆಂಬರ್ 8ರಂದು ಕಾರವಾರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕರಾಟೆ ಬುಡೋಕಾನ್ ಆಂಡ್ ಮಾರ್ಷಲ್ ಆರ್ಟ್ಸ್ ಪಲಿಮಾರು ಕರಾಟೆ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ 3ಚಿನ್ನ, 2ಬೆಳ್ಳಿ ಹಾಗೂ 3 ಕಂಚಿನ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

 

ವಿದ್ಯಾರ್ಥಿಗಳಾದ ಕು|ಜಿಯಾ.ಸಿ. ಪೂಜಾರಿ, ವೈಷ್ಣವಿ, ಪ್ರತೀಕ್ ಸುವರ್ಣ ಹಾಗೂ ಪ್ರಿನ್ಸಿಯ ಮತ್ತು ಕರಾಟೆ ಶಿಕ್ಷಕಿ ಸ್ವಾತಿ ಆಚಾರ್ಯ ‌ಇನ್ನಾ ಹಾಗೂ ಮುಖ್ಯ ಶಿಕ್ಷಕ ಸತೀಶ್ ಬೆಲ್ಮನ್ ಇವರೊಂದಿಗೆ.